More

    ಎನ್ಇಪಿ ರದ್ದು ಮಾಡಬೇಡಿ

    ಬೀದರ್: ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಹಿಂಪಡೆಯಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
    ಎಬಿವಿಪಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ರ್ಯಾಲಿ ನಡೆಸಿ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ನಿರ್ಧಾರ ಮಕ್ಕಳ ಉಜ್ವಲ ಭವಿಷ್ಯಕ್ಕೆ ಮಾರಕವಾಗಲಿದೆ. ಹೀಗಾಗಿ ಯಾವ ಕಾರಣಕ್ಕೂ ಎನ್ಇಪಿ ರದ್ದು ಮಾಡಬಾರದು ಎಂದು ಆಗ್ರಹಿಸಿದರು.
    ಬ್ರಿಟಿಷರ ಶಿಕ್ಷಣ ನೀತಿಯಿಂದ ಮುಕ್ತರಾಗಿ ಭಾರತೀಯ ಶಿಕ್ಷಣ ಪಡೆಯುವಂತಾಗಬೇಕು ಎಂಬ ಆಶಯದೊಂದಿಗೆ ಕೇಂದ್ರ ಸರ್ಕಾರ ಎನ್ಇಪಿ ಜಾರಿಗೆ ತಂದಿದ್ದು, ಕೌಶಲಯುಕ್ತ ಯುವಶಕ್ತಿ ನಿರ್ಮಾಣಕ್ಕೆ ಇದು ಅಗತ್ಯವಾಗಿದೆ. ದೇಶದಲ್ಲಿ ಎನ್ಇಪಿ ಮೊದಲ ಬಾರಿಗೆ ಅನುಷ್ಠಾನಗೊಳಿಸಿದ ರಾಜ್ಯ ಕರ್ನಾಟಕ. ಯಾವುದೇ ಕಾರಣಕ್ಕೆ ಹಿಂಪಡೆಯಬಾರದು ಎಂದು ಒತ್ತಾಯಿಸಿದರು.
    ಚುನಾವಣಾ ಪ್ರಣಾಳಿಕೆಯಲ್ಲಿ ಎನ್ಇಪಿ ತೆಗೆಯುವುದಾಗಿ ಹೇಳಿದ್ದರಿಂದ ಹೊಸ ಶಿಕ್ಷಣ ನೀತಿ ಬದಲಾಯಿಸಲು ಕಾಂಗ್ರೆಸ್ ಸರ್ಕಾರ ಹೊರಟಿದೆ. 20-25 ವರ್ಷ ಗಮನದಲ್ಲಿ ಇರಿಸಿಕೊಂಡು ಇಡೀ ದೇಶಕ್ಕೆ ಅನ್ವಯಿಸುವಂಥ ಒಂದೇ ಬಗೆಯ ಶಿಕ್ಷಣ ಪದ್ಧತಿ ಜಾರಿಗೆ ತರಲಾಗಿದೆ. ರಾಜ್ಯ ಸರ್ಕಾರ ರಾಷ್ಟ್ರೀಯತೆ ತುಂಡರಿಸಿ ಪ್ರತ್ಯೇಕದತ್ತ ಹೆಜ್ಜೆ ಇರಿಸುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದರು.
    ಇನ್ಇಪಿ ರದ್ದುಗೊಳಿಸಿದರೆ ರಾಜ್ಯದ ಬೆಳೆವಣಿಗೆಗೆ ಹಿನ್ನಡೆಯಾಗಲಿದೆ. ಕೂಡಲೇ ಸರ್ಕಾರ ಈ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
    ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ ರಾಕಲೆ, ರಾಜ್ಯ ಕಾರ್ಯಕಾರಿ ಸದಸ್ಯ ಸಾಯಿ ಭೋಸ್ಲೆ, ತಾಲೂಕು ಸಂಚಾಲಕ ಅಂಬರೀಶ್ ಬಿರಾದಾರ್, ಪ್ರಮುಖರಾದ ನಾಗರಾಜ, ಅಮರ ಸ್ವಾಮಿ, ಅಭಿಷೇಕ ಶಂಭು, ಮಹೇಶ ಆನಂದ, ಸಿದ್ದರಾಮೇಶ್ವರ, ಪವನ್ ಪಾಂಚಾಳ, ಶಿವಶರಣು ಸಂಗಮೇಶ ಮೂಳೆ, ಪೂಜಾ, ಅಂಬಿಕಾ ಇತರರಿದ್ದರು. ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts