ಜಂಗೀ ಕುಸ್ತಿ ಪಂದ್ಯಾವಳಿಗೆ ಚಾಲನೆ

ಚಿಕ್ಕೋಡಿ: ಕಬಡ್ಡಿ, ಖೋ ಖೋ ಮತ್ತು ಕುಸ್ತಿಯಂತಹ ಗ್ರಾಮೀಣ ಕ್ರೀಡೆಗಳಿಗೆ ಸ್ಪರ್ಧಾತ್ಮಕ ಯುಗದಲ್ಲಿ ಸಾಕಷ್ಟು ಮಹತ್ವ ಬಂದಿದೆ ಎಂದು ಜಿ.ಪಂ.ಸದಸ್ಯ ಪವನ ಕತ್ತಿ ಹೇಳಿದ್ದಾರೆ.

ತಾಲೂಕಿನ ಮುಗಳಿ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಜಂಗೀ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ಯುವ ಜನಾಂಗ ಕ್ರೀಡಾಸಕ್ತಿ ಹೊಂದುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ಜಿಪಂ ಮಾಜಿ ಸದಸ್ಯ ಮಹೇಶ ಭಾತೆ ಮಾತನಾಡಿ, ಮುಗಳಿ ಗ್ರಾಮದ ಹಿರಿಯರು ಬಸವೇಶ್ವರ ಜಾತ್ರೆಯ ಅಂಗವಾಗಿ ಕುಸ್ತಿ ಪಂದ್ಯಾವಳಿ ಹಮ್ಮಿಕೊಳ್ಳುವ ಮುಖಾಂತರ ಯುವ ಜನರಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸುವ ಕೆಲಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು. ಜಾತ್ರೆ ಕಮಿಟಿ ಸದಸ್ಯರು ಮತ್ತು ಗ್ರಾಪಂ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.