ನೆರವು ನೀಡಿ ಬಿಎಸ್ಎಸ್ಕೆ ಉಳಿಸಿ

ಬೀದರ್: ಜಿಲ್ಲೆಯ ರೈತರ ಜೀವನಾಡಿ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್ಎಸ್ಕೆ) ಸಾಲದ ಸುಳಿಗೆ ಸಿಲುಕಿದ್ದು, ಕೂಡಲೇ ಸರ್ಕಾರ ನೆರವು ನೀಡಿ ಉಳಿಸಬೇಕು ಎಂದು ರೈತ ಸಂಘ ಮತ್ತು ಹಸಿರು ಸೇನೆ ಆಗ್ರಹಿಸಿದೆ.
ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ ನೇತೃತ್ವದ ನಿಯೋಗ ಸಿಎಂಗೆ ಬರೆದ ಮನವಿಪತ್ರವನ್ನು ನಗರದಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿ, ಸಾಲ ನೀಡಿದ್ದರಿಂದ ಕಾರ್ಖಾನೆ ಆಸ್ತಿಯನ್ನು ಡಿಸಿಸಿ ಬ್ಯಾಂಕ್ ನವರು ಜಪ್ತಿ ಮಾಡಿದ್ದು, ಜಿಲ್ಲೆ ರೈತರಿಗೆ ಮಾಡಿರುವ ಅವಮಾನ. ರಾಜ್ಯದಲ್ಲಿ ಹಲವಾರು ಸಕ್ಕರೆ ಕಾರ್ಖಾನೆಗಳು ಸಾಲದ ಸುಳಿಗೆ ಸಿಲುಕಿ ಮುಚ್ಚಿದಾಗ ರಾಜ್ಯ ಸರ್ಕಾರವೇ ಅನುದಾನ ನೀಡಿ ಪುನಶ್ಚೇತನ ಮಾಡಿರುವ ಉದಾಹರಣೆಗಳು ಬಹಳಷ್ಟಿವೆ. ಅದರಂತೆ ಬಿಎಸ್ಎಸ್ ಕೆಗೂ ಸರ್ಕಾರ ನೆರವು ನೀಡಬೇಕು ಎಂದು ಆಗ್ರಹಿಸಿದೆ.
ಜಿಲ್ಲೆ ರಾಜಕಾರಣಿಗಳು ಕಾರ್ಖಾನೆ ವಿಷಯದಲ್ಲಿ ರಾಜಕೀಯ ಮಾಡಿ ಸಾಲದ ಸುಳಿಗೆ ಸಿಲುಕಿಸಿದ್ದು, ಮೂರು ವರ್ಷಗಳಿಂದ ಬಂದ್ ಆಗಿದೆ. ಇಲ್ಲಿನ ಜನಪ್ರತಿನಿಧಿಗಳು, ರಾಜಕೀಯ ನಾಯಕರಿಗೆ ಕಾರ್ಖಾನೆ ಪುನಶ್ಚೇತನದ ಬಗ್ಗೆ ಆಸಕ್ತಿ ಇಲ್ಲ. ಬಿಎಸ್ಎಸ್ಕೆಗೆ ಸರ್ಕಾರ ಅನುದಾನ ನೀಡಿ ಮತ್ತೆ ಆರಂಭಿಸಬೇಕು. ನಿರ್ಲಕ್ಷಿಸಿದರೆ ಬೀದಿಗಿಳಿದು ಹೋರಾಟ ಮಾಡಬೇಕಾದೀತು ಎಂದು ಎಚ್ಚರಿಸಿದೆ.
ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ್, ಪ್ರಧಾನ ಕಾರ್ಯದಶರ್ಿ ದಯಾನಂದ ಸ್ವಾಮಿ ಸಿರ್ಸಿ, ಪ್ರವೀಣ ಕುಲಕರ್ಣಿ, ಚಂದ್ರಶೇಖರ ಜಮಖಂಡಿ, ಶಂಕ್ರೆಪ್ಪ ಪಾರಾ, ಪ್ರಕಾಶ ಬಾವಗೆ, ನಾಗಯ್ಯ ಸ್ವಾಮಿ, ಸುಭಾಷ ರಗಟೆ, ರಾಮರಾವ ಕೇರೂರೆ, ವಿಶ್ವನಾಥ ಧರಣೆ, ರೇವಣಸಿದಪ್ಪ ಯರಬಾಗ, ಝರಣಪ್ಪ ದೇಶಮುಖ, ಮಲ್ಲಿಕಾರ್ಜುನ ಚಕ್ಕಿ, ಬಸಪ್ಪ ಆಲೂರೆ ಇದ್ದರು.

Share This Article

ಕರಗಿದ ಮೇಣದಬತ್ತಿಯಿಂದ ಏನೆಲ್ಲಾ ಉಪಯೋಗ; ಬಿಸಾಡುವ ಬದಲು ಮರುಬಳಕೆ ಮಾಡಿ..

ಮನೆಯಲ್ಲಿ ಉಪಯೋಗಿಸುವ ಎಷ್ಟೋ ವಸ್ತುಗಳು ಕೆಲಕಾಲದ ನಂತರ ಹಳೆಯದಾಗುತ್ತದೆ. ಮತ್ತೆ ಕೆಲವು ಬಳಸಿದ ನಂತರ ನಾಶವಾಗುತ್ತದೆ.…

ಈರುಳ್ಳಿ ಸಿಪ್ಪೆಯನ್ನು ಎಸೆಯುವ ತಪ್ಪನ್ನು ಮಾಡಬೇಡಿ! ಸಿಪ್ಪೆ ವೇಸ್ಟ್​ ಎಂದು ಬಿಸಾಡೋ ಬದಲು ಹೀಗೆ ಮಾಡಿ

ಯಾವುದೇ ಅಡುಗೆ ಮಾಡಿದ್ರು ಈರುಳ್ಳಿ ಬೇಕೆ... ಬೇಕು. ಈರುಳ್ಳಿಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ, ಆದರೆ…

ನಿಮ್ಮ ಅಂಗೈನಲ್ಲಿ ತ್ರಿಶೂಲ ಗುರುತು ಇದೆಯಾ ನೋಡಿ… ಇದರರ್ಥ ತಿಳಿದ್ರೆ ನಿಮ್ಮ ಹುಬ್ಬೇರೋದು ಖಚಿತ!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…