ಬೀದರ್: 2025 ರ ಜನವರಿಯಲ್ಲಿ ಬೀದರ್‍ನಲ್ಲಿ ಸಂಘಟಿಸಲು ಉದ್ದೇಶಿಸಿರುವ ರಾಷ್ಟ್ರೀಯ ಜಾನಪದ ನೃತ್ಯೋತ್ಸವದ ಉದ್ಘಾಟನೆಗೆ ಬರಲು ಕೇಂದ್ರ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯಾ ರಾಹಟಕರ್ ಸಮ್ಮತಿಸಿದ್ದಾರೆ.
ಜಿಲ್ಲೆಯವರೇ ಆದ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಅವರು ನವದೆಹಲಿಯಲ್ಲಿ ಶುಕ್ರವಾರ ಅವರನ್ನು ಶಾಲು ಹೊದಿಸಿ ಸತ್ಕರಿಸಿ ನೃತ್ಯೋತ್ಸವಕ್ಕೆ ಆಹ್ವಾನಿಸಿದರು.
ಜಿಲ್ಲೆಯಲ್ಲಿ ದೇಸಿ ಕಲೆ, ಸಂಸ್ಕøತಿಗೆ ಉತ್ತೇಜನ ಹಾಗೂ ಕಲಾವಿದರಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ರಾಷ್ಟ್ರೀಯ ಜಾನಪದ ನೃತ್ಯೋತ್ಸವ ಹಮ್ಮಿಕೊಳ್ಳಲು ಯೋಜಿಸಲಾಗಿದೆ ಎಂದು ಶಿವಯ್ಯ ಸ್ವಾಮಿ ತಿಳಿಸಿದರು.
ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ವಿಜಯಾ ಅವರು, ನೃತ್ಯೋತ್ಸವ ಉದ್ಘಾಟನೆಗೆ ಬೀದರ್‍ಗೆ ಬರುವೆ. ಅಲ್ಲಿ ಮಹಿಳೆಯರೊಂದಿಗೆ ಸಂವಾದವನ್ನೂ ನಡೆಸುವೆ ಎಂದು ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಕುಕ್ಕುಟ ಮಹಾ ಮಂಡಳದ ಮಾಜಿ ಅಧ್ಯಕ್ಷ ಯಲ್ಲಪ್ಪ ಎಂ. ಬೆಂಡಿಗೇರಿ ಇದ್ದರು.
ಬೀದರ್ ಗೆ ಮಹಿಳಾ ಆಯೋಗ ಅಧ್ಯಕ್ಷೆ
ವೆಜ್ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್ ವಿಧಾನ Recipe
ಸ್ಟ್ರೀಟ್ ಫುಡ್ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…
ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips
ಹೈಹೀಲ್ಸ್ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…
ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್ | Health Tips
ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…