ಪ್ರತಿಭೆ ಗುರುತಿಸವ ಕೆಲಸ ನಡೆಯಲಿ

ಯಾದಗಿರಿ: ಹಿಂದುಳಿದ ಹೈದರಾಬಾದ್ ಕನರ್ಾಟಕ ಪ್ರದೇಶದಲ್ಲಿ ಯುವ ಜನತೆಗೆ ಉದ್ಯೋಗವಕಾಶಗಳನ್ನು ಕಲ್ಪಿಸಲು ಸಕರ್ಾರದ ಜತೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದೆ ಬರುವ ಅವಶ್ಯಕತೆ ಇದೆ ಎಂದು ಉಪನ್ಯಾಸಕ ಡಾ.ಗೋವಿಂದರಡ್ಡಿ ಅಭಿಪ್ರಾಯಪಟ್ಟರು.

ನಗರದ ಡಿಡಿಯು ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ಡಾ.ಭೀಮಣ್ಣ ಮೇಟಿ ಫೌಂಡೇಶನ್ ಮತ್ತು ಡಿಡಿಯು ಇಂಟರ್ ನ್ಯಾಷನಲ್ ಸ್ಕೂಲ್ಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಬೃಹತ್ ಖಾಸಗಿ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಶಿಕ್ಷಕರ ಹುದ್ದೆಗಳ ನೇಮಕಾತಿ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೈ.ಕ.ಪ್ರದೇಶದಲ್ಲಿ ಸಾಕಷ್ಟು ಪ್ರತಿಭೆಗಳಿದ್ದು ಅವುಗಳನ್ನು ಗುರುತಿಸುವ ಕೆಲಸವಾಗಬೇಕಿದೆ ಎಂದರು.
ಸ್ಪಧರ್ಾತ್ಮಕವಾದ ಇಂದಿನ ಯುಗದಲ್ಲಿ ನಾವು ಎಷ್ಟೇ ಜ್ಞಾನ ಪಡೆದರೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೂದಲೆಳೆ ಅಂತರದಲ್ಲಿ ಅವಕಾಶ ವಂಚಿತರಾಗುತ್ತೇವೆ. ಹಾಗಂತ ಜೀವನದಲ್ಲಿ ಖಿನ್ನತೆಗೆ ಒಳಗಾಗುವ ಅವಶ್ಯಕತೆ ಇಲ್ಲ. ಸದಾ ಪ್ರಯತ್ನಶೀಲರಾಗುವ ಮೂಲಕ ನಮ್ಮ ಗುರಿಯನ್ನು ತಲುಪಬೇಕು ಎಂದು ಸಲಹೆ ನೀಡಿದರು.

ಮೇಳ ಉದ್ಘಾಟಿಸಿ ಮಾತನಾಡಿದ ಡಿಡಿಯು ಶಿಕ್ಷಣ ಸಂಸ್ಥೆ ಸಂಸ್ಥಾಪಕ ಡಾ.ಭೀಮಣ್ಣ ಮೇಟಿ, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರತಿಭಾವಂತರ ಅವಶ್ಯಕತೆ ಇದೆ. ಆದರೆ ಅವರನ್ನು ಗರುತಿಸುವ ಕೆಲಸವಾಗುತ್ತಿಲ್ಲ. ಈ ಬಗ್ಗೆ ಸೂಕ್ಷ್ಮವಾಗಿ ಅವಲೋಕನ ಮಾಡಿದ ನಮ್ಮ ಸಂಸ್ಥೆ ಇಂಥದ್ದೊಂದು ಮೇಳ ಆಯೋಜನೆ ಮಾಡುವ ಮೂಲಕ ವಿನೂತನ ಪ್ರಯೋಗಕ್ಕೆ ಮುಂದಾಗಿದೆ ಎಂದು ಹೇಳಿದರು.

ಮೇಳದಲ್ಲಿ ಯಾದಗಿರಿ ಸೇರಿದಂತೆ ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ ಜಿಲ್ಲೆಗಳ ಉದ್ಯೋಗಕಾಂಕ್ಷಿಗಳು ಪಾಲ್ಗೊಂಡಿದ್ದರು. ಗುರುನಾಥ ದೇಸಾಯಿ, ಮಲ್ಲಿಕಾಜರ್ುನ ಮೇಟಿ ಸೇರಿದಂತೆ ಇನ್ನಿತರರು ಇದ್ದರು.