More

    ಶಿಕ್ಷಣ ವಿರೋಧಿ ಕಾಂಗ್ರೆಸ್ ಸರ್ಕಾರ

    ಬೀದರ್: ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)ಯನ್ನು ರದ್ದುಗೊಳಿಸುವ ರಾಜ್ಯದ ಕಾಂಗ್ರೆಸ್ ಸರ್ಕಾರದ ನಿರ್ಧಾರ ರಾಜಕೀಯ ಪ್ರೇರಿತದಿಂದ ಕೂಡಿದೆ. ರಾಜ್ಯ ಸರ್ಕಾರ ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.
    ವಿಧಾನ ಪರಿಷತ್‌ ನ ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆ ನಿಮಿತ್ತ ನಗರದ ಸಿದ್ಧಾರೂಢ ಆಯುರ್ವೆದಿಕ ಮೆಡಿಕಲ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದಲ್ಲಿ ಎನ್ಇಪಿ ಜಾರಿಗೊಳಿಸಲಾಗಿತ್ತು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ರದ್ದುಗೊಳಿಸಿದ್ದು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೆಟ್ಟು ಬಿದ್ದಿದೆ ಎಂದು ಹೇಳಿದರು.
    ಗ್ರೇಸ್ ಮಾಕ್ಸ್೯ ಕಾಂಗ್ರೆಸ್ ಸರ್ಕಾರ ಇದಾಗಿದೆ. ರಾಜ್ಯ ಸಕರ್ಾರ ವಿದ್ಯಾರ್ಥಿಗಳಿಗೆ ಶೇ.30 ಗ್ರೇಸ್ ಮಾಕ್ಸ್೯ ನೀಡುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗುವುದು ಬಹಳ ಸುಲಭವಾಗಿದೆ. ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಕೇವಲ 5 ಪ್ರತಿಶತ ಅಂಕಗಳನ್ನು ಪಡೆದರು ಕೂಡ ಇದಕ್ಕೆ ಶೇ.30 ಗ್ರೇಸ್ ಮಾಕ್ಸ್೯ ಜೋಡಣೆಯಾಗಿ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ. ಇದರಿಂದಾಗಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದು ಹೇಳಿದರು.
    ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಬಿಜೆಪಿ-ಜೆಡಿಎಸ್ ಮೈತ್ರಿ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಎಂಎಲ್ಸಿ ಚುನಾವಣೆಯಲ್ಲಿ ಸಹ ನಾವೇ ಮೇಲುಗೈ ಸಾಧಿಸುತ್ತೇವೆ ಎಂದರು.
    ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಸಜ್ಜಾಗಬೇಕು. ಪಕ್ಷದ ಅಭ್ಯರ್ಥಿ ಅಮರನಾಥ ಪಾಟೀಲ್ ಗೆಲುವಿಗಾಗಿ ಎಲ್ಲರೂ ಶ್ರಮಿಸಬೇಕು. ಪದವೀಧರ ಮತದಾರರು ಬಿಜೆಪಿಗೆ ಬೆಂಬಲಿಸುವ ಮೂಲಕ ಮತ್ತೆ ಕ್ಷೇತ್ರದಲ್ಲಿ ಕಮಲ ಅರಳಿಸಬೇಕು ಎಂದರು.
    ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಸಂಸದ ಡಾ.ಉಮೇಶ್ ಜಾಧವ್, ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್, ವಿಧಾನ ಪರಿಷತ್ ಸದಸ್ಯ ರಘುನಾಥರಾವ ಮಲ್ಕಾಪುರೆ, ಮಾಜಿ ಶಾಸಕ ಎಂ.ಜಿ.ಮುಳೆ, ಬಿಡಿಎ ಮಾಜಿ ಅಧ್ಯಕ್ಷ ಬಾಬು ವಾಲಿ, ಪ್ರಮುಖರಾದ ಶಿವಾನಂದ ಮಂಠಾಳಕರ್, ಈಶ್ವರಸಿಂಗ್ ಠಾಕೂರ್, ಶಶಿಧರ ಹೊಸಳ್ಳಿ, ರೇವಣಸಿದ್ದಪ್ಪ ಜಲಾದೆ, ಪೀರಪ್ಪ ಯರನಳ್ಳಿ, ಶಿಕ್ಷಣ ಸಂಸ್ಥೆಯ ಉದಯಭಾನು ಹಲವಾಯಿ ಇತರರಿದ್ದರು. ನಂತರ ಬೊಮ್ಮಾಯಿ ಅವರು ಇಲ್ಲಿಯ ಕರ್ನಾಟಕ ಕಾನೂನು ಪದವಿ ಕಾಲೇಜಿಗೆ ಭೇಟಿ ನೀಡಿ ಬಿಜೆಪಿ ಪರ ಪ್ರಚಾರ ನಡೆಸಿದರು.

    ಹದಗೆಟ್ಟ ಕಾನೂನು ಸುವ್ಯವಸ್ಥೆ
    ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕೊಲೆ, ಸುಲಿಗೆ, ದೌರ್ಜನ್ಯ, ಅತ್ಯಾಚಾರ, ದರೋಡೆಗಳು ಹೆಚ್ಚುತ್ತಿವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ದೂರಿದರು. ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ಮಹಿಳೆಯರು ಹೊರಗಡೆ ಮುಕ್ತವಾಗಿ ತಿರುಗಲು ಭಯಪಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಹೊರಗಡೆ ಹೋದ ಮಹಿಳೆಯರು ಸುರಕ್ಷಿತವಾಗಿ ಮನೆಗೆ ಬರುತ್ತಾರಾ ಎನ್ನುವಂಥ ವಾತಾವರಣ ಸೃಷ್ಟಿಯಾಗಿದೆ. ಸಮಾಜಘಾತುಕ ಶಕ್ತಿಗಳಿಗೆ ಪೊಲೀಸರ ಭಯ ಇಲ್ಲವಾಗಿದೆ ಎಂದರು. ರಾಜ್ಯದಲ್ಲಿ ಡ್ರಗ್ಸ್ ಮಾರಾಟ ಹೆಚ್ಚಾಗಿದೆ. ಸಮಾಜಘಾತುಕ ಶಕ್ತಿಗಳು ತೆಲೆ ಎತ್ತಿ ಓಡಾಡುತ್ತಿದ್ದು, ಇವರಿಗೆ ಪೊಲೀಸ್ ಠಾಣೆಗಳಲ್ಲೇ ರಾಜಮರ್ಯಾದೆ ನೀಡಲಾಗುತ್ತಿದೆ. ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ಗಳಾಗಬಾರದು ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಹೇಳಿದ್ದಾರೆ ಎಂದರು. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋಟ್೯ ರದ್ದು ಪಡಿಸಲು ಕೋಟ್೯ ಆದೇಶ ಮಾಡಿದೆ. ಇನ್ನುಂದೆ ರದ್ಧತಿ ಪ್ರಕ್ರಿಯೆಗಳು ನಡೆಯಲಿವೆ. ಶೀಘ್ರವೇ ಪ್ರಜ್ವಲ್ ಬಂಧನವಾಗತ್ತಾರೆ ಎಂದು ಹೇಳಿದರು. ಕೇಂದ್ರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ವಾಪಸ್ ಪಡೆಯುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಶಿಕ್ಷಣದಲ್ಲೂ ರಾಜಕೀಯ ಮಾಡುತ್ತಿದೆ. ಹಿಂದಿನ ಬಿಜೆಪಿ ಸಕರ್ರಾದಲ್ಲಿ ಕರ್ನಾಟಕದಲ್ಲಿ ಇನ್ಇಪಿ ಜಾರಿ ಮಾಡಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ತಡೆಹಿಡಿದು, ರಾಜ್ಯ ಶಿಕ್ಷಣ ನೀತಿ ಜಾರಿಗೆ ತಂದಿದೆ. ಶಿಕ್ಷಣ ನೀತಿಯಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts