ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಜನ್ಮದಿನದ ಪ್ರಯುಕ್ತ ವಿ.ಎನ್. ಅಪ್ಪೆ ಫೌಂಡೇಷನ್ ನಗರದಲ್ಲಿ ಜ. 15 ರಂದು 251 ಬೈಕ್ ಸವಾರರಿಗೆ ಉಚಿತ ಹೆಲ್ಮೇಟ್ ವಿತರಿಸಲಿದೆ.
ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಅಂದು ಬೆಳಿಗ್ಗೆ 11.30ಕ್ಕೆ ಕೇಕ್ ಕತ್ತರಿಸಿ ಈಶ್ವರ ಖಂಡ್ರೆ ಅವರ ಜನ್ಮದಿನ ಆಚರಿಸಲಾಗುವುದು. ನಂತರ ಹೆಲ್ಮೇಟ್ ವಿತರಣೆ ಮಾಡಲಾಗುವುದು ಎಂದು ಫೌಂಡೇಷನ್ ಮುಖ್ಯಸ್ಥರೂ ಆದ ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿನೋದಕುಮಾರ ಅಪ್ಪೆ ತಿಳಿಸಿದ್ದಾರೆ.
ಹೆಲ್ಮೇಟ್ ಧರಿಸುವುದರಿಂದ ಜೀವ ಉಳಿಯುತ್ತದೆ. ಹೀಗಾಗಿ ಹೆಲ್ಮೇಟ್ ವಿತರಿಸಿ ಸಚಿವರ ಜನ್ಮದಿನ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಅಪ್ಪೆ ಫೌಂಡೇಷನ್ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
251 ಹೆಲ್ಮೇಟ್ ವಿತರಣೆ 15ಕ್ಕೆ

You Might Also Like
ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon
watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…
ಕುತ್ತಿಗೆ-ತಲೆ ನೋವನ್ನು ನಿರ್ಲಕ್ಷಿಸುತ್ತಿದ್ದೀರಾ?; ಎಚ್ಚರದಿಂದಿರಿ.. ಇದು ಅಪಾಯದ ಮುನ್ಸೂಚನೆ | Health Tips
ಕುತ್ತಿಗೆ ಮತ್ತು ಭುಜದ ಸುತ್ತಲಿನ ಪ್ರದೇಶದಲ್ಲಿನ ನೋವನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ. ಏಕೆಂದರೆ ಇದು ಸರ್ವಿಕಲ್…
ಅಳದಿದ್ದರು ಕಣ್ಣೀರು ಬರುತ್ತಿದೆಯೇ; ತಜ್ಞರು ಸೂಚಿಸಿರುವ ಸಿಂಪಲ್ ಪರಿಹಾರ ಹೀಗಿದೆ.. Health Tips
ಸೌಂದರ್ಯವನ್ನು ಅಳೆಯಲು ಕಣ್ಣುಗಳು ಒಂದು ಪ್ರಮುಖ ಮಾನದಂಡವಾಗಿದೆ. ಇದು ಪ್ರಮುಖ ಇಂದ್ರಿಯಗಳಲ್ಲಿ ಒಂದಾಗಿದೆ. ಅದಿಲ್ಲದೆ ಜೀವನವನ್ನು…