ಬೀದರ್: ಕನ್ನಡ ಶಾಲೆಗಳ ಉಳಿವಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕುಶಾಲ್ ಪಾಟೀಲ ಗಾದಗಿ ಹೇಳಿದರು.
ಬೀದರ್ ತಾಲ್ಲೂಕಿನ ಶ್ರೀಮಂಡಲ್ ಗ್ರಾಮದಲ್ಲಿ ಈಚೆಗೆ ಜ್ಞಾನ ಕಾರಂಜಿ ಚಾರಿಟಬಲ್ ಟ್ರಸ್ಟ್ ಸಂಚಾಲಿತ ನೈಟಿಂಗೇಲ್ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ನೈಟಿಂಗೇಲ್ ಶಾಲೆಗಳು ಆಂಗ್ಲ ಮಾಧ್ಯಮ ಶಾಲೆಗಳ ಪ್ರಭಾವದ ಮಧ್ಯೆಯೂ ಮಕ್ಕಳಿಗೆ ಗುಣಮಟ್ಟದ ಕನ್ನಡ ಶಿಕ್ಷಣ ಕೊಡುತ್ತಿವೆ ಎಂದು ತಿಳಿಸಿದರು.
ಜ್ಞಾನ ಕಾರಂಜಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಾಣಿಕಪ್ಪ ಗೋರನಾಳೆ ಮಾತನಾಡಿ, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ವಿವಿಧ ಉನ್ನತ ಹುದ್ದೆಗಳಲ್ಲಿದ್ದಾರೆ. ಹೀಗಾಗಿ ಪಾಲಕರು ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗೆ ಕಳುಹಿಸಬೇಕು ಎಂದು ಹೇಳಿದರು.
ಬೀದರ್ ತಾಲ್ಲೂಕಿನ 27 ಗ್ರಾಮಗಳಲ್ಲಿ ನೈಟಿಂಗೇಲ್ ಕನ್ನಡ ಮಾಧ್ಯಮ ಶಾಲೆಗಳನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರಲಾಗುತ್ತಿದೆ. ಶಾಲೆಗಳಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ತಿಳಿಸಿದರು.
ಲಿಂಗಾಯತ ಮಹಾ ಮಠದ ಪ್ರಭುದೇವ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಟ್ರಸ್ಟ್ ನಿರ್ದೇಶಕ ರಮೇಶ ಮಠಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಗುಣಶೆಟ್ಟಿ, ವಿಕಾಸ ಅಕಾಡೆಮಿ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ, ಕಲ್ಯಾಣ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಸಂಘದ ಜಿಲ್ಲಾ ಅಧ್ಯಕ್ಷ ರಾಜೇಂದ್ರ ಮಣಗೆರೆ, ಪಿಡಿಒ ಶರತಕುಮಾರ, ಜ್ಞಾನ ಕಾರಂಜಿ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ದೇವಿದಾಸ ಭಾಲ್ಕಿಕರ್, ನಿರ್ದೇಶಕರಾದ ಸಿ.ಎಸ್. ಗಣಾಚಾರಿ, ಮಲ್ಲಿಕಾರ್ಜುನ ಕರಂಜಿ, ಬಸವರಾಜ ಶೇರಿಕಾರ್, ಮುಖ್ಯಶಿಕ್ಷಕಿ ಶ್ರೀದೇವಿ ವಾಲ್ದೊಡ್ಡಿ ಇದ್ದರು.
ಟ್ರಸ್ಟ್ ಆಡಳಿತಾಧಿಕಾರಿ ರವೀಂದ್ರ ಎಂ. ಚವಾಣ್ ನಿರೂಪಿಸಿದರು. ಸಹ ಶಿಕ್ಷಕಿ ಅಶ್ವಿನಿ ಸ್ವಾಗತಿಸಿದರು. ಅಂಬಿಕಾ ವಂದಿಸಿದರು.
ಕನ್ನಡ ಶಾಲೆಗೆ ಉಳಿವಿಗೆ ಸಹಕಾರ ಅಗತ್ಯ

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips
ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…
ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips
ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…
ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes
grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…