21.7 C
Bengaluru
Tuesday, January 21, 2020

ಮಹಿಳಾ ದೌರ್ಜನ್ಯ ತಡೆಗಟ್ಟಲು ಶ್ರಮಿಸಿ

Latest News

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ ಸಿದ್ಧಿವಿನಾಯಕನಿಗೆ 35 ಕಿಲೋ ಚಿನ್ನ | ದೆಹಲಿ ಮೂಲದ ಉದ್ಯಮಿಯ ಕಾಣಿಕೆಯ ಮೌಲ್ಯ 14 ಕೋಟಿ ರೂಪಾಯಿ!

ಮುಂಬೈ: ಕಳೆದ 200ಕ್ಕೂ ಹೆಚ್ಚು ವರ್ಷಗಳ ಅವಧಿಯಲ್ಲಿ ಮುಂಬೈ ಸಿದ್ಧಿವಿನಾಯಕ ದೇವರಿಗೆ ಇದೇ ಮೊದಲ ಬಾರಿಗೆ 35 ಕಿಲೋ ಚಿನ್ನ ಕಾಣಿಕೆ ರೂಪದಲ್ಲಿ...

ವಿಜಯವಾಣಿ ಸುದ್ದಿಜಾಲ ಯಾದಗಿರಿ
ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆ ಪಾತ್ರ ಮಹತ್ವದ್ದಾಗಿದೆ. ಶಾಲೆ, ಕಾಲೇಜು, ವಸತಿನಿಲಯಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಕನರ್ಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಕೆ.ಜಿ.ನಾಗಲಕ್ಷ್ಮೀಬಾಯಿ ಸೂಚಿಸಿದರು.

ಗುರುವಾರ ಜಿಪಂ ಕಚೇರಿ ಸಭಾಂಗಣದಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಹೆಚ್ಚಿನ ಮಹಿಳೆಯರು ತಮ್ಮ ಸಂಕಷ್ಟಗಳನ್ನು ಹೇಳಿಕೊಳ್ಳಲು ಮುಂದೆ ಬರುವುದಿಲ್ಲ. ಕೇವಲ ಸಮಸ್ಯೆ ಹೇಳಿಕೊಳ್ಳುವುದರಿಂದಲೇ ಅವರ ಅರ್ಧ ಸಮಸ್ಯೆಗಳು ದೂರವಾಗುತ್ತವೆ. ಈ ನಿಟ್ಟಿನಲ್ಲಿ ಹೆಣ್ಣುಮಕ್ಕಳ ಹಿತಕ್ಕಾಗಿ ಇರುವ ಕಾನೂನು, ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಮಹಿಳೆಯರು ಶಿಕ್ಷಣವಂತರಾದರೆ ಅಭಿವೃದ್ಧಿ ಸಾಧ್ಯವಾಗುತ್ತದೆ. ಗಂಡುಮಕ್ಕಳಂತೆ ಹೆಣ್ಣುಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಹೇಳಿದರು.
ಸುರಪುರ ತಾಲೂಕಿನ ನಗನೂರ ಗ್ರಾಮದ ಸಕರ್ಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಿದ್ಯಾಥರ್ಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕೇಳಿದ ಮಹಿಳಾ ಆಯೋಗದ ಅಧ್ಯಕ್ಷರು, ಇಂತಹ ಶಿಕ್ಷಕನನ್ನು ಅಮಾನತು ಮಾಡಿದರೆ ಸಾಲದು. ತಕ್ಷಣ ಬಂಧಿಸಬೇಕು. ಅದೇ ರೀತಿ ಗುರುಮಠಕಲ್ ವಸತಿನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಖಡಕ್ಕಾಗಿ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾತನಾಡಿ, ಜಿಲ್ಲೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಡಿ ಕಳೆದ ಸಾಲಿನಲ್ಲಿ 4 ಕೊಲೆ ಪ್ರಕರಣಗಳು ದಾಖಲಾಗಿದ್ದು, 2 ನ್ಯಾಯಾಲಯ ವಿಚಾರಣೆ ಮತ್ತು 2 ಪ್ರಕರಣಗಳ ತನಿಖೆ ನಡೆಯುತ್ತಿವೆ. 13 ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, 1 ಸುಳ್ಳು ಎಂದು ರುಜುವಾತಾಗಿದೆ. 5 ನ್ಯಾಯಾಲಯ ವಿಚಾರಣೆ ಮತ್ತು 7 ತನಿಖೆ ಹಂತದಲ್ಲಿವೆ ಎಂದರು.

ವರದಕ್ಷಿಣೆ ಸಾವು ಎಂದು ದಾಖಲಾದ 2 ಪ್ರಕರಣಗಳು ನ್ಯಾಯಾಲಯ ವಿಚಾರಣೆ ಹಂತದಲ್ಲಿವೆ. ವರದಕ್ಷಿಣೆ ಕಿರುಕುಳ 18 ಪ್ರಕರಣ ದಾಖಲಾಗಿವೆ. ಕಳೆದ ಸಾಲಿನಲ್ಲಿ 42 ಕಿರುಕುಳ ಪ್ರಕರಣಗಳು, ಪ್ರಸಕ್ತ ಸಾಲಿನಲ್ಲಿ 3 ಪ್ರಕರಣಗಳು ದಾಖಲಾಗಿವೆ. ಐಪಿಸಿ 306 ಅಡಿ 3 ಪ್ರಕರಣ ದಾಖಲಾಗಿವೆ. ಕಳೆದ ಸಾಲಿನಲ್ಲಿ 6 ಮಹಿಳೆಯರ ಅಪಹರಣ ಪ್ರಕರಣಗಳು ಮತ್ತು ಪ್ರಸಕ್ತ ಸಾಲಿನಲ್ಲಿ 1 ಪ್ರಕರಣ ದಾಖಲಾಗಿದೆ ಎಂದು ವಿವರಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 5.83 ಲಕ್ಷ ಮಹಿಳೆಯರಿದ್ದು, 0-6 ವರ್ಷದೊಳಗಿನ 1.90 ಲಕ್ಷ ಮಕ್ಕಳಿದ್ದಾರೆ. 1000 ಜನಸಂಖ್ಯೆಗೆ 989 ಲಿಂಗಾನುಪಾತ ಇದ್ದು, ಮಕ್ಕಳ ಲಿಂಗಾನುಪಾತ 951 ಇದೆ. ಮಹಿಳೆಯರ ಸಾಕ್ಷರತೆ ಪ್ರಮಾಣ ಶೇ.41.38ರಷ್ಟಿದೆ. ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005 ಮತ್ತು ನಿಯಮ 2006 ಅಡಿ ಜಿಲ್ಲೆಯ ಯಾವುದೇ ತಾಲೂಕಿನಲ್ಲಿ ಸಂರಕ್ಷಣಾಧಿಕಾರಿಗಳು ಇರುವುದಿಲ್ಲ. ಯಾದಗಿರಿ, ಸುರಪುರ, ಶಹಾಪುರ, ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳೇ ಸಂರಕ್ಷಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಸಭೆಗೆ ತಿಳಿಸಿದರು.

ಜಿಪಂ ಸಿಇಒ ಕವಿತಾ ಎಸ್.ಮನ್ನಿಕೇರಿ, ಜಂಟಿ ಕೃಷಿ ನಿರ್ದೇಶಕಿ ಆರ್.ದೇವಿಕಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಂ.ಎಸ್.ಅಲ್ಲಾಬಕಷ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹಬೀಬ್ ಉಸ್ಮಾನ್ ಪಟೇಲ್, ಡಾ.ನೀಲಮ್ಮ ರೆಡ್ಡಿ, ಡಿಡಿಪಿಐ ಶ್ರೀಶೈಲ್ ಬಿರಾದಾರ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

ಸಭೆಗೂ ಮುನ್ನ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಆಯೋಗದ ಅಧ್ಯಕ್ಷರು ಆಸ್ಪತ್ರೆಗೆ ಬರುವ ಸಾರ್ವಜನಿಕರು ಮತ್ತು ರೋಗಿಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು ಮತ್ತು ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವಂತೆ ತಾಕೀತು ಮಾಡಿದರು. ತದನಂತರ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿದರು.

ಡಿಸಿ ಮೇಲೆ ಆಯೋಗದ ಅಧ್ಯಕ್ಷರು ಗರಂ: ಪ್ರಗತಿ ಪರಿಶೀಲನಾ ಸಭೆಗೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರ ಬಾರದ ಕಾರಣ ಮಹಿಳಾ ಆಯೋಗದ ಅಧ್ಯಕ್ಷರ ಅಸಮಾಧಾನಕ್ಕೆ ಕಾರಣವಾಯಿತು. ನನನ್ನು ಜಿಲ್ಲೆಗೆ ಕರೆಸಿ ನನಗೆ ಮತ್ತು ಜಿಲ್ಲೆಯ ಮಹಿಳಾ ವರ್ಗಕ್ಕೆ ಡಿಸಿ ಅವಮಾನ ಮಾಡಿದ್ದಾರೆ. ನಾನು ಬರುವುದು ಗೊತ್ತಿದ್ದರೂ ಸಭೆಗೆ ಆಗಮಿಸಿಲ್ಲ. ಮಹಿಳೆಯರ ಬಗ್ಗೆ ಗೌರವವಿಲ್ಲದ ಅಧಿಕಾರಿಗಳನ್ನು ನಾನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...