More

    ಯುಪಿ ವಿರುದ್ಧ ಡೆಲ್ಲಿಗೆ ಸೋಲು; WPL ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆ

    ನವದೆಹಲಿ: ಫೆಬ್ರವರಿ 23ರಂದು ಆರಂಭವಾದ ಎರಡನೇ ಆವೃತ್ತಿಯ ವುಮೆನ್ಸ್​ ಪ್ರೀಮಿಯರ್​ ಲೀಗ್​ ದಿನದಿಂದ ದಿನಕ್ಕೆ ರೋಚಕತೆ ಸೃಷ್ಟಿಸುತ್ತಿದ್ದು, ಈಗಾಗಲೇ ಹದಿನೈದು ಪಂದ್ಯಗಳು ಮುಕ್ತಾಯಗೊಂಡಿದೆ. ಶುಕ್ರವಾರ ಅರುಣ್​ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಯುಪಿ ವಾರಿಯರ್ಸ್​ ರೋಷಕ ಜಯ ಸಾಧಿಸಿದ್ದು, ಪಾಯಿಂಟ್ಸ್ ಟೇಬಲ್​ನಲ್ಲಿ ಬದಲಾವಣೆ ಆಗಿದೆ.

    ಆಡಿರುವ ಆರು ಪಂದ್ಯಗಳಲ್ಲಿ 4ರಲ್ಲಿ ಗೆದ್ದು ಎರಡರಲ್ಲಿ ಸೋಲು ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್​ ಅಗ್ರಸ್ಥಾನದಲ್ಲಿದ್ದು, ಹರ್ಮನ್​ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಎರಡನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್​ ಆಡಿರುವ ನಾಲ್ಕರಲ್ಲಿ ಗೆಲುವು ಹಾಗೂ ಎರಡು ಪಂದ್ಯದಲ್ಲಿ ಸೋಲುಂಡು 8 ಅಂಕ ಸಂಪಾದಿಸಿದೆ.

    ಇದನ್ನೂ ಓದಿ: ರಸ್ತೆಯಲ್ಲಿ ನಮಾಜ್​ ಮಾಡುತ್ತಿದ್ದವರ ಮೇಲೆ ಹಲ್ಲೆ ಪ್ರಕರಣ; ಪೊಲೀಸ್​ ಅಧಿಕಾರಿ ಅಮಾನತು

    ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನದಲ್ಲಿದೆ. ಆಡಿರುವ ಆರು ಪಂದ್ಯಗಳಲ್ಲಿ ಸೋಲು ಗೆಲುವನ್ನು ಸಮನಾಗಿ ಕಂಡಿರುವ ಆರ್​ಸಿಬಿ ಒಟ್ಟು 6 ಅಂಕ ಸಂಪಾದಿಸಿ 3ನೇ ಸ್ಥಾನದಲ್ಲಿದೆ. ಬೆಂಗಳೂರಿನ ರನ್​ರೇಟ್ +0.038 ಆಗಿದೆ. ಯುಪಿ ವಾರಿಯರ್ಸ್ ತಂಡ ಆರ್​ಸಿಬಿ ವಿರುದ್ಧ ಸೋತು ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಆಡಿರುವ ಏಳು ಪಂದ್ಯಗಳಲ್ಲಿ ನಾಲ್ಕು ಸೋಲು ಮತ್ತು ಮೂರು ಗೆಲುವು ಕಂಡು 6 ಅಂಕ ಪಡೆದುಕೊಂಡಿದೆ.

    ಆಡಿರುವ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋತಿದ್ದು, ಕೇವಲ ಒಂದು ಪಂದ್ಯದಲ್ಲಿ ಜಯ ಸಾಧಿಸಿ 2 ಅಂಕ ಪಡೆದುಕೊಂಡಿರುವ ಗುಜರಾತ್​ ಜೈಯಂಟ್ಸ್​ ತಂಡವು -1.278 ರನ್​ರೇಟ್​ನೊಂದಿಗೆ ಕೊನೆ ಸ್ಥಾನದಲ್ಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts