More

    ತಹಶೀಲ್ದಾರ್ ಮೇಲೆ ಹಲ್ಲೆ ಯತ್ನ, ಕ್ರಮಕ್ಕೆ ಒತ್ತಾಯ

    ಬೀದರ್: ಭಾಲ್ಕಿ ತಹಶೀಲ್ದಾರ್ ಮೇಲಿನ ಹಲ್ಲೆ ಯತ್ನ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಕಂದಾಯ ಇಲಾಖೆ ನೌಕರರು ಆಗ್ರಹಿಸಿದ್ದಾರೆ.
    ನಗರದಲ್ಲಿ ಸೋಮವಾರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದರು.
    ಭಾಲ್ಕಿ ಪಟ್ಟಣದ ತಹಶೀಲ್ದಾರ್ ಕಚೇರಿಗೆ ಸಂಬಂಧಿಸಿದ ಜಾಗ ಸ್ವಚ್ಛಗೊಳಿಸುವಾಗ ತಮ್ಮ ಮೇಲೆ ಹಲ್ಲೆ ಯತ್ನ ನಡೆದಿದೆ ಎಂದು ತಹಶೀಲ್ದಾರರು ನೌಕರರ ಸಂಘಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಿದರು.
    ಹಲ್ಲೆ ಘಟನೆಗಳಿಂದ ನೌಕರರ ಮನೋಸ್ಥೈರ್ಯ ಕುಸಿಯಲಿದೆ. ಜಿಲ್ಲಾ ಆಡಳಿತ ಈ ರೀತಿಯ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು. ನೌಕರರಿಗೆ ರಕ್ಷಣೆ ಕೊಡಬೇಕು ಎಂದು ಒತ್ತಾಯಿಸಿದರು.
    ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಾದ ಕಿರಣ ಪಾಟೀಲ, ಮಾಣಿಕರಾವ್ ಪಾಟೀಲ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ಪ್ರಚಾರ ಕಾರ್ಯದರ್ಶಿ ಸಂಜೀವ ಸೂರ್ಯವಂಶಿ, ಜಂಟಿ ಕಾರ್ಯದರ್ಶಿ ಗಣಪತಿ ಜಮಾದಾರ್, ಸಾಂಸ್ಕøತಿಕ ಕಾರ್ಯದರ್ಶಿ ಸಾವಿತ್ರಮ್ಮ, ಸಂಘಟನಾ ಕಾರ್ಯದರ್ಶಿ ರೂಪಾದೇವಿ, ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ರಾಜಪ್ಪ ಪಾಟೀಲ, ಬಸವಕಲ್ಯಾಣ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಮೇತ್ರೆ, ಹುಲಸೂರು ತಾಲ್ಲೂಕು ಘಟಕದ ಅಧ್ಯಕ್ಷ ಭೀಮಾಶಂಕರ ಆದೆಪ್ಪ, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಗೋಪಾಲ್ ಹಿಪ್ಪರಗಿ, ಗ್ರಾಮ ಲೆಕ್ಕಿಗರ ಸಂಘದ ಅಧ್ಯಕ್ಷ ಪರತಪ್ಪ ತಳವಾಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೂರ್ಯಕಾಂತ ಸುಂಟೆ, ಜಿಲ್ಲೆಯ ಕಂದಾಯ ಇಲಾಖೆಯ ನೂರಾರು ನೌಕರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts