ಬೀದರ್: ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸುವುದು ತೀರಾ ಅವಶ್ಯಕವಾಗಿದೆ ಎಂದು ಕನ್ಹೆರಿಯ ಕಾಡಸಿದ್ದೇಶ್ವರ ಸ್ವಾಮೀಜಿ ನುಡಿದರು.
ನಗರದ ಚಿದಂಬರ ಶಿಕ್ಷಣ ಸಂಸ್ಥೆಯಲ್ಲಿ ಚಿದಂಬರ ಚಿತ್ಕಳೆ ವೇದಿಕೆ ಉದ್ಘಾಟಿಸಿ ಅವರು ಮಾತನಾಡಿದರು. ಒಂದು ವಸ್ತು ಅಥವಾ ವ್ಯಕ್ತಿಯನ್ನು ತಿದ್ದಿ, ತೀಡಿ ಸುಂದರವನ್ನಾಗಿ ಮಾಡುವುದೇ ಸಂಸ್ಕಾರ ಎಂದು ಹೇಳಿದರು.
ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಲು ಸತ್ಯ, ಪ್ರಾಮಾಣಿಕತೆ, ತಾಳ್ಮೆ ಸೇರಿದಂತೆ ಒಳ್ಳೆಯ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಕೆಟ್ಟ ಆಲೋಚನೆ ಮಾಡಬಾರದು. ಪರಿಶ್ರಮದಿಂದ ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.
ಸಾನಿಧ್ಯ ವಹಿಸಿದ್ದ ಮಠದ ಪೀಠಾಧಿಪತಿ ಡಾ. ಶಿವಕುಮಾರ ಸ್ವಾಮೀಜಿ ಮಾತನಾಡಿ, ಪ್ರತಿಯೊಬ್ಬ ಮನುಷ್ಯ ತನ್ನ ಕರ್ತವ್ಯ ಮರೆಯಬಾರದು. ವಿದ್ಯಾರ್ಥಿಯಾಗಿ, ಶಿಕ್ಷಕನಾಗಿ, ತಂದೆ-ತಾಯಿಯಾಗಿ, ನೌಕರನಾಗಿ, ಮಾಲೀಕನಾಗಿ ತಮ್ಮ ತಮ್ಮ ಕರ್ತವ್ಯ ನಿಭಾಯಿಸಿದರೆ ಕೀರ್ತಿವಂತರಾಗಿ ಹೆಸರು ಪಡೆಯಬಹುದು ಎಂದು ಹೇಳಿದರು.
ಬೆಳಿಗ್ಗೆ ಎದ್ದ ಕೂಡಲೇ ನಾನು ಯಾರು, ನನ್ನ ಕರ್ತವ್ಯವೇನು ಎಂಬುದ್ದನ್ನು ನೆನಪಿಸಿಕೊಳ್ಳಬೇಕು. ವಿದ್ಯಾರ್ಥಿಯಾಗಿದ್ದಲ್ಲಿ ಓದುವುದು, ವ್ಯಾಪಾರಿಯಾಗಿದ್ದಲ್ಲಿ ಅಂಗಡಿ ತೆರೆಯುವುದೇ ಸಂಸ್ಕøತಿ ಎಂದು ಹೇಳಿದರು.
ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಚಂದ್ರಪ್ಪ ಭತಮುರ್ಗೆ ಮಾತನಾಡಿ, ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಡುವುದೇ ವೇದಿಕೆಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಹೆತ್ತವರು ಹಾಗೂ ಸಮಾಜಕ್ಕೆ ಕೀರ್ತಿ ತರುವಂತೆ ಬದುಕುವುದನ್ನು ವೇದಿಕೆ ಕಲಿಸಲಿದೆ. ಪ್ರತಿ ತಿಂಗಳ ಕೊನೆಯ ಶನಿವಾರ ಸಂಸ್ಕøತಿ-ಸಂಸ್ಕಾರ-ಸದ್ವಿಚಾರ ಶೀರ್ಷಿಕೆಯಡಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂದು ಹೇಳಿದರು.
ಶಂಕರಾನಂದ ಸ್ವಾಮೀಜಿ, ಚಿದಂಬರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಬಿ.ಜಿ. ಶೆಟಕಾರ್, ಉದಯಭಾನು ಹಲವಾಯಿ, ಶಿವಶರಣಪ್ಪ ಸಾವಳಗಿ, ಕಲ್ಯಾಣರಾವ್ ಬುಜರ್ಕೆ, ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ, ನಾಗಪ್ಪ ಜಾನಕನೋರ, ಬಸವರಾಜ ಮ್ಯಾಗೇರಿ, ಡಾ. ಚಂದ್ರಕಾಂತ ಹಳ್ಳಿ ಉಪಸ್ಥಿತರಿದ್ದರು.
ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ ಸ್ವಾಗತಿಸಿದರು.
ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸಿ
ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?
ಬೆಂಗಳೂರು: ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?
ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…
ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು
ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…