More

    ಶ್ರದ್ಧೆಯ ಓದಿನಿಂದ ಪರೀಕ್ಷೆಯಲ್ಲಿ ಯಶಸ್ಸು

    ಬೀದರ್: ಶ್ರದ್ಧೆಯ ಓದಿನಿಂದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ಸು ಗಳಿಸಬಹುದು ಎಂದು ಹಿರಿಯ ಸಾಹಿತಿ ಭಾರತಿ ವಸ್ತ್ರದ್ ಹೇಳಿದರು.
    ಋಷಿಕೇಶ ಶಿಕ್ಷಣ ಸಂಸ್ಥೆ ಸಂಚಾಲಿತ ನಗರದ ಅರುಣೋದಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಉತ್ತಮ ಅಂಕ ಗಳಿಸಲು ವಿದ್ಯಾರ್ಥಿಗಳು ಯೋಜನಾ ಬದ್ಧವಾಗಿ ವ್ಯಾಸಂಗ ಮಾಡಬೇಕು. ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸಬೇಕು ಎಂದು ತಿಳಿಸಿದರು.
    ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು. ವ್ಯಾಕರಣ ದೋಷವಿಲ್ಲದಂತೆ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಹೇಳಿದರು.
    ಅಧ್ಯಕ್ಷತೆ ವಹಿಸಿದ್ದ ಶಾಲೆಯ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ ಮಾತನಾಡಿ, ನಿರ್ದಿಷ್ಟ ಗುರಿ ಹಾಗೂ ಛಲವಿದ್ದರೆ ಏನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.
    ವಿದ್ಯಾರ್ಥಿ ಜೀವನ ಬಹಳ ಅಮೂಲ್ಯವಾದದ್ದು. ಹೀಗಾಗಿ ವಿದ್ಯಾರ್ಥಿಗಳು ಅದನ್ನು ವ್ಯರ್ಥ ಮಾಡಿಕೊಳ್ಳಬಾರದು. ಕಠಿಣ ಪರಿಶ್ರಮ ವಹಿಸಿ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸಬೇಕು. ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.
    ಮುಖ್ಯಶಿಕ್ಷಕಿ ಈಶ್ವರಿ ಬೇಲೂರೆ, ಶಿಕ್ಷಕಿ ನೀಲಮ್ಮ ಗಜಲೆ, ವಿದ್ಯಾರ್ಥಿ ಲಿಂಗರಾಜ ಶಿವಕುಮಾರ ಮಾತನಾಡಿದರು.
    ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ಯಾಡ್ ನೆನಪಿನ ಕಾಣಿಕೆಯಾಗಿ ನೀಡಲಾಯಿತು. ಶಿಕ್ಷಕರಾದ ಮಾರುತೆಪ್ಪ, ಸುಮೀತ್, ಸಾರಿಕಾ, ಪಲ್ಲವಿ, ಜ್ಯೋತಿ, ಪೂಜಾರಾಣಿ, ಶೈಲಜಾ, ಸುಜಾತಾ, ಭಾಗ್ಯಶ್ರೀ, ಚಂದ್ರಕಲಾ, ಸುನಿತಾ, ಪೂಜಾ, ಅಲ್ಕಾವತಿ ಇದ್ದರು.
    ವೈಷ್ಣವಿ ಜಗನ್ನಾಥ ಸ್ವಾಗತಿಸಿದರು. ಅನಿತಾ ರಾಜಕುಮಾರ ನಿರೂಪಿಸಿದರು. ಅಭಿಷೇಕ ಚಂದ್ರಕಾಂತ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts