More

  ಅಭಿವೃದ್ಧಿಗಾಗಿ ಬಿಜೆಪಿ ಗೆಲ್ಲಿಸಿ

  ಬೀದರ್: ವಿಧಾನ ಪರಿಷತ್ ಚುನಾವಣೆಯನ್ನು ಸಮರ್ಥ ಹಾಗೂ ಯಶಸ್ವಿಯಾಗಿ ಎದುರಿಸಿ ಪಕ್ಷದ ಅಭ್ಯರ್ಥಿ ಅಮರನಾಥ ಪಾಟೀಲ್ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಲು ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದರು.
  ಪಕ್ಷದ ಜಿಲ್ಲಾ ಕಚೇರಿಯಲ್ಲಿ ಕರೆದಿದ್ದ ವಿಧಾನ ಪರಿಷತ್ ಚುನಾವಣೆ ಕುರಿತ ಸಭೆಯಲ್ಲಿ ಮಾತನಾಡಿ, ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಜೂ.3ರಂದು ನಡೆಯಲಿರುವ ಮೇಲ್ಮನೆ ಚುನಾವಣೆಯಲ್ಲಿ ಪಕ್ಷ ನೀಡಿದ ಜವಾಬ್ದಾರಿಯನ್ನು ಎಲ್ಲರೂ ಸಮರ್ಪಕವಾಗಿ ನಿರ್ವಹಿಸಿ ಕ್ಷೇತ್ರದಲ್ಲಿ ಮತ್ತೆ ಕೇಸರಿ ಝಂಡಾ ಹಾರುವಂತೆ ಮಾಡಬೇಕು ಎಂದರು.
  ಪಕ್ಷದ ಮುಖಂಡರು, ಪದಾಧಿಕಾರಿಗಳು ಪದವೀಧರ ಮತದಾರರ ಬಳಿ ಹೋಗಿ ಮನವೊಲಿಸಬೇಕು. ಈ ಭಾಗದ ಸಮಗ್ರ ಅಭಿವೃದ್ಧಿಗಾಗಿ ಅಮರನಾಥ ಅವರನ್ನು ಮೇಲ್ಮನೆಗೆ ಕಳಿಸಲು ಬೆಂಬಲ ಕೋರಬೇಕು. ಅಮರನಾಥ ಪಾಟೀಲ್ ಹಿಂದೆ ಎಂಎಲ್ಸಿ ಸೇರಿ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಕ್ಷೇತ್ರದ ಎಲ್ಲೆಡೆ ಬಿಜೆಪಿ ಪರ ವಾತಾವರಣವಿದ್ದು, ಪಾಟೀಲ್ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
  ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಾಬು ವಾಲಿ, ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ, ಗ್ರಾಮಾಂತರ ಅಧ್ಯಕ್ಷ ರಾಜೇಂದ್ರ ಪೂಜಾರಿ, ಮುಖಂಡರಾದ ರೇವಣಸಿದ್ದಪ್ಪ ಜಲಾದೆ, ರಾಜಶೇಖರ ನಾಗಮೂರ್ತಿ, ಮಹೇಶ ಪಾಲಂ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts