More

  ಮಕ್ಕಳ ಮೇಲೆ ಪಾಲಕರ ನಿಗಾ ಇರಲಿ

  ಬೀದರ್: ಮಕ್ಕಳ ಚಟುವಟಿಕೆಗಳ ಮೇಲೆ ಪಾಲಕರು ನಿಗಾ ವಹಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹೇಳಿದರು.
  ಇಲ್ಲಿಯ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಆಯೋಜಿಸಿದ್ದ ದಿ ಹನಿ ಬೀಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿ, ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡಬೇಕು. ಅವರಲ್ಲಿ ಸದ್ಗುಣಗಳನ್ನು ಬೆಳೆಸಬೇಕು ಎಂದು ತಿಳಿಸಿದರು.
  ಮೊಬೈಲ್‍ನಿಂದ ಆದಷ್ಟು ದೂರ ಇರಿಸಬೇಕು. ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗಾಗಿ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಲು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
  ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಜತೆಗೆ ಪಾಲಕರ ಪಾತ್ರವೂ ಬಹಳ ಮಹತ್ವದ್ದಾಗಿದೆ ಎಂದು ಉದ್ಘಾಟನೆ ನೆರವೇರಿಸಿದ ಸಹಾಯಕ ಕೃಷಿ ಅಧಿಕಾರಿ ಆರತಿ ಪಾಟೀಲ ನುಡಿದರು.
  ನೃತ್ಯ, ಗಾಯನ, ರೂಪಕ ಸೇರಿದಂತೆ ಮಕ್ಕಳು ಪ್ರದರ್ಶಿಸಿದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಸಭಿಕರ ಗಮನ ಸೆಳೆದವು.
  ನಿರಂತರ ಫೌಂಡೇಷನ್ ಅಧ್ಯಕ್ಷ ನಿರಂಜನ್ ಶೀಲವಂತ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಣ ಇಲಾಖೆಯ ಉಪ ಯೋಜನಾಧಿಕಾರಿ ಗೋಪಾಲರಾವ್ ಪಡವಳಕರ್, ಸಿದ್ಧರಾಮಪ್ಪ ಮಣಗೆ, ಪ್ರೀತಿ ಖೇಣಿ, ಶಾಲೆಯ ಪ್ರಾಚಾರ್ಯೆ ಲಕ್ಷ್ಮಿ ಮುಗಳಿ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts