ನಾಡಾದಿಂದ ಕುಸ್ತಿಪಟು ಬಜರಂಗ್ ಪೂನಿಯಾ ಅಮಾನತು! ಕಾರಣ ಹೀಗಿದೆ..?

ಬಹಅಜಅ
Published on

ನವದೆಹಲಿ: ಮಾರ್ಚ್ ನಲ್ಲಿ ಸೋನಿಪತ್ನಲ್ಲಿ ನಡೆದ ಟ್ರಯಲ್ಸ್‌‌ನಲ್ಲಿ ಡೋಪ್ ಮಾದರಿಯನ್ನು ನೀಡದ ಕಾರಣ ಟೋಕಿಯೊ ಒಲಿಂಪಿಕ್ಸ್ ಪದಕ ವಿಜೇತ ಬಜರಂಗ್ ಪೂನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಸಂಸ್ಥೆ (ನಾಡಾ) ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ.

ಉನ್ನತ ಮೂಲಗಳ ಪ್ರಕಾರ, ಮಾರ್ಚ್ 10 ರಂದು ಸೋನೆಪತ್‌ನಲ್ಲಿ ನಡೆದ ಟ್ರಯಲ್ಸ್​ನಲ್ಲಿ ಆಯ್ಕೆಯಾದ ನಂತರ ಕುಸ್ತಿಪಟು ಭಜರಂಗ್ ಪುನಿಯಾ ಮೂತ್ರದ ಮಾದರಿಯನ್ನು ನೀಡಿರಲಿಲ್ಲ. ಇದರಿಂದ ಭವಿಷ್ಯದ ಯಾವುದೇ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸದಂತೆ ಅಮಾನತುಗೊಳಿಸುವ ಆದೇಶವನ್ನು ನಾಡಾ ಹೊರಡಿಸಿದೆ.

ಈ ಅಮಾನತು ಆದೇಶ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಅವರ ಪ್ರಯತ್ನಕ್ಕೆ ಹಿನ್ನಡೆಯಾಗಲಿದೆ.

ಅವರ ಅಮಾನತು ತೆಗೆದುಹಾಕುವವರೆಗೂ ಪೂನಿಯಾ ಯಾವುದೇ ಪಂದ್ಯಾವಳಿ ಅಥವಾ ಟ್ರಯಲ್ಸ್‌‌ನಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಮತ್ತು ಆರೋಪಗಳು ವಿಚಾರಣೆಯಲ್ಲಿ ಉಳಿದರೆ ಮುಂಬರುವ ಒಲಿಂಪಿಕ್ಸ್ನ ಟ್ರಯಲ್ಸ್‌ನಲ್ಲಿ ಭಾಗವಹಿಸದಂತೆ ಅವರನ್ನು ನಿರ್ಬಂಧಿಸಬಹುದು ಎಂದು ಬಲ್ಲ ಮೂಲಗಳು ತಿಳಿಸಿವೆ.

ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಮುಖ್ಯಸ್ಥ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಅವರ ಆಪ್ತ ಸಂಜಯ್ ಸಿಂಗ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಒಲಿಂಪಿಕ್​ ಪದಕ ವಿಜೇತೆ ಕುಸ್ತಿಪಟು ಸಾಕ್ಷಿ ಮಲಿಕ್​ ತಮ್ಮ ಕುಸ್ತಿ ಜಗತ್ತಿಗೆ ವಿದಾಯ ಹೇಳಿದ್ದರು. ಬಳಿಕ ಕುಸ್ತಿಪಟು ಬಜರಂಗ್ ಪುನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿಯವರಿಗೆ ಹಿಂದಿರುಗಿಸುತ್ತಿರುವುದಾಗಿ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದರು.

ಪುನಿಯಾ ಅವರಲ್ಲಿ ಮೂತ್ರದ ಮಾದರಿ ನೀಡುವಂತೆ ಕೇಳಿದ್ದರೂ ಅವರು ನಿಗದಿತ ಸಮಯದ ಒಳಗಡೆ ನೀಡಿಲ್ಲ ಎಂದು ನಾಡಾ ತಿಳಿಸಿದೆ.

ಈ ನಾಡಾ ಮೂತ್ರದ ಮಾದರಿಯನ್ನು ನೀಡದ್ದು ಯಾಕೆ ಎನ್ನುವುದರ ಬಗ್ಗೆ ಲಿಖಿತವಾಗಿ ಕಾರಣವನ್ನು ಮೇ 7ರ ಒಳಗಡೆ ತಿಳಿಸಬೇಕು. ಒಂದು ವೇಳೆ ಈ ಅವಧಿಯ ಒಳಗಡೆ ಸರಿಯಾದ ಕಾರಣ ನೀಡದೇ ಇದ್ದರೆ ಮುಂದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net