ಕನ್ನಡ ಜ್ಯೋತಿ ರಥಯಾತ್ರೆ 12ಕ್ಕೆ

ಕಮಲನಗರ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಿಮಿತ್ತ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಅ.12ರಂದು ತಾಲೂಕಿಗೆ ಆಗಮಿಸಲಿದ್ದು, ಅದ್ದೂರಿಯಾಗಿ ಸ್ವಾಗತಿಸೋಣ ಎಂದು ತಹಸೀಲ್ದಾರ್ ಅಮೀತಕುಮಾರ ಕುಲಕರ್ಣಿ ಹೇಳಿದರು.
ತಹಸಿಲ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು, ಅಂದು ಸಂಜೆ 5ಕ್ಕೆ ಸಂಗಮ ಕ್ರಾಸ್ ಬಳಿ ರಥಯಾತ್ರೆಯನ್ನು ಶಾಸಕ ಪ್ರಭು ಚವ್ಹಾಣ್ ಸ್ವಾಗತಿಸಲಿದ್ದಾರೆ. ನಂತರ ಪಟ್ಟಣದ ಸಿದ್ದರಾಮೇಶ್ವರ ಪದವಿ ಮಹಾವಿದ್ಯಾಲಯಕ್ಕೆ ಬರಲಿದೆ. ಸಾರ್ವಜನಿಕರು, ಕನ್ನಡಾಭಿಮಾನಿಗಳು ಮತ್ತು ಶಾಲಾ ಮಕ್ಕಳು ಭಾಗವಹಿಲಿದ್ದಾರೆ. ಅಲ್ಲಮಪ್ರಭು ವೃತ್ತದಿಂದ ಶನೇಶ್ವರ ಮಂದಿರವರೆಗೆ ಭವ್ಯ ಮೆರವಣಿಗೆ ಸಾಗಲಿದೆ. ಕುಡಿಯುವ ನೀರು ಮತ್ತು ಬೆಳಕಿನ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಾಣಿಕರಾವ ಪಾಟೀಲ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶೀಲಾಬಾಯಿ ಸಜ್ಜನಶೆಟ್ಟೆ, ಸಿಪಿಐ ಅಮರೆಪ್ಪ ಶಿವಬಲ್, ಪಿಎಸ್ಐ ಚಂದ್ರಶೇಖರ ನಿರ್ಣೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪ್ರಶಾಂತ ಮಠಪತಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಲಿಂಗಪ್ಪ ಮಹಾಜನ್, ಎಸ್.ಎನ್.ಶಿವಣಕರ್, ಮಾದಪ್ಪ ಮಡಿವಾಳ ಸಭೆಯಲ್ಲಿದ್ದರು.

Share This Article

Skin Care | ಚಳಿಗಾಲದಲ್ಲಿ ನಿಮ್ಮ ತ್ವಚೆಯು ಹಾಳಾಗದಂತೆ ಎಚ್ಚರವಹಿಸಿ; ಈ ಫೇಸ್​ಪ್ಯಾಕ್ ಟ್ರೈ ಮಾಡಿ ಫಲಿತಾಂಶ ನೀವೇ ನೋಡಿ..

ಚಳಿಗಾಲ ಆರಂಭವಾಯಿತು ಎಂದರೆ ಸಾಕು ತ್ವಚೆಯಲ್ಲಿ ಸಣ್ಣದಾಗಿ ಬಿರುಕು ಕಾಣಿಸಿಕೊಳ್ಳುವುದನ್ನು ನಾವು ನೊಡಬಹುದು. ಇನ್ನು ಮುಖದ…

ಈ ಆಹಾರ ಪದಾರ್ಥದಲ್ಲಿದೆ ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿ; Health Tips ನಿಮಗಾಗಿ

ಕ್ಯಾನ್ಸರ್​​ನಂತಹ ಗಂಭೀರ ಕಾಯಿಲೆಯನ್ನು ತಡೆಗಟ್ಟಲು ಆರೋಗ್ಯಕರ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.…

ಚಳಿಗಾಲದಲ್ಲಿ ಕೈ&ಕಾಲ್ಬೆರಳುಗಳ ಊತಕ್ಕೆ ಕಾರಣ ಈ ಕಾಯಿಲೆ; ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ… | Health Tips

ಚಳಿಗಾಲದಲ್ಲಿ ನೆಗಡಿ ಮಾತ್ರವಲ್ಲದೆ ಹಲವಾರು ಕಾಯಿಲೆಗಳು ಸಮಸ್ಯೆಯನ್ನು ಹೆಚ್ಚಿಸುತ್ತವೆ. ಅದರಲ್ಲಿ ಚಿಲ್ಬ್ಲೈನ್ಸ್ ರೋಗವು ಒಂದಾಗಿದೆ. ಬಹುಶಃ…