More

    ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರ ವಹಿಸಿ

    ಬೀದರ್: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಲ್ಲ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದ್ದಾರೆ. ಇನ್ನೆರಡು ವಾರ ನೀರಿನ ಸಮಸ್ಯೆ ಆಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರಡ್ಡಿ ಹೇಳಿದರು.
    ಡಿಸಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಜೂನ್ ನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ ಇನ್ನು 15 ದಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದರು.
    ಜಿಲ್ಲೆಯ ಎಲ್ಲ ತಾಲೂಕಿನ 102 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆಯಲಾಗಿದೆ. 47 ಕೊಳವೆಬಾವಿ ಮೋಟಾರ್ ರಿಪೇರಿ, 24 ಕಡೆ ಹೊಸ ಪೈಪ್ ಲೈನ್ ಮಾಡಲಾಗಿದೆ. ಬಾಡಿಗೆ ಪಡೆದ ಖಾಸಗಿ ಕೊಳವೆಬಾವಿ ಮತ್ತು ಟ್ಯಾಂಕರ್ಗಳ ಬಿಲ್ ಪಡೆದು ತಕ್ಷಣ ಹಣ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
    ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ್ ಬದೋಲೆ ಮಾತನಾಡಿ, ಜಿಪಂನಿಂದ ಜಿಲ್ಲೆಯ 114 ಕಡೆ ಕೊಳವೆಬಾವಿ ಡ್ರಿಲ್ಲಿಂಗ್ ಮಾಡಲಾಗಿದೆ. ಆಡಳಿತಾತ್ಮಕ ಅನುಮೋದನೆ ಪಡೆದು ಬಿಲ್ ಪಾವತಿಸಲು ಕ್ರಮ ವಹಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಓವರ್ಹೆಡ್ ಟ್ಯಾಂಕ್ ಗಳನ್ನು ಶುಚಿಗೊಳಿಸಬೇಕು ಎಂದರು.
    ಸಹಾಯಕ ಆಯುಕ್ತ ಲವೀಶ್ ಓರ್ಡಿಯಾ, ಎಲ್ಲ ತಾಲೂಕಿನ ತಹಸೀಲ್ದಾರ್, ತಾಪಂ ಇಒ, ಎಇಇ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts