More

  ಸಾಗರ್ ಖಂಡ್ರೆ ನಾಮಪತ್ರ ಸಲ್ಲಿಕೆ

  ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆ ಅವರು ನಗರದಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
  ತಂದೆ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಮ್ ಖಾನ್, ಮಾಜಿ ಸಚಿವ ರಾಜಶೇಖರ ಪಾಟೀಲ್, ಮಾಜಿ ಶಾಸಕ ಅಶೋಕ ಖೇಣಿ ಅವರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಗೋವಿಂದರಡ್ಡಿ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
  ಸಾಗರ್ ಖಂಡ್ರೆ ಅವರು ಮಂಗಳವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ಬುಧವಾರ ಶಕ್ತಿ ಪ್ರದಶನದೊಂದಿಗೆ ಇನ್ನೊಂದು ನಾಮಪತ್ರವನ್ನು ಸಲ್ಲಿಸಿದರು. ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರೋಡ್ ಶೋ ನಡೆಸಿ ಉಮೇದುವಾರಿಕೆಯನ್ನು ಸಲ್ಲಿಸಿದರು. ನಂತರ ಮಧ್ಯಾಹ್ನ ಗಣೇಶ ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಿತು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts