ಉತ್ತಮ ಸೇವೆ ನೀಡಿ ಕೀರ್ತಿ ತನ್ನಿ

ಹುಮನಾಬಾದ್: ಬಿಎಎಂಎಸ್ ಪದವಿ ಪಡೆದ ವಿದ್ಯಾರ್ಥಿಗಳು ಇನ್ನಷ್ಟು ಹೆಚ್ಚಿನ ಅಧ್ಯಯನದೊಂದಿಗೆ ವೈದ್ಯಕೀಯ ವೃತ್ತಿ ಆರಂಭಿಸಿ ಜನರಿಗೆ ಉತ್ತಮ ಸೇವೆ ಸಲ್ಲಿಸುವ ಜತೆಗೆ ಪಾಲಕರು, ಗುರುಗಳು ಮತ್ತು ಸಂಸ್ಥೆ ಕೀರ್ತಿ ಹೆಚ್ಚಿಸಬೇಕೆಂದು ಮಾಜಿ ಸಚಿವ ರಾಜಶೇಖರ ಪಾಟೀಲ್ ಹೇಳಿದರು.
ಪಟ್ಟಣದ ಬಸವರಾಜ ಪಾಟೀಲ್ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ರಾಜರಾಜೇಶ್ವರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಪಿಜಿ ಸೆಂಟರ್‌ನ ಬಿಎಎಂಎಸ್ ವ್ಯಾಸಂಗ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ತಂದೆ ದಿ.ಬಸವರಾಜ ಪಾಟೀಲ್ ಅವರು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಬೇಕೆಂಬ ಉದ್ದೇಶದಿಂದ ಸ್ಥಾಪಿಸಿದ ಸಂಸ್ಥೆ ಇದೀಗ ಹೆಮ್ಮರವಾಗಿ ಬೆಳೆದಿದೆ. ಸಕಲ ಸೌಲಭ್ಯಗಳೊಂದಿಗೆ ನಾನಾ ಕೋಸ್೯ಗಳ ಮೂಲಕ ಮಕ್ಕಳಿಗೆ ಶಿಕ್ಷಣ ಒದಗಿಸಿಕೊಡಲಾಗುತ್ತಿದೆ ಎಂದರು.
ಸ್ಥಳೀಯ ಹಿರೇಮಠದ ಶ್ರೀ ರೇಣುಕಾ ವೀರಗಂಗಾಧರ ಶಿವಾಚಾರ್ಯ ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ ಪಾಟೀಲ್ ಇತರರಿದ್ದರು. ವೈದ್ಯಕೀಯ ಪದವಿ ಮುಗಿಸಿದ 2017-18ನೇ ಸಾಲಿನ 120 ಸಾಧಕರಿಗೆ ಪದವಿ ಪುರಸ್ಕಾರ ನೀಡಲಾಯಿತು.

Share This Article

Skin Care | ಚಳಿಗಾಲದಲ್ಲಿ ನಿಮ್ಮ ತ್ವಚೆಯು ಹಾಳಾಗದಂತೆ ಎಚ್ಚರವಹಿಸಿ; ಈ ಫೇಸ್​ಪ್ಯಾಕ್ ಟ್ರೈ ಮಾಡಿ ಫಲಿತಾಂಶ ನೀವೇ ನೋಡಿ..

ಚಳಿಗಾಲ ಆರಂಭವಾಯಿತು ಎಂದರೆ ಸಾಕು ತ್ವಚೆಯಲ್ಲಿ ಸಣ್ಣದಾಗಿ ಬಿರುಕು ಕಾಣಿಸಿಕೊಳ್ಳುವುದನ್ನು ನಾವು ನೊಡಬಹುದು. ಇನ್ನು ಮುಖದ…

ಈ ಆಹಾರ ಪದಾರ್ಥದಲ್ಲಿದೆ ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿ; Health Tips ನಿಮಗಾಗಿ

ಕ್ಯಾನ್ಸರ್​​ನಂತಹ ಗಂಭೀರ ಕಾಯಿಲೆಯನ್ನು ತಡೆಗಟ್ಟಲು ಆರೋಗ್ಯಕರ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.…

ಚಳಿಗಾಲದಲ್ಲಿ ಕೈ&ಕಾಲ್ಬೆರಳುಗಳ ಊತಕ್ಕೆ ಕಾರಣ ಈ ಕಾಯಿಲೆ; ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ… | Health Tips

ಚಳಿಗಾಲದಲ್ಲಿ ನೆಗಡಿ ಮಾತ್ರವಲ್ಲದೆ ಹಲವಾರು ಕಾಯಿಲೆಗಳು ಸಮಸ್ಯೆಯನ್ನು ಹೆಚ್ಚಿಸುತ್ತವೆ. ಅದರಲ್ಲಿ ಚಿಲ್ಬ್ಲೈನ್ಸ್ ರೋಗವು ಒಂದಾಗಿದೆ. ಬಹುಶಃ…