More

    ಬ್ರಿಜ್​ ವಿರುದ್ಧ ಮುಂದುವರಿದ ಧರಣಿ: ಭಾರತೀಯ ಒಲಿಂಪಿಕ್​ ಅಸೋಸಿಯೇಷನ್ ಮುಂದೆ 4 ಬೇಡಿಕೆಯಿಟ್ಟ ಕುಸ್ತಿಪಟುಗಳು

    ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಶೋಷಣೆ ನೀಡಿದ ಪ್ರಕರಣದಲ್ಲಿ ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್​ಐ) ಅಧ್ಯಕ್ಷ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಪದಚ್ಯುತಗೊಳಿಸಬೇಕೆಂದು ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ.

    ದೆಹಲಿಯ ಜಂತರ್​ ಮಂತರ್​ ಮೈದಾನದಲ್ಲಿ ಒಲಿಂಪಿಕ್ಸ್​ ಪದಕ ವಿಜೇತ ಕುಸ್ತಿಪಟುಗಳಾದ ಭಜರಂಗ್​ ಪೂನಿಯಾ, ರವಿಕುಮಾರ್​ ದಹಿಯಾ, ಸಾಕ್ಷಿ ಮಲಿಕ್​, ಒಲಿಂಪಿಯನ್​ ವಿನೇಶ್​ ಪೂಗಟ್​ ಸೇರಿದಂತೆ ಪ್ರಮುಖ ಕುಸ್ತಿಪಟುಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಹಲವು ವರ್ಷಗಳಿಂದ ಬ್ರಿಜ್​ ಭೂಷಣ್​ ಅವರು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಶೋಷಣೆ ನಡೆಸುತ್ತಿದ್ದಾರೆ ಎಂದು ವಿನೇಶ್​ ಪೂಗಟ್​ ಅವರು ಗಂಭೀರ ಆರೋಪ ಮಾಡಿದ್ದಾರೆ.

    ಉತ್ತರ ಪ್ರದೇಶದ ಲಖನೌದ ರಾಷ್ಟ್ರೀಯ ಶಿಬಿರದಲ್ಲಿ ಹಲವಾರು ತರಬೇತುದಾರರು ಮಹಿಳಾ ಕುಸ್ತಿಪಟುಗಳನ್ನು ಶೋಷಿಸಿದ್ದಾರೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ, ಆರೋಪಗಳ ತನಿಖೆಗಾಗಿ ಸರ್ಕಾರವು ಮೂರು ಸದಸ್ಯರ ಸಮಿತಿಯನ್ನು ರಚಿಸುವಂತೆ ಒತ್ತಾಯಿಸಿದ್ದಾರೆ. ಕೇಂದ್ರ ಕ್ರೀಡಾ ಸಚಿವ ಅನುರಾಗ್​ ಠಾಕೂರ್​ ಗುರುವಾರ ರಾತ್ರಿ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬ್ರಿಜ್​ ಭೂಷಣ್​ ಅವರನ್ನು ಸ್ಥಾನದಿಂದ ಕೆಳಗಿಳಿಸುವಂತೆ ಕುಸ್ತಿಪಟುಗಳು ಒತ್ತಾಯಿಸಿದ್ದು, ಈಗಾಗಲೇ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ ಎಂದು ಕ್ರೀಡಾ ಸಚಿವರು ಕುಸ್ತಿಪಟುಗಳಿಗೆ ಭರವಸೆ ನೀಡಿದ್ದಾರೆ. ಮೂಲಗಳ ಪ್ರಕಾರ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಕುಸ್ತಿ ಫೆಡರೇಶನ್, ಕ್ರೀಡಾ ಸಚಿವಾಲಯಕ್ಕೆ ಮಧ್ಯಾಹ್ನ 3 ಗಂಟೆಯೊಳಗೆ ಪ್ರತಿಕ್ರಿಯೆಯನ್ನು ಕಳುಹಿಸಲಿದೆ.

    ತಮ್ಮ ವಿರುದ್ಧ ಬಂದಿರುವ ಆರೋಪವನ್ನು ಬ್ರಿಜ್​ ಭೂಷಣ್​ ತಳ್ಳಿ ಹಾಕಿದ್ದು, ಎಲ್ಲ ಆರೋಪಗಳು ಆಧಾರರಹಿತ ಎಂದಿದ್ದಾರೆ. ಯಾರ ಕರುಣೆಯಿಂದಲೂ ನಾನು ಆ ಸ್ಥಾನದಲ್ಲಿ ಕುಳಿತಿಲ್ಲ. ಸಾರ್ವಜನಿಕರಿಂದ ಆಯ್ಕೆಯಾಗಿದ್ದಾನೆ ಎಂದು ಬ್ರಿಜ್ ಭೂಷಣ್ ಹೇಳಿದ್ದಾರೆ.

    ಭಾರತೀಯ ಬಾಕ್ಸರ್​ ವಿಜೇಂದರ್​ ಸಿಂಗ್​ ಅವರು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರದ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂಬ ಭರವವಸೆಯನ್ನು ಹಲವಾರು ಕುಸ್ತಿಪಟುಗಳು ವ್ಯಕ್ತಪಡಿಸಿದ್ದಾರೆ.

    ಇಂಡಿಯನ್​ ಒಲಿಂಪಿಕ್ಸ್​ ಅಸೊಸಿಯೇಷನ್​ಗೆ ದೂರು ನೀಡಿರುವ ಪ್ರತಿಭಟನಾ ನಿರತ ಕುಸ್ತಿಪಟುಗಳು, ನಾಲ್ಕು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಆದರೆ, 4 ಬೇಡಿಕೆಗಳು ಈ ಕೆಳಕಂಡಂತಿವೆ.

    1. ಆರೋಪದ ಬಗ್ಗೆ ತನಿಖೆ ನಡೆಸಲು ತಕ್ಷಣ ಸಮಿತಿಯೊಂದನ್ನು ರಚಿಬೇಕು
    2. ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ರಾಜೀನಾಮೆ ಪಡೆಯಬೇಕು
    3. ಭಾರತೀಯ ಕುಸ್ತಿ ಒಕ್ಕೂಟವನ್ನು ವಿಸರ್ಜಿಸಬೇಕು
    4. ಕುಸ್ತಿಪಟುಗಳೊಂದಿಗೆ ಸಮಾಲೋಚನೆ ನಡೆಸಿ ಭಾರತೀಯ ಕುಸ್ತಿ ಒಕ್ಕೂಟವನ್ನು ನಡೆಸಲು ಸಮಿತಿಯನ್ನು ರಚಿಸಬೇಕು

    ಪ್ರತಿಭಟನೆ ಆರಂಭವಾಗಿ ಮೂರು ದಿನಗಳು ಕಳೆದರೂ ಬ್ರಿಜ್​ ಭೂಷಣ್​ ವಿರುದ್ಧ ಈವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ಕುಸ್ತಿಪಟುಗಳು ಅಸಮಾಧಾನಕ್ಕೆ ಕಾರಣವಾಗಿದೆ. ಅಲ್ಲದೆ, ಅನೇಕ ಪ್ರತಿಪಕ್ಷಗಳ ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಆರೋಪ ಬಂದರೂ ಕ್ರಮವಹಿಸದೇ ಸರ್ಕಾರ ಆರೋಪಿಯ ರಕ್ಷಣೆಗೆ ನಿಂತಿದೆ ಎಂದು ದೂರಿದ್ದಾರೆ. (ಏಜೆನ್ಸೀಸ್​)

    ಬೆಂಗಳೂರಿನ ಆಸ್ಪತ್ರೆಯಲ್ಲಿ ವೈದ್ಯೆ ಸೋಗಲ್ಲಿ ರೋಗಿಗಳ ಚಿನ್ನಾಭರಣ ಕದ್ದ ನರ್ಸ್! ದಿಕ್ಕಿತಪ್ಪಿಸಲು ಪೊಲೀಸರ ಬಳಿ ಈಕೆ ಕಟ್ಟಿದ ಕಥೆ ಅಂತಿಂಥದ್ದಲ್ಲ

    ಕೆಲಸಕ್ಕೆಂದು ಹೋಗಿ ಕುವೈತ್​ನಲ್ಲಿ ಸಿಲುಕಿ ಪರದಾಡುತ್ತಿರುವ ಮಹಿಳೆ: ನೆರವಿಗೆ ಮುಂದಾದ ಕೊಡಗು ಜಿಲ್ಲಾಡಳಿತ

    ‘ಕರ್ನಾಟಕ ಕೇಂದ್ರದ ಪಾಲಿಗೆ ಎರಡನೇ ದರ್ಜೆಯ ರಾಜ್ಯವೇ?’ ಎಂದು ಪ್ರಶ್ನಿಸಿದ ಗುಂಡೂರಾವ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts