ಭಕ್ತರ ಪಾಲಿನ ಕಾಮಧೇನು

Latest News

ಬೆಂಗಳೂರಿಗೆ ಇನ್ನೊಂದು ರೈಲು

ಶ್ರವಣ್‌ಕುಮಾರ್ ನಾಳ ಪುತ್ತೂರು ಅಗತ್ಯವಿರುವ 2ಪ್ರದೇಶಗಳಿಗೆ ಅಥವಾ ಬೃಹತ್ ನಗರದಿಂದ ಸಣ್ಣ ಪಟ್ಟಣಗಳಿಗೆ ವೇಗವಾಗಿ ಸಂಪರ್ಕಿಸಲು ನೆರವಾಗುವ ಉದ್ದೇಶದಿಂದ ತುಮಕೂರು-ಯಶವಂತಪುರ ಸೇರಿ ದೇಶದಲ್ಲಿ 10 ಸೇವಾ ಸರ್ವೀಸ್...

ಕ್ರಿಕೆಟಲ್ಲೂ ಹನಿಟ್ರ್ಯಾಪ್!

ಬೆಂಗಳೂರು: ‘ಸಭ್ಯರ ಕ್ರೀಡೆ’ ಕ್ರಿಕೆಟ್​ಗೆ ಬೆಟ್ಟಿಂಗ್ ದಂಧೆಯ ಕಳಂಕ ಮೆತ್ತಿದ ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಹಿಂದೆ ಹನಿಟ್ರಾ್ಯಪ್ ಅಪಸವ್ಯವೂ ಕಾಣಿಸಿಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ನಲ್ಲಿ ಸಿಕ್ಕಿಬಿದ್ದ ಆಟಗಾರರನ್ನು...

ಜೋಡಿ ಕೊಲೆ ಆರೋಪಿ ಸೆರೆ

ಈಶ್ವರಮಂಗಲ: ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಅಜಲಾಡಿ ಸಮೀಪದ ಹೊಸಮಾರು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿಯನ್ನು ಗ್ರಾಮಾಂತರ ಠಾಣಾ ಇನ್ಸ್‌ಪೆಕ್ಟರ್...

ಕೆಪಿಎಸ್​ಸಿ ​ಸಂದರ್ಶನದ ವೇಳೆ ನಡೆಯುವ ಅವ್ಯವಹಾರ ತಪ್ಪಿಸಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಣಯ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್​ಸಿ) ಸಂದರ್ಶನ ವೇಳೆ ಆಗಬಹುದಾದ ಅವ್ಯವಹಾರ ನಿಯಂತ್ರಿಸಿ ನೇಮಕಾತಿಯಲ್ಲಿ ಬಿಗಿ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಬುಧವಾರ...

ಖಂಡಿಗೆ ಕಿಂಡಿ ಅಣೆಕಟ್ಟು ದುರಸ್ತಿಗಿಲ್ಲ ಕ್ರಮ

ಲೋಕೇಶ್ ಸುರತ್ಕಲ್ ಪಾವಂಜೆ ಖಂಡಿಗೆ ಬಳಿ ಇರುವ ನಂದಿನಿ ನದಿ ಕಿಂಡಿ ಅಣೆಕಟ್ಟಿನ ದುರಸ್ತಿಗೆ ಅಧಿಕಾರಿಗಳು ಖಚಿತ ಯೋಜನೆ ರೂಪಿಸಿಲ್ಲ. ಅಣೆಕಟ್ಟು ನಿರ್ವಹಣೆಗೆ ಸಮಿತಿಯೇ ರಚನೆಯಾಗಿಲ್ಲ. ಹಾಗಾಗಿ...

ಕೊಡೇಕಲ್: ನೈತಿಕ ಮೌಲ್ಯಗಳ ತಳಹದಿಯ ಮೇಲೆ ಕಳೆದ 18 ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕವಾಗಿ ಮತ್ತು ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಶ್ರೀ ಗುರು ದುರದುಂಡೇಶ್ವರ ವಿರಕ್ತಮಠ ಭಕ್ತರ ಪಾಲಿನ ಕಾಮಧೇನುವಾಗಿದೆ ಎಂದು ಧಾರವಾಡ ಮುರುಘಾ ಮಠದ ಶ್ರೀ ಶಾಂತವೀರ ಮುರಘೇಂದ್ರ ಸ್ವಾಮೀಜಿ ನುಡಿದರು.

ಪಟ್ಟಣದ ಶ್ರೀ ಗುರು ದುರದುಂಡೇಶ್ವರ ವಿರಕ್ತಮಠದಲ್ಲಿ ಗುರುವಾರ ನಡೆದ 19ನೇ ವರ್ಷದ ಕಾತರ್ಿಕೋತ್ಸವ ನಿಮಿತ್ತ ಉಚಿತ ಸಾಮೂಹಿಕ ವಿವಾಹ ಮತ್ತು ಧಾಮರ್ಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸದ್ಭವ, ಸದ್ಗುಣಗಳನ್ನು ಆದರ್ಶವಾಗಿಟ್ಟುಕೊಂಡು ಧರ್ಮ, ಸಂಸ್ಕೃತಿ ಸದಾಚಾರದಿಂದ ಜೀವನ ನಡೆಸುವ ಮೂಲಕ ಸನಾತನ ಧರ್ಮವನ್ನು ರಕ್ಷಣೆ ಮಾಡೋಣ. ಆ ಮೂಲಕ ದೇಶದ ಸಂಸ್ಕೃತಿಯನ್ನು ಉಳಿಸುವತ್ತ ಗಮನಹರಿಸೊಣ ಎಂದರು.

ಮುದೇನೂರಿನ ಶ್ರೀ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಸಾಮೂಹಿಕ ವಿವಾಹಗಳಿಗೆ ನಾಂದಿ ಹಾಡಿದ ಗುಡ್ಡಾಪುರದ ಶ್ರೀ ದಾನಮ್ಮ ತಾಯಿ ಅಂದು ದುಂದುವೆಚ್ಚದ ಮದುವೆಗಳಿಗೆ ಕಡಿವಾಣ ಹಾಕಿದ್ದರು. ಅದರಂತೆ ಇಂದು ಸಗರನಾಡಿನಲ್ಲಿ 18 ವರ್ಷಗಳಿಂದ ಸಾಮೂಹಿಕ ವಿವಾಹ ಆಯೋಜಿಸಲಾಗುತ್ತಿದೆ. ಶ್ರೀ ಶಿವಕುಮಾರ ಸ್ವಾಮೀಜಿ ಬಡವರ ಪಾಲಿನ ನಿಧಿಯಾಗಿದ್ದಾರೆ ಎಂದು ಹೇಳಿದರು.

ಜಿಪಂ ಅಧ್ಯಕ್ಷ ರಾಜಶೇಖರ ಪಾಟೀಲ್ ವಜ್ಜಲ್ ಮಾತನಾಡಿದರು. ತಿಮ್ಮಮ್ಮ ಶಂಭನಗೌಡ ಅಧ್ಯಕ್ಷತೆಯಲ್ಲಿ ಜರುಗಿದ ಸಾಮೂಹಿಕ ವಿವಾಹದಲ್ಲಿ 15 ಜೋಡಿ ಹಸೆಮಣೆ ಏರಿದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಸಣ್ಣ ಕಂಚಗಾರ, ಗೌರವ ಡಾಕ್ಟರೇಟ್ ಪಡೆದ ಡಾ.ಬಸನಗೌಡ ಅಳ್ಳಿಕೋಟಿ, ರಾಜಶೇಖರ ಪಾಟೀಲ್, ಶ್ರೀ ಮಲ್ಲಿಕಾರ್ಜುನ ಸ್ವಾಮಿ, ಆಮಯ್ಯ ಮಠ ಅವರನ್ನು ಶ್ರೀಮಠದ ವತಿಯಿಂದ ಸನ್ಮಾನಿಸಲಾಯಿತು.

ಕೊಡೇಕಲ್ ಮಹಲಿನಮಠದ ಶ್ರೀ ವೃಷಭೇಂದ್ರ ಅಪ್ಪನವರು, ಗುರುಮಠಕಲ್ ಶಾಖಾಮಠದ ಶ್ರೀ ಶಾಂತವೀರ ಮುರುಘೇಂದ್ರ ಸ್ವಾಮೀಜಿ, ಶಹಾಪುರ ಶ್ರೀ ಫಕಿರೇಶ್ವರ ಮಠದ ಶ್ರೀ ಗುರುಪಾದ ಸ್ವಾಮೀಜಿ, ಶ್ರೀ ಪಂಚಮ ಸಿದ್ದಲಿಂಗ ಸ್ವಾಮೀಜಿ, ಸಜ್ಜಲಗುಡ್ಡದ ಶ್ರೀ ದೊಡ್ಡಬಸವಾರ್ಯ ತಾತನವರು, ಕರಡಕಲ್ನ ಶ್ರೀ ಶಾಂತರುದ್ರಮುನಿ ಸ್ವಾಮೀಜಿ, ಗುಳಬಾಳದ ಶ್ರೀ ಹುಚ್ಚೇಶ್ವರ ಸ್ವಾಮೀಜಿ, ಶ್ರೀ ಗಾಂಗೈಪಿತ ಸ್ವಾಮೀಜಿ, ಶ್ರೀ ದಾವಲಮಲಿಕ್ ಮುತ್ಯಾ, ಸೋಮಲಿಂಗ ಸ್ವಾಮೀಜಿ, ಸಾತಮ್ಮತಾಯಿ, ಬೋರಮ್ಮ ತಾಯಿ, ಶೋಭಾ ತಾಯಿ ಸೇರಿ ಹಲವು ಪೂಜ್ಯರು ಭಾಗವಹಿಸಿದ್ದರು.

ಪ್ರಮುಖರು ರಾಜಾ ವೇಂಕಟಪ್ಪ ನಾಯಕ ಜಹಗೀರದಾರ, ರಾಣಿ ರಂಗಮ್ಮ ಜಹಗಿರದಾರ, ಜಿಪಂ ಸದಸ್ಯ ನಾರಾಯಣ ನಾಯ್ಕ, ತಾಪಂ ಸದಸ್ಯ ಮೋಹನ ಪಾಟೀಲ್, ಡಾ.ಬಿ.ಬಿ.ಬಿರಾದಾರ, ನಾಗಣ್ಣ ಸಾಹು ದಂಡಿನ, ಎಚ್.ಸಿ.ಪಾಟೀಲ್, ರಂಗನಾಥ ದೋರಿ, ಭೀಮನಗೌಡ ಬಿರಾದಾರ, ಮಹಿಮಪ್ಪ ಸೊನ್ನಾಪೂರ, ಸೋಮನಿಂಗಪ್ಪ ದೋರಿ, ಮಲ್ಲು ನವಲಗುಡ್ಡ, ಕನಕು ಜಿರಾಳ, ದೇವು ಗೋಪಾಳಿ, ಶಾಮಸುಂದರ ಜೋಶಿ, ವೀರಸಂಗಪ್ಪ ಹಾವೇರಿ, ಬಿ.ಎನ್.ಪೊಲೀಸ್ ಪಾಟೀಲ್, ಅಶೋಕ ಸಾಹುಬಳಿ, ನಿಂಗಣ್ಣ ಸಾಹುಬಳಿ, ರಾಮನಗೌಡ ವಠಾರ ಇತರರಿದ್ದರು.

ಹೇಮರಾಜ ಶಾಸ್ತ್ರೀ ಪ್ರಾಸ್ತಾವಿಕ ಮಾತನಾಡಿದರು. ನೀಲಮ್ಮ ನಾಗರಬೆಟ್ಟ ಮತ್ತು ಕೋರಿಸಂಗಯ್ಯ ಗಡ್ಡದ ನಿರೂಪಣೆ ಮಾಡಿದರು. ಕೊಟ್ರೇಶ ಕೋಳುರ ಸ್ವಾಗತಿಸಿದರು. ಬಸವರಾಜ ಭದ್ರಗೋಳ ವಂದಿಸಿದರು. ಕೊಡೇಕಲ್, ಬರದೇವನಾಳ, ತೀರ್ಥ, ಬೂದಿಹಾಳ, ಹಗರಟಗಿ, ಸಾಲವಾಡಗಿ ಸುತ್ತಲಿನ ಗ್ರಾಮಗಳ ನೂರಾರು ಭಕ್ತರು ಆಗಮಿಸಿದ್ದರು. ಮಲ್ಲಣ್ಣ ಹೂಗಾರ, ನಾಗರಾಜ ಹೂಗಾರ, ದೇವರಾಜ ಹೂಗಾರ ಸಂಗೀತ ಸೇವೆ ಸಲ್ಲಿಸಿದರು.

ಪುರಾಣ ಮಂಗಲ: 23 ದಿನಗಳಿಂದ ನಡೆದುಕೊಂಡು ಬಂದಿರುವ ಶರಣರ ಚರಿತಾಮೃತ ಪ್ರವಚನದ ಮಂಗಲೋತ್ಸವ ಕಾರ್ಯಕ್ರಮ ಬುಧವಾರ ರಾತ್ರಿ ಜರುಗಿತು. ಶ್ರೀ ಕಾಳ ಹಸ್ತೆಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ವಹಿಸಿದ್ದರು. ರಂಗಭೂಮಿ ಕಲಾವಿದ ಬಸವರಾಜ ಪಂಜಗಲ್, ಶ್ರೀ ದುರದುಂಡೇಶ್ವರ ಕಿರಿಯ ಪ್ರಾ.ಶಾಲೆಯ ಮಕ್ಕಳು ವಿವಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆಡೆಸಿಕೊಟ್ಟರು.

ನಮ್ಮ ಅಮೂಲ್ಯ ಸಮಯ ವ್ಯರ್ಥಮಾಡದೆ ಸಮಾಜ ಕಟ್ಟುವ ಕೆಲಸದಲ್ಲಿ ಮತ್ತು ಸಮಾಜಮುಖಿ ಕೆಸಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳಬೇಕು. ನಮ್ಮ ಮಠಕ್ಕೆ ಆಸ್ತಿ ಇಲ್ಲ, ಆದರೆ ಅಸಂಖ್ಯಾತ ಭಕ್ತರು ಇದ್ದಾರೆ. ಅವರ ಸೇವೆಯೆ ನಮಗೆ ಅನುಪಮವಾಗಿದೆ.
| ಶ್ರೀ ಶಿವಕುಮಾರ ಸ್ವಾಮೀಜಿ, ದುರದುಂಡೇಶ್ವರ ಮಠ, ಕೊಡೇಕಲ್

- Advertisement -

Stay connected

278,638FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...