More

    ನಾರಾಯಣಗೌಡ ಬೀದರ್ ಪ್ರವಾಸ

    ಬೀದರ್: ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಎರಡು ದಿನಗಳ ಭೇಟಿಗಾಗಿ ಶುಕ್ರವಾರ (ಏ.12) ಬೀದರ್‍ಗೆ ಬರಲಿದ್ದಾರೆ ಎಂದು ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ್ ತಿಳಿಸಿದ್ದಾರೆ.
    ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಆಗ್ರಹಿಸಿ ರಾಜ್ಯ ರಾಜಧಾನಿಯಿಂದ ಹೋರಾಟ ಆರಂಭಿಸಿದ ನಂತರ ನಾರಾಯಣಗೌಡರ ಜಿಲ್ಲೆಯ ಮೊದಲ ಭೇಟಿ ಇದಾಗಿದೆ ಎಂದು ಹೇಳಿದ್ದಾರೆ.
    ಏ. 12 ರಂದು ಮಧ್ಯಾಹ್ನ 12ಕ್ಕೆ ಕರ್ನಾಟಕ-ತೆಲಂಗಾಣ ಗಡಿಯ ಶಹಾಪುರ ಗೇಟ್ ಸಮೀಪ ನಾರಾಯಣಗೌಡರನ್ನು ಸ್ವಾಗತಿಸಿ ಬರಮಾಡಿಕೊಳ್ಳಲಾಗುವುದು. ಅಂದು ಮಧ್ಯಾಹ್ನ 1ಕ್ಕೆ ನಗರದ ಇನ್‍ಸ್ಪೈರ್ ಹೊಟೇಲ್‍ನಲ್ಲಿ ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆ ಹಾಗೂ ಗಡಿ ಸಮಸ್ಯೆ ಕುರಿತು ವೇದಿಕೆಯ ಜಿಲ್ಲಾ ಪ್ರಮುಖರ ಜತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
    ಏ. 13 ರಂದು ಬೆಳಿಗ್ಗೆ 10ಕ್ಕೆ ನಗರದ ಶಿವಾ ಇಂಟರ್‍ನ್ಯಾಷನಲ್ ಸಭಾಂಗಣದಲ್ಲಿ ವೇದಿಕೆಯ ಜಿಲ್ಲಾ, ತಾಲ್ಲೂಕು ಪದಾಧಿಕಾರಿಗಳು, ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ಅಭಿಯಾನ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
    ಬೀದರ್ ಜಿಲ್ಲೆಯಲ್ಲಿ ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆ, ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸುವುದು ಸೇರಿದಂತೆ ವಿವಿಧ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಸಭೆಯಲ್ಲಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದ 100 ಸ್ವಯಂ ಸೇವಕರು ಕರ್ನಾಟಕ ರಕ್ಷಣಾ ವೇದಿಕೆಗೆ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ.
    ವೇದಿಕೆ ಜಿಲ್ಲಾ, ತಾಲ್ಲೂಕು ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts