ಬೀದರ್: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ಜಾರಿಗೊಳಿಸಿರುವ ಸಂವಿಧಾನದ ಕಲಂ 371 (ಜೆ) ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಜಾಗೃತಿ ಜ್ಯೋತಿಯಾತ್ರೆ ಆಯೋಜಿಸಲಾಗಿದೆ ಎಂದು ಅಹಿಂದ ಚಿಂತಕರ ವೇದಿಕೆ ರಾಜ್ಯಾಧ್ಯಕ್ಷ ಸಾಯಿಬಣ್ಣ ಜಮಾದಾರ ಹೇಳಿದರು.
ಕಲಬುರಗಿ ಜಿಲ್ಲೆಯ ಚಿಂಚೋಳಿಯ ದಿ. ವೈಜನಾಥ ಪಾಟೀಲ್ ಸಮಾ ಸ್ಥಳದಿಂದ ಆ.13ರಂದು ಬೆಳಗ್ಗೆ 11ಕ್ಕೆ ಜ್ಯೋತಿಯಾತ್ರೆ ಆರಂಭವಾಗಿ, ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಂಚರಿಸಿ, ಆ.29ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾಂಕೇತಿಕ ಧರಣಿ ಮಾಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ ಕಲ್ಯಾಣ ಕರ್ನಾಟಕ ಹಿಂದುಳಿದ ಪ್ರದೇಶ. ವೈಜಿನಾಥ ಪಾಟೀಲ್ ಸೇರಿದಂತೆ ಈ ಭಾಗದ ಹಲವರು ನಿರಂತರ ಹೋರಾಟ ಮಾಡಿದ ಪರಿಣಾಮ 371 (ಜೆ) ಜಾರಿಗೊಳಿಸಲಾಯಿತು. ಆದರೆ ಸರ್ಕಾರ ಹಾಗೂ ಉನ್ನತ ಮಟ್ಟದ ಅಕಾರಿಗಳು ಸಮರ್ಪಕ ಅನುಷ್ಠಾನಕ್ಕೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದೂರಿದರು.
ಸರ್ಕಾರಿ ನೌಕರರಿಗೆ ಮುಂಬಡ್ತಿಯಲ್ಲಿ ಅನ್ಯಾಯವಾಗುತ್ತಿದೆ. ಪೊಲೀಸ್, ಕಂದಾಯ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸೇವಾ ಹಿರಿತನದಲ್ಲಿ 10 ವರ್ಷ ಹಿರಿಯರಿದ್ದರೂ ನಮ್ಮ ಭಾಗದ ನೌಕರರಿಗೆ ಮುಂಬಡ್ತಿ ಸಿಗುತ್ತಿಲ್ಲ. ಆದರೆ ಕಲ್ಯಾಣ ಕರ್ನಾಟಕೇತರ ನೌಕರರು ಸೇವಾ ಹಿರಿತನದಲ್ಲಿ ಕಿರಿಯರಿದ್ದರೂ ಮುಂಬಡ್ತಿ ಪಡೆದುಕೊಳ್ಳುತ್ತಿದ್ದಾರೆ. ಹೀಗೆ ಶಿಕ್ಷಣ, ಉದ್ಯೋಗದಲ್ಲಿ ಸಾಕಷ್ಟು ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.
ಕಲಂ ನ್ಯೂನತೆ ಹಾಗೂ ಕಾನೂನು ತಿದ್ದುಪಡಿಗೆ ರಚಿಸಿರುವ ಉಪಸಮಿತಿಯಲ್ಲಿ ಕಲ್ಯಾಣ ಕರ್ನಾಟಕೇತರ ಶಾಸಕರನ್ನು ನೇಮಿಸಿಕೊಳ್ಳುವುದು ಸರಿಯಲ್ಲ. ಈ ಭಾಗದ ಅಭಿವೃದ್ಧಿಗೆ ವಿಶೇಷ ಅನುದಾನ ಸಮರ್ಪಕವಾಗಿ ನೀಡುತ್ತಿಲ್ಲ. ಈ ಬಗ್ಗೆ ಜಾಗೃತಿ ಮೂಡಿಸಲು ಯಾತ್ರೆ ಆಯೋಜಿಸಲಾಗಿದೆ ಎಂದು ಹೇಳಿದರು.
ಪ್ರಮುಖರಾದ ಘಾಳೆಪ್ಪ ಅಂತಿ, ಬಕ್ಕಪ್ಪ ಬೆಮಳಖೇಡ್, ಡಿ.ಎಸ್. ಹಡಲಗಿ, ಭೀಮಗೊಂಡ ಬಾಳೂರೆ ಇದ್ದರು.
371 (ಜೆ) ಜಾಗೃತಿ ಜ್ಯೋತಿಯಾತ್ರೆ
ಮಕ್ಕಳಿಗೆ ಬಾಳೆಹಣ್ಣು ಕೊಡುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ ಇಲ್ಲದಿದ್ರೆ ಆರೋಗ್ಯ ಕೆಡಬಹುದು ಎಚ್ಚರ!
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…