More

    ಚುನಾವಣೆ ಪ್ರಜಾಪ್ರಭುತ್ವದ ಹಬ್ಬ

    ಬೀದರ್: ಚುನಾವಣೆ ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವಾಗಿದೆ. ಕಡ್ಡಾಯವಾಗಿ ಮತದಾನ ಮಾಡಿ ಎಲ್ಲರೂ ಈ ಹಬ್ಬವನ್ನು ಅದ್ದೂರಿಯಾಗಿ ಆಚರಿಸಬೇಕು ಎಂದು ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ, ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ್ ಹೇಳಿದರು.
    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಜನರು ಹೆಚ್ಚಿನ ಮತದಾನ ಮಾಡಲು ಸ್ವೀಪ್ ಸಮಿತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಿಗೆ ಮತದಾನ ನಮ್ಮದು ಎನ್ನುವ ಸಂದೇಶ ನೀಡಿ ಎಂದು ಹೇಳಿದರು.
    ಕಡಿಮೆ ಮತದಾನವಾದ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಅಧಿಕಾರಿಗಳನ್ನು ನಿಯೋಜನೆ ಮಾಡಿ ಹೆಚ್ಚಿನ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹೆಚ್ಚು ಮತದಾನವಾಗುವಂತೆ ಮಾಡಬೇಕು. ನಮ್ಮ ಮನೆಯ ಕಾರ್ಯಕ್ರಮ ಇದ್ದಾಗ ನಾವೇ ಹೋಗಿ ಆಮಂತ್ರಣ ಕೊಡುವ ರೀತಿ ಪ್ರಜಾಪ್ರಭುತ್ವದ ಹಬ್ಬವನ್ನು ನಮ್ಮ ಮನೆಯ ಸಮಾರಂಭದಂತೆ ಆಚರಣೆ ಮಾಡಬೇಕು. ಬೀದರ್ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಈ ಸಲ ಶೇ. 75 ರಷ್ಟು ಮತದಾನವಾಗುವಂತೆ ನೋಡಿಕೊಳ್ಳಬೇಕು ಎಂದರು.
    ಜಿಲ್ಲೆಯಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಸರಿಯಾಗಿ ಮಾಡಲಾಗಿದೆ. ಇನ್ನು ಕೆಲ ದಿನ ಸಮಯ ಇರುವುದರಿಂದ ಕಡಿಮೆ ಮತದಾನವಾದ ಕಡೆಗೆ ಜನರಲ್ಲಿ ಮತದಾನ ಜಾಗೃತಿ ಮೂಡಿಸಬೇಕು. ಕೆಲಸದ ನಿಮಿತ್ತ ಬೇರೆ ಕಡೆ ಹೋದ ಮತದಾರರ ಹೆಸರುಗಳನ್ನು ಪಟ್ಟಿಮಾಡಿ ಅವರಿಗೆ ಮೇ 7ರಂದು ಬಂದು ಮತದಾನ ಮಾಡಲು ತಿಳಿಸಬೇಕು. ಮತಗಟ್ಟೆಗಳಲ್ಲಿ ಕುಡಿಯುವ ನೀರು, ಶೌಚಗೃಹ ಸೇರಿ ಇನ್ನಿತರ ಮೂಲಭೂತ ಸೌಕರ್ಯಗಳಿರುವಂತೆ ನೋಡಿಕೊಳ್ಳಬೇಕು. ವಿಶೇಷವಾಗಿ ಅಂಗವಿಕಲರಿಗೆ ಮತದಾನ ಕೇಂದ್ರದಲ್ಲಿ ವ್ಯವಸ್ಥೆ ಮಾಡಬೇಕು ಎಂದರು.

    ಜಿಪಂ ಸಿಇಒ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಗಿರೀಶ್ ಬದೋಲೆ ಮಾತನಾಡಿದರು. ಸಭೆಗೂ ಮುನ್ನ ವಸ್ತ್ರದ್ ಅವರು ಈ ಹಿಂದೆ ಕಡಿಮೆ ಮತದಾನವಾದ ನಗರದಲ್ಲಿರುವ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಕಡಿಮೆ ಮತದಾನವಾದ ಮತಗಟ್ಟೆಗಳನ್ನು ದತ್ತು ಪಡೆದು ಹೆಚ್ಚಿನ ಮತದಾನವಾಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಮತದಾನಕ್ಕೆ ಇನ್ನೂ ಕೆಲ ದಿನ ಅವಕಾಶ ಇರುವುದರಿಂದ ಹೆಚ್ಚಿನ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ತಾಪಂ ಇಒ ಹಾಗೂ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಬಿಎಲ್ಒಗಳೊಂದಿಗೆ ಸಭೆ ನಡೆಸಿ ವಲಸೆ ಹೋದವರನ್ನು ಸಂಪಕರ್ಿಸಿ ಅವರನ್ನು ಮತದಾನ ಮಾಡುವಂತೆ ತಿಳಿಹೇಳಬೇಕು ಎಂದರು.
    ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಡಾ.ಗೌತಮ ಅರಳಿ, ಸಮಾಜ ಕಲ್ಯಾಣ ಇಲಾಖೆ ಸಿಂಧು ಎಚ್.ಎಸ್., ಡಿಡಿಪಿಯು ಚಂದ್ರಕಾಂತ ಶಾಬಾದಕರ್, ಡಿಎಚ್ಒ ಡಾ.ಧ್ಯಾನೇಶ್ವರ ನೀರಗುಡೆ, ಜಿಲ್ಲಾ ಕೈಗಾರಿಕಾ ಇಲಾಖೆ ಸುರೇಖಾ, ಡಿಡಿಪಿಐ ಸಲೀಂ ಪಾಶಾ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅವಿನಾಶ ಹಾಗೂ ವಿವಿಧ ಇಲಾಖೆ ಅಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts