

ಮಂಡ್ಯ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್(ಸಿಎಆರ್ ಮತ್ತು ಡಿಎಆರ್) 3,064 ಹುದ್ದೆಗೆ ಜ.28ರಂದು ಬೆಳಗ್ಗೆ 11 ಗಂಟೆಯಿಂದ 12.30ರವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ವಸ್ತ್ರ ಸಂಹಿತೆಯಂತೆ ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ ಧರಿಸುವುದು ಕಡ್ಡಾಯವಾಗಿದೆ. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ಗಳನ್ನು ಧರಿಸಬೇಕು. ಜೀನ್ಸ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್ ಹಾಗೂ ಶೂಗಳನ್ನು ನಿಷೇಧಿಸಲಾಗಿದೆ. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣ ಅಥವಾ ಉಂಗುರ ಮತ್ತು ಕಡಗ ಧರಿಸುವಂತಿಲ್ಲ.
ಲಿಖಿತ ಪರೀಕ್ಷೆಗೆ ಹಾಜರಾಗುವ ಸಂಬಂಧ ಕರೆಪತ್ರಗಳನ್ನು ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ www.ksp.gov.in ನಿಂದ ಪಡೆದುಕೊಳ್ಳಬಹುದು. ಪಾರದರ್ಶಕ ಗಣಕಿಕೃತ ಸಂಪೂರ್ಣ ವಸ್ತು ನಿಷ್ಟ ಅರ್ಹತೆ ಮತ್ತು ಮೀಸಲಾತಿ ಆಧಾರದ ಮೇಲೆ ಪರೀಕ್ಷೆ ನಡೆಯಲಿದೆ. ಆದ್ದರಿಂದ ಅಭ್ಯರ್ಥಿಯು ಉದ್ಯೋಗ ಪಡೆಯುವ ಸಲುವಾಗಿ ಯಾವುದೇ ವ್ಯಕ್ತಿಗೆ ಹಣ ನೀಡಬಾರದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.