More

    ಕುಸ್ತಿಪಟುಗಳನ್ನು ಬೆಂಬಲಿಸಿ ರೈತರ ಪ್ರತಿಭಟನೆ ; ದೆಹಲಿ ಗಡಿಯಲ್ಲಿ ಬಿಗಿ ಭದ್ರತೆ

    ನವದೆಹಲಿ: ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹಿನ್ನೆಲೆ ಭಾರತದ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ರಾಷ್ಟ್ರವ್ಯಾಪಿ ಧರಣಿ ನಡೆಸಲು ಕರೆ ನೀಡಿದ್ದಾರೆ.

    ಈ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಭದ್ರತಾ ಸಿಬ್ಬಂದಿ ಗಡಿಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ದೆಹಲಿ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

    ಇದನ್ನೂ ಓದಿ:  ಟರ್ಕಿಯಲ್ಲಿ ಎಂಜಾಯ್ ಮಾಡ್ತಿದ್ದಾರೆ ವಿಜಯ್ ದೇವರಕೊಂಡ; ರಶ್ಮಿಕಾ ಎಲ್ಲಿ ಎಂದ ನೆಟ್ಟಿಗರು!

    “ಅಕ್ಕಪಕ್ಕದ ರಾಜ್ಯಗಳಿಂದ ದೆಹಲಿ ಪ್ರವೇಶಿಸುವ ವಾಹನಗಳನ್ನು ಗಡಿಯಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಭದ್ರತೆಯನ್ನು ಬಿಗಿಗೊಳಿಸಲಾಗಿದೆ, ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ನಾವು ಬಯಸುತ್ತೇವೆಂದು” ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

    ಇದನ್ನೂ ಓದಿ:  ಜೂನ್​ 4ರಂದು ಸ್ಥಳದಲ್ಲೇ ಚಿತ್ರ ಬಿಡಿಸಿ ಸ್ಪರ್ಧೆ: ವಿಜಯವಾಣಿ, ದಿಗ್ವಿಜಯ ನ್ಯೂಸ್​ನಿಂದ ಮಕ್ಕಳಿಗಾಗಿ ಆಯೋಜನೆ

    ಅಪ್ರಾಪ್ತ ಬಾಲಕಿ ಸೇರಿದಂತೆ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ರೈತ ಸಂಘಗಳ ಮಾತೃಸಂಸ್ಥೆಯಾದ ಎಸ್‌ಕೆಎಂ ಮಂಗಳವಾರ ಜೂನ್ 1 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ.

    ಸಿಂಗ್ ಬಂಧನಕ್ಕೆ ಆಗ್ರಹಿಸಿ ಏಪ್ರಿಲ್ 23 ರಿಂದ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದರು. ಅದೇ ದಿನ ಉದ್ಘಾಟನೆಗೊಂಡ ಹೊಸ ಸಂಸತ್ ಭವನದ ಮುಂದೆ ಮೆರವಣಿಗೆ ಮಾಡಲು ಯತ್ನಿಸಿದ ನಂತರ ಭಾನುವಾರ ದೆಹಲಿ ಪೊಲೀಸರು ಅವರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದ್ದರು. ಇದೀಗ ಕುಸ್ತಿಪಟುಗಳ ಹೋರಾಟಕ್ಕೆ ರೈತರ ಬೆಂಬಲ ಸಿಕ್ಕಿದೆ.

    Weekend with Ramesh; ಸಾಧಕರ ಕುರ್ಚಿ ಏರಲಿದ್ದಾರಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts