More

    ಡಬ್ಲ್ಯುಟಿಸಿ ಫೈನಲ್ ಪಂದ್ಯಕ್ಕಿಲ್ಲ ಕನ್ನಡಿಗರು ; 15ರ ಬಳಗದಲ್ಲೂ ಕೆಎಲ್ ರಾಹುಲ್, ಮಯಾಂಕ್‌ಗೆ ಸ್ಥಾನವಿಲ್ಲ

    ಸೌಥಾಂಪ್ಟನ್: ವಿರಾಟ್ ಕೊಹ್ಲಿ ಸಾರಥ್ಯದ 15 ಸದಸ್ಯರ ಭಾರತ ತಂಡವನ್ನು ಜೂನ್ 18 ರಿಂದ ನಡೆಯಲಿರುವ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ (ಡಬ್ಲ್ಯುಟಿಸಿ) ಫೈನಲ್ ಪಂದ್ಯಕ್ಕೆ ಬಿಸಿಸಿಐ ಮಂಗಳವಾರ ಪ್ರಕಟಿಸಿತು. ಕನ್ನಡಿಗರಾದ ಮಯಾಂಕ್ ಅಗರ್ವಾಲ್ ಹಾಗೂ ಕೆಎಲ್ ರಾಹುಲ್ 15ರ ಬಳಗದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದು, ಪ್ರತಿಷ್ಠಿತ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಆಡುವ ಅವಕಾಶ ತಪ್ಪಿಸಿಕೊಂಡಿದ್ದಾರೆ. ತವರಿನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನೀರಸ ಬ್ಯಾಟಿಂಗ್ ಪ್ರದರ್ಶಿಸಿದ್ದ ಶುಭಮಾನ್ ಗಿಲ್ ಅಚ್ಚರಿಯ ರೀತಿಯಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಆಸೀಸ್ ಪ್ರವಾಸದ ಬ್ರಿಸ್ಬೇನ್ ಪಂದ್ಯ ಹೀರೋ ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್ ಹಾಗೂ ತವರಿನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಮಿಂಚಿದ್ದ ಅಕ್ಷರ್ ಪಟೇಲ್ ತಂಡದಿಂದ ಹೊರಬಿದ್ದಿದ್ದಾರೆ. ಆಸ್ಟ್ರೇಲಿಯಾದ ಪ್ರವಾಸದಲ್ಲಿ ಗಾಯದ ಸಮಸ್ಯೆ ಎದುರಿಸಿದ್ದ ಉಮೇಶ್ ಯಾದವ್, ಮೊಹಮದ್ ಶಮಿ ಹಾಗೂ ಹನುಮ ವಿಹಾರಿ ತಂಡಕ್ಕೆ ವಾಪಸಾಗಿದ್ದಾರೆ.

    ಇದನ್ನೂ ಓದಿ: ಟೀಂ ಇಂಡಿಯಾ ಅಭ್ಯಾಸ ಪಂದ್ಯದಲ್ಲಿ ಸ್ಫೋಟಿಸಿದ ರಿಷಭ್​ ಪಂತ್​,

    ಮಯಾಂಕ್, ರಾಹುಲ್‌ಗೆ ತಪ್ಪಿದ ಛಾನ್ಸ್
    ಅಭ್ಯಾಸ ಪಂದ್ಯದಲ್ಲಿ ತಂಡವೊಂದಕ್ಕೆ ನಾಯಕನಾಗಿದ್ದ ಕೆಎಲ್ ರಾಹುಲ್‌ಗೆ ಅವಕಾಶ ನಿರೀಕ್ಷಿಸಲಾಗಿತ್ತು. ಆಸ್ಟ್ರೇಲಿಯಾ ಪ್ರವಾಸದಲ್ಲಿ ಆಡಿದ ಬಹುತೇಕ ಆಟಗಾರರಿಗೆ 15ರ ಬಳಗಕ್ಕೆ ಮಣೆ ಹಾಕಲಾಗಿದೆ. ಆರಂಭಿಕನಾಗಿ ಆಡುವ ನಿರೀಕ್ಷೆಯಲ್ಲಿದ್ದ ಮಯಾಂಕ್ ಅಗರ್ವಾಲ್ ಕೂಡ ಅವಕಾಶ ತಪ್ಪಿಸಿಕೊಂಡಿದ್ದಾರೆ. ರಾಹುಲ್-ಮಯಾಂಕ್ ಜೋಡಿ ಬದಲಿಗೆ ರೋಹಿತ್ ಶರ್ಮ ಹಾಗೂ ಶುಭಮಾನ್ ಗಿಲ್ ಜೋಡಿಗೆ ಆಯ್ಕೆ ಸಮಿತಿ ಮತ್ತೊಮ್ಮೆ ಮಣೆಹಾಕಿದೆ. ಬ್ರಿಸ್ಬೇನ್ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ, 7 ವಿಕೆಟ್ ಕಬಳಿಸಿದ್ದ ಶಾರ್ದೂಲ್ ಠಾಕೂರ್ ಬದಲಿಗೆ ಉಮೇಶ್ ಯಾದವ್‌ಗೆ ಅವಕಾಶ ಕಲ್ಪಿಸಲಾಗಿದೆ. ಆರ್. ಅಶ್ವಿನ್ ಹಾಗೂ ರವೀಂದ್ರ ಜಡೇಜಾ ತಂಡಕ್ಕೆ ವಾಪಸಾದ ಹಿನ್ನೆಲೆಯಲ್ಲಿ ಅಕ್ಷರ್ ಪಟೇಲ್ ಹೊರಗುಳಿಯುವುದು ಅನಿವಾರ್ಯವಾಗಿದೆ.

    ಇದನ್ನೂ ಓದಿ: ಕರ್ನಾಟಕದ ಮನೀಷ್ ಪಾಂಡೆ ಲಂಕಾ ಪ್ರವಾಸಕ್ಕೆ ನಾಯಕನಾಗಬೇಕಿತ್ತು ಎಂದ ಭಾರತ ತಂಡದ ಮಾಜಿ ವೇಗಿ

    ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ಶುಭಮಾನ್ ಗಿಲ್, ರೋಹಿತ್ ಶರ್ಮ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೀ), ಆರ್.ಅಶ್ವಿನ್, ರವೀಂದ್ರ ಜಡೇಜಾ, ಮೊಹಮದ್ ಶಮಿ, ಜಸ್‌ಪ್ರೀತ್ ಬುಮ್ರಾ, ಇಶಾಂತ್ ಶರ್ಮ, ಮೊಹಮದ್ ಸಿರಾಜ್, ವೃದ್ಧಿಮಾನ್ ಸಾಹ (ವಿಕೀ), ಉಮೇಶ್ ಯಾದವ್, ಹನುಮ ವಿಹಾರಿ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts