More

    ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಸಾಹಿತಿ ಪ್ರಕಾಶ್ ಕಮ್ಮಾರ್ ಇನ್ನಿಲ್ಲ..

    ಶಿವಮೊಗ್ಗ: ತೀವ್ರ ಅನಾರೋಗ್ಯದ ಕಾರಣದಿಂದಾಗಿ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಸಾಹಿತಿ ಪ್ರಕಾಶ್ ಆರ್​. ಕಮ್ಮಾರ್ ಇಂದು ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮಧ್ಯಾಹ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.​

    ಸಾಗರ ಶಿವಲಿಂಗಪ್ಪ ಪ್ರೌಢಶಾಲಾ ಶಿಕ್ಷಕರಾಗಿದ್ದ ಅವರು ನಂತರ ಶಿವಮೊಗ್ಗ ಡಿ.ವಿ.ಎಸ್. ಸಂಯುಕ್ತ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು. ತಮ್ಮ ವಿಶ್ರಾಂತಿ ಜೀವನವನ್ನು ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ಮತ್ತೂರಿನ ಶಾರದಾ ವಿಲಾಸ ಪ್ರೌಢಶಾಲಾ ಮತ್ತು ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದರು.

    ಇದನ್ನೂ ಓದಿ: ‘ರಾಣಿ’ಯನ್ನು ಕೊಂದು ಹೂತಿಟ್ಟ ಭೂಪ; ದೇವಸ್ಥಾನದಲ್ಲೂ ಕದ್ದು ಸಿಕ್ಕಿಬಿದ್ದ; ಇಂದು ಆಕೆಯ ಶವ ಹೊರತೆಗೆದ ಪೊಲೀಸರು..

    ಸಾಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಪದಾಧಿಕಾರಿ ಆಗಿದ್ದ ಅವರು ಕವಿ, ಕಥೆಗಾರ, ಲೇಖಕರಾಗಿಯೂ ಗುರುತಿಸಿಕೊಂಡಿದ್ದರು. ಟಿ. ಮಹಾಬಲೇಶ್ವರ ಭಟ್ಟರ ಜೊತೆ ಕಸಾಪ ಕಾರ್ಯದರ್ಶಿ ಆಗಿದ್ದ ಅವರು ಡಿ. ಮಂಜುನಾಥ್ ಜಿಲ್ಲಾ ಅಧ್ಯಕ್ಷರಾಗಿದ್ದ ಮೊದಲ ಅವಧಿಯಲ್ಲಿ ಸಾಗರ ತಾಲೂಕು ಕಸಾಪ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಮಾತ್ರವಲ್ಲ ಕಸಾಪ ಭವನಕ್ಕೆ ನಿವೇಶನ ಪಡೆಯುವಲ್ಲಿ ಶ್ರಮಿಸಿದ್ದರು.

    ಶಿವಮೊಗ್ಗ ಕರ್ನಾಟಕ ಸಂಘದ ಕಾರ್ಯಕಾರಿ ಸದಸ್ಯರಾಗಿದ್ದ ಅವರು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅವರು ಪತ್ನಿ, ಪುತ್ರಿ, ಪುತ್ರ ಮೋಹನ್ ಕಮ್ಮಾರ್, ಸಹೋದರ, ಸಹೋದರಿ ಸೇರಿ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

    ಸ್ನಾನಕ್ಕೆಂದು ಹೋಗಿದ್ದ ಎಂಬಿಬಿಎಸ್​ ವಿದ್ಯಾರ್ಥಿನಿ ಸಾವು; 2 ಗಂಟೆ ಬಳಿಕ ಬಾತ್​ರೂಮ್​ ಬಾಗಿಲು ಮುರಿದು ನೋಡಿದ ಮನೆಯವರಿಗೆ ಶಾಕ್​!

    ಆಟ ಆಡುತ್ತಲೇ ಪ್ರಾಣ ಕಳೆದುಕೊಂಡ ಬಾಲಕ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಡಿದ್ದೇ ಮುಳುವಾಯ್ತೇ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts