21.7 C
Bengaluru
Tuesday, January 21, 2020

ಬ್ರಾಹ್ಮೀಯಾಗಿ ಅನುಗ್ರಹಿಸಿದ ಶಾರದೆ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಶೃಂಗೇರಿ: ಜಗನ್ಮಾತೆ ಶಾರದೆ ಗುರುವಾರ ಕೈಯಲ್ಲಿ ಕಮಂಡಲು, ಅಕ್ಷಮಾಲೆ, ಪುಸ್ತಕ, ಪಾಶ ಮತ್ತು ಚಿನ್ಮುದ್ರೆಗಳನ್ನು ಧರಿಸಿ ಹಂಸವಾಹನಾರೂಢಳಾಗಿ, ಬ್ರಹ್ಮನ ಪಟ್ಟದ ರಾಣಿಯಾಗಿ, ಬ್ರಾಹ್ಮೀಯಾಗಿ ಭಕ್ತರನ್ನು ಅನುಗ್ರಹಿಸಿದಳು.

ಭಕ್ತರು ಶ್ರೀ ಶಾರದಾಪರಮೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪಾಲಕರು ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವುದರಲ್ಲಿ ನಿರತರಾಗಿದ್ದರು. ಒಳ ಪ್ರಾಂಗಣವನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು.

ವೇದಗಳ ಪಾರಾಯಣ, ವಾಲ್ಮೀಕಿ ರಾಮಾಯಣ, ದೇವಿ ಭಾಗವತ, ಮಾಧವೀಯ ಶಂಕರ ದಿಗ್ವಿಜಯ, ಲಲಿತೋಪಾಖ್ಯಾನ,ಪ್ರಸ್ಥಾನತ್ರಯ ಭಾಷ್ಯ ಪಾರಾಯಣಗಳು ನೆರವೇರಿದವು.

ಶ್ರೀ ಸೂಕ್ತ, ಭುವನೇಶ್ವರಿ, ದುರ್ಗಾ ಜಪಗಳ ಬಳಿಕ ಜಗನ್ಮಾತೆಯ ಆವಾಸ ಸ್ಥಾನವೆಂದು ಶಾಸ್ತ್ರದಲ್ಲಿ ಹೇಳಿದಂತೆ ಶ್ರೀಚಕ್ರಕ್ಕೆ ನವಾಹರಣ ಪೂಜೆ, ಮಧ್ಯಾಹ್ನ 12ಕ್ಕೆ ಕುಮಾರಿ ಪೂಜೆ, ಸುವಾಸಿನಿ ಪೂಜೆ ಜರುಗಿತು.

ಮಠದಲ್ಲಿ ಸಂಜೆ 6ಗಂಟೆಗೆ ನಡೆದ ರಾಜಬೀದಿ ಉತ್ಸವದಲ್ಲಿ ಮೆಣಸೆ ಗ್ರಾಪಂ ವ್ಯಾಪ್ತಿಯ ಭಕ್ತರು ಉತ್ಸಾಹದಿಂದ ಭಾಗವಹಿಸಿದ್ದರು. ಅಗಳಗಂಡಿ, ಜಯಪುರ, ಮೇಗುಂದ ಹೋಬಳಿ ಭಕ್ತರು, ಗೀರ್ವಾಣಿ ಮಹಿಳಾ ಮಂಡಳಿ ಸದಸ್ಯರು, ಶಾರದಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಕ್ಷೇಮಾಭಿವೃದ್ಧಿ ಸಂಘ, ಹುಲುಗಾರು ಶ್ರೀರಾಮ ಸೇವಾ ಸಮಿತಿ ಮತ್ತಿತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಹೈದರಾಬಾದ್​ನ ವಿದ್ವಾನ್ ಕೆ.ಶಿವಪ್ರಸಾದ್ ಮತ್ತು ಸಂಗಡಿಗರು ವೈವಿಧ್ಯಮಯ ಹಾಡುಗಾರಿಕೆ ನಡೆಸಿಕೊಟ್ಟರು.

ಗುರುಗಳ ಎರಡನೇ ದಿನದ ದರ್ಬಾರ್: ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಮಠದ ಸಂಪ್ರದಾಯಕ್ಕೆ ಅನುಸಾರವಾಗಿ ಕಿರೀಟ, ಆಭರಣ ಧರಿಸಿ ಚಂದ್ರಮೌಳೀಶ್ವರ ತೊಟ್ಟಿಯಿಂದ ಶ್ರೀ ಶಾರದಾಂಬೆ ದೇವಾಲಯಕ್ಕೆ ಆಗಮಿಸಿದರು. ಜಗದ್ಗುರುಗಳು ಜಗನ್ಮಾತೆಗೆ ಅಭಿಮುಖವಾಗಿ ಇರಿಸಿದ ಸಿಂಹಾಸನದಲ್ಲಿ ಆಸೀನರಾದರು. ಸಪ್ತಶತಿ ಪಾರಾಯಣ ಅಧ್ಯಯನ, ಮಂಗಳಾರತಿ, ವೇದಗಳ ಪಾರಾಯಣ, ಪಂಚಾಂಗ ಶ್ರವಣ, ಸಂಗೀತ ಸೇವೆ ನೆರವೇರಿತು. ಪ್ರಸಾದ ವಿನಿಯೋಗದ ಬಳಿಕ ದರ್ಬಾರ್ ಮುಕ್ತಾಯಗೊಂಡಿತು.

ಗಜಾರೂಢಾ ಬ್ರಹ್ಮಚಾರಿಣಿ ಅಲಂಕಾರ

ಕಳಸ: ಹೊರನಾಡಲ್ಲಿ ಶರನ್ನವರಾತ್ರಿಯ ಎರಡನೇ ದಿನ ಗುರುವಾರ ಶ್ರೀ ಅನ್ನಪೂರ್ಣೆಶ್ವರಿಯು ದುರ್ಗಾದೇವಿಯ ಎರಡನೇ ಸ್ವರೂಪ ಗಜಾರೂಢಾ ಬ್ರಹ್ಮಚಾರಿಣಿ ರೂಪದಲ್ಲಿ ಕಂಗೊಳಿಸಿದಳು. ಬೆಳಗ್ಗೆಯಿಂದಲೇ ನವರಾತ್ರಿ ಪೂಜಾ ವಿಧಿ ವಿಧಾನಗಳು ಆರಂಭಗೊಂಡವು. ಸಪ್ತಶತಿ, ವೇದ, ಸುಂದರಕಾಂಡ ಪಾರಾಯಣ, ಕುಂಕುಮಾರ್ಚನೆ ಪೂಜೆ ನೆರವೇರಿದವು. ನಂತರ ಶ್ರೀ ಮಹಾಲಕ್ಷ್ಮೀ ಮೂಲಮಂತ್ರ ಹೋಮ ನಡೆಯಿತು. ಜಿ.ಬಿ.ಗಿರಿಜಾಶಂಕರ ಜೋಷಿ ದಂಪತಿ ಪೂರ್ಣಾಹುತಿ ಸಲ್ಲಿಸಿದರು. ವಿವಿಧ ಪುಷ್ಪ, ಆಭರಣಗಳಿಂದ ಅಲಂಕೃತಗೊಂಡಿದ್ದ ಅನ್ನಪೂರ್ಣೆಶ್ವರಿಯ ದರ್ಶನ ನೂರಾರು ಭಕ್ತರು ಪಡೆದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ ಮೈಸೂರಿನ ವಿದುಷಿ ಎಂ.ಆರ್.ಸುಧಾ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಸಂಜೆ ಬೆಂಗಳೂರಿನ ಎಂ.ಎಸ್.ಸುಧೀಂದ್ರ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ ನಡೆಸಿಕೊಟ್ಟರು.

ಸಂಸ್ಕೃತಿ ರಕ್ಷಣೆ ಧಾರ್ವಿುಕ ಸಂಸ್ಥೆಗಳ ಹೊಣೆ

ಬಾಳೆಹೊನ್ನೂರು: ಧರ್ವವಲಂಬಿತ ಕಾರ್ಯಕ್ರಮಗಳಿಂದ ಅರ್ಥಪೂರ್ಣ ಸಮಾಜ ನಿರ್ಮಾಣ ಸಾಧ್ಯ ಎಂದು ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿ ಕಾರ್ಯಾಧ್ಯಕ್ಷ ವೈ.ಮೋಹನ್​ಕುಮಾರ್ ಹೇಳಿದರು.

ಪಟ್ಟಣದ ಮಾರ್ಕಾಂಡೇಶ್ವರ ದೇವಸ್ಥಾನದ ಮೃತ್ಯಂಬಿಕಾ ದೇವಿ ವೇದಿಕೆಯಲ್ಲಿ ಒಂಭತ್ತನೇ ವರ್ಷದ ದುರ್ಗಾದೇವಿ ಶರನ್ನವರಾತ್ರಿ ಅಂಗವಾಗಿ ಆರಂಭಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.

ಕಲೆ, ಸಂಸ್ಕೃತಿ ನಶಿಸುತ್ತಿರುವ ಇಂದಿನ ದಿನಗಳಲ್ಲಿ ಸಂಸ್ಕೃತಿ, ಸಂಪ್ರದಾಯ ಉಳಿಸಿ, ಬೆಳೆಸುವಂಥ ಕಾರ್ಯಕ್ರಮ ನಡೆಸುವುದು ಧಾರ್ವಿುಕ ಸಂಘಸಂಸ್ಥೆಗಳ ಹೊಣೆ. ಯುವಜನತೆ ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಭಾರತೀಯ ಸನಾತನ ಸಂಸ್ಕೃತಿ ತಿಳಿದುಕೊಳ್ಳಬೇಕಿದೆ ಎಂದರು.

ಸಮಿತಿ ಖಜಾಂಚಿ ಭಾಸ್ಕರ್ ವೆನಿಲ್ಲಾ, ಪ್ರಧಾನ ಕಾರ್ಯದರ್ಶಿ ಎಚ್.ಆರ್.ಆನಂದ್, ಕಾರ್ಯದರ್ಶಿ ಆರ್.ಡಿ.ಮಹೇಂದ್ರ, ಪ್ರಭಾಕರ್ ಪ್ರಣಸ್ವಿ, ಬಿ.ಚನ್ನಕೇಶವ್, ಸೇವಾರ್ಥದಾರ ಎಚ್.ಎಂ.ರವೀಂದ್ರ ಹೆಗ್ಡೆ, ಎಸ್.ಎನ್.ನಾರಾಯಣ ಗೌಡ, ಪ್ರಚಾರ ಸಮಿತಿಯ ದಯಾಕರ್, ಚೈತನ್ಯ ವೆಂಕಿ ಇತರರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮ ಆರಂಭಕ್ಕೂ ಮುನ್ನ ಬಿ.ಎಸ್.ಕುಮಾರಚಂದ್ರ ನಾಯಕ್, ಪ್ರಕಾಶ್ ಆಚಾರ್ಯ, ದಯಾಕರ್ ಸುವರ್ಣ ಸಂಗಡಿಗರು ಭಜನೆ ನಡೆಸಿಕೊಟ್ಟರು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...