More

    ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

    ಬೀದರ್: ರಾಜ್ಯ ಸರ್ಕಾರಿ ನೌಕರರ ಕೇಂದ್ರ ಸಂಘವು ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 90 ಹಾಗೂ ಅದಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಿದೆ.
    ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ ಅಥವಾ ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯ ಕಾಯಂ ನೌಕರರಾಗಿರಬೇಕು ಎಂದು ಸಂಘದ ರಾಜ್ಯ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ತಿಳಿಸಿದ್ದಾರೆ.
    ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕಗೊಂಡ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ ಎಂದು ಹೇಳಿದ್ದಾರೆ.
    ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಗಳು ಅಗತ್ಯ ಮಾಹಿತಿ ಹಾಗೂ ಸಂಘದ ಜಿಲ್ಲಾ, ತಾಲ್ಲೂಕು ಹಾಗೂ ಯೋಜನಾ ಶಾಖೆ ಅಧ್ಯಕ್ಷರಿಂದ ದೃಢೀಕರಿಸಿದ ದಾಖಲೆಗಳನ್ನು ಅಪ್‍ಲೋಡ್ ಮಾಡಬೇಕು ಎಂದು ತಿಳಿಸಿದ್ದಾರೆ.
    ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನವಾಗಿದ್ದು, ಪರೀಕ್ಷೆಯಲ್ಲಿ ಸಾಧನೆಗೈದ ನೌಕರರ ಮಕ್ಕಳು ತಪ್ಪದೆ https://bit.ly/ksgea2024pp ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಹೇಳಿದ್ದಾರೆ.
    ಹೆಚ್ಚಿನ ಮಾಹಿತಿಗೆ ಸಂಘದ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 080-22354783/84, 9902135813, ಭಾಲ್ಕಿ ತಾಲ್ಲೂಕು ಅಧ್ಯಕ್ಷ ರಾಜಪ್ಪ ಪಾಟೀಲ (9886538318), ಔರಾದ್ ತಾಲ್ಲೂಕು ಅಧ್ಯಕ್ಷ ರಾಜಕುಮಾರ ಉದಗಿರೆ (9481177111), ಹುಲಸೂರ ತಾಲ್ಲೂಕು ಅಧ್ಯಕ್ಷ ಭೀಮಾಶಂಕರ ಆದೆಪ್ಪ (9739836856), ಬಸವಕಲ್ಯಾಣ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಮೇತ್ರೆ (9591000848), ಚಿಟಗುಪ್ಪ ತಾಲ್ಲೂಕು ಅಧ್ಯಕ್ಷ ರಾಜಕುಮಾರ ಬೇಲೂರೆ (8971677384), ಕಮಲನಗರ ತಾಲ್ಲೂಕು ಅಧ್ಯಕ್ಷ ಲಿಂಗಾನಂದ ಮಹಾಜನ್ (7760555190), ಹುಮನಾಬಾದ್ ತಾಲ್ಲೂಕು ಅಧ್ಯಕ್ಷ ನಾಗಶೆಟ್ಟಿ ಡುಮಣಿ (9448219906) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts