More

    ಹೊಸ ತಂತ್ರಜ್ಞಾನದ ಅರಿವು ಅಗತ್ಯ

    ಬೀದರ್: ಆಧುನಿಕತೆ ಪ್ರಪಂಚದಲ್ಲಿ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನ ಅರಿಯಬೇಕು ಮತ್ತು ಇಂದಿನ ಕಾಲಮಾನಕ್ಕೆ ಇದು ಅನಿವಾರ್ಯ ಎಂದು ಲಿಂಗರಾಜ ಅಪ್ಪ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ವಿನಿತಾ ಪಾಟೀಲ್ ಹೇಳಿದರು.
    ನಗರದ ಹೊರವಲಯದ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಎಂಬೆಡೆಡ್ ಎಲ್ಒಟಿ ಅಪ್ಲಿಕೇಷನ್ ವಿನ್ಯಾಸ ಮತ್ತು ಅಭಿವೃದ್ಧಿ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿ, ಬದಲಾಗುತ್ತಿರುವ ಸನ್ನಿವೇಶಕ್ಕೆ ತಕ್ಕಂತೆ ಈಗಿನ ಯುವ ಜನಾಂಗ ಬದಲಾಗಬೇಕು ಎಂದು ಹೇಳಿದರು.
    ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪ, ಚೇರ್ಮನ್ ಮಾತೋಶ್ರೀ ಡಾ.ದಾಕ್ಷಾಯಿಣಿ ತಾಯಿ, ಪೂಜ್ಯ ಚಿರಂಜೀವಿ ದೊಡ್ಡಪ್ಪ ಅವರ ಮಾರ್ಗದರ್ಶನದಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಹೊಸ ಹೊಸ ವಿಧಾನಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ನಾನಾ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.
    ಡಾ.ಶರಣಬಸಪ್ಪ ಶೇಟಕಾರ್, ಪ್ರೊ.ವೀರೇಶ್ ಬಿರಾದಾರ್, ಎಸ್. ಕಾರ್ತಿಕ್ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಕಾಲೇಜಿನ ವಿವಿಧ ವಿಭಾಗದ ಮುಖ್ಯಸ್ಥರು, ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ಪ್ರೊ.ಗೀತಾಂಜಲಿ ನಿರೂಪಣೆ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts