More

    ಆಯುಧಗಳನ್ನು ಪೂಜೆ ಮಾಡಿಟ್ಟುಕೊಳ್ಳಿ ಮುಂದೆ ಕೆಲಸಕ್ಕೆ ಬರಲಿವೆ; ಪುತ್ತಿಲ

    ಶಿವಮೊಗ್ಗ: ರಾಗಿಗುಡ್ಡದಲ್ಲಿ ಮತಾಂಧ ಮುಸ್ಲಿಂ ಸಮುದಾಯದಿಂದ ಕಲ್ಲು ತೂರಾಟ ನಡೆದಿದೆ. ಅದಕ್ಕೆ ಪ್ರತಿಯಾಗಿ ಹಿಂದುಗಳು ಆಯುಧಪೂಜೆಯ ದಿನ ಮನೆಗಳಲ್ಲಿರುವ ಆಯುಧಗಳನ್ನು ಪೂಜೆ ಮಾಡಿಟ್ಟುಕೊಳ್ಳಬೇಕು. ಮುಂದೆ ಅವುಗಳು ಕೆಲಸಕ್ಕೆ ಬರಲಿವೆ ಎಂದು ಹಿಂದೂ ಪರ ಮುಖಂಡ ಅರುಣ್‌ಕುಮಾರ್ ಪುತ್ತಿಲ ಗುಡುಗಿದರು.

    ಶುಕ್ರವಾರ ರಾಗಿಗುಡ್ಡದ ಕಲ್ಲು ತೂರಾಟದಿಂದ ಹಾನಿಗೊಳಗಾದ ಮನೆಗಳಿಗೆ ಮತ್ತು ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಅವರು, ಸಮಸ್ತ ಹಿಂದುಗಳ ಜತೆ ನಾವಿದ್ದೇವೆ. ಮುಸ್ಲಿಮರ ಮತಗಳನ್ನು ಸೆಳೆಯಲು ಸರ್ಕಾರ ಮತಾಂಧ ಶಕ್ತಿಗೆ ಕುಮ್ಮಕ್ಕು ನೀಡುತ್ತಿದೆ. ರಾಗಿಗುಡ್ಡದ ಘಟನೆ ಪೂರ್ವನಿಯೋಜಿತ ಕೃತ್ಯ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
    ಈ ಭಾಗದಲ್ಲಿ ಗಣೇಶೋತ್ಸವ ವಿಜೃಂಭಣೆಯಿಂದ ಮಾಡಲಾಗಿದೆ. ವಿಜೃಂಭಣೆಯ ಉತ್ಸವದಿಂದ ಹಿಂದು ಸಮಾಜಕ್ಕೆ ದೊಡ್ಡ ಶಕ್ತಿ ಬರುತ್ತದೆ ಅಂತಾ ದುರ್ಘಟನೆ ನಡೆದಿವೆ. ರೋಹನ್‌ರಾವ್ ಎಂಬಾತನ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಹತ್ತು ಹಲವು ವಾಹನಗಳನ್ನು ಜಖಂ ಗೊಳಿಸಿದ್ದಾರೆ. ವೃದ್ಧ ಶಿಕ್ಷಕ ದಂಪತಿ ಮನೆಗೂ ನುಗ್ಗಿ ಮುಸ್ಲಿಮರು ಹಲ್ಲೆ ಮಾಡಿದ್ದಾರೆ. ಈ ಘಟನೆ ಇಡೀ ನಾಗರಿಕ ಸಮುದಾಯ ತಲೆ ತಗ್ಗಿಸುವಂತೆ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
    ನಮ್ಮಲ್ಲೂ ತಲ್ವಾರ್, ಶಸ್ತ್ರಾಸ್ತ್ರಗಳಿವೆ. ಅಗತ್ಯ ಬಿದ್ದರೆ ಅದೇ ಶಸ್ತ್ರಾಸ್ತ್ರ ಮೂಲಕ ಪ್ರತಿಕ್ರಿಯೆ ಕೊಡಲು ಹಿಂದು ಸಮಾಜ ಸಿದ್ಧವಿದೆ. ನವರಾತ್ರಿ ದಿನ ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡುತ್ತೇವೆ. ಪ್ರತಿ ಮನೆಯಲ್ಲಿಯೂ ಆಯುಧಗಳಿಗೆ ಪೂಜೆ ಮಾಡಬೇಕು ಎಂದು ಕರೆ ನೀಡಿದ ಅವರು, ಸರ್ಕಾರ ತಕ್ಷಣ ಪರಿಹಾರ ಕೊಡಬೇಕು. ಹಾನಿಯಾಗಿರುವ ಮನೆಗಳಿಗೆ ಸಂಪೂರ್ಣ ಖರ್ಚು ಸರ್ಕಾರ ಭರಿಸಬೇಕು ಎಂದು ಆಗ್ರಹಿಸಿದರು.
    ಶಾಂತಿ ಸುವ್ಯವಸ್ಥೆ ನಡುವೆ ಬಹುಸಂಖ್ಯಾತರು ಬದುಕಲು ಕಷ್ಟ ಇದೆ. ಸರ್ಕಾರ ಗಂಭೀರವಾದ ಕಠಿಣ ಕ್ರಮ ಕೈಗೊಳ್ಳಬೇಕು. ಪೊಲೀಸರ ಮೇಲೆಯೂ ಹಲ್ಲೆ ನಡೆದಿದೆ. ಪೊಲೀಸರ ಬಗ್ಗೆ ಗೌರವ ಇದೆ. ಸರ್ಕಾರ ಪೊಲೀಸರ ಅಧಿಕಾರ ಹಸ್ತಕ್ಷೇಪ ಮಾಡುತ್ತಿದೆ. ಇಲಾಖೆಗೆ ಪಾರದರ್ಶಕವಾಗಿ ಕೆಲಸ ಮಾಡಲು ಅವಕಾಶ ಕೊಡಬೇಕು. ಸಮಾಜಕ್ಕೆ ರಕ್ಷಣೆ ಕೊಡಬೇಕಾದ ಪೊಲೀಸ್ ಇಲಾಖೆಗೆ ರಕ್ಷಣೆ ಕೊಡಬೇಕಾದ ಕೆಲಸ ಮಾಡದೇ ಸ್ವತಂತ್ರವಾಗಿ ಕೆಲಸ ಮಾಡಲು ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು. ಹಿಂದು ಪರ ಮುಖಂಡರಾದ ದೀನದಾಯಾಳ್, ಪರಿಸರ ರಮೇಶ್, ಶಶಿ, ನಾರಾಯಣ್, ರಾಘವೇಂದ್ರ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts