ಆ.29ರೊಳಗೆ ನಿಖರ ವರದಿ ಸಲ್ಲಿಸಿ

Latest News

ಅಮೃತಬಿಂದು

ಶಿವಸ್ಯ ಭಕ್ತಿರಾಧಾರ ಆಚಾರಃ ಸರ್ವದೇಹಿನಾಂ | ಆಚಾರಃ ಪರಮೋ ಧರ್ಮ ಆಚಾರಃ ಪರಮಂ ಧನಮ್ || ಜ್ಞಾನಂ ಆಚಾರಹೀನಂ ಚೇತ್ ನ ತದ್ಭವತಿ ಸಿದ್ಧಯೇ...

ಉಪ ಚುನಾವಣೆ ಬಳಿಕ ಮೂವರು ಮೇಲ್ಮನೆ ಸದಸ್ಯರ ರಾಜೀನಾಮೆ?

ಬೆಂಗಳೂರು: ಉಪ ಚುನಾವಣೆ ಬಳಿಕ ರಾಜಕೀಯ ವಿದ್ಯಮಾನಗಳು ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು, ಬಿಜೆಪಿಯ ಮೂವರು ವಿಧಾನ ಪರಿಷತ್ ಸದಸ್ಯರು ರಾಜೀನಾಮೆ ನೀಡಬೇಕಾಗಬಹುದು. 2020ರ ಜೂನ್​ಗೆ...

ಪಿಓಕೆ ಹೊಳೆಯಲ್ಲಿ ತೇಯ್ದುಹೋಗಬೇಕಿದೆ ಚೀನೀ ಹುಣಸೆಹಣ್ಣು

ಪಿಓಕೆಯನ್ನು ಮರಳಿ ಪಡೆಯಬೇಕಾದರೆ ನಾವು ಹೋರಾಡಬೇಕಾಗಿರುವುದು ಚೀನಾದ ವಿರುದ್ಧ. ಅಮೆರಿಕ ಅಧ್ಯಕ್ಷ ಟ್ರಂಪ್​ರ ನೀತಿಗಳಿಂದಾಗಿ ಚೀನೀ ಆರ್ಥಿಕತೆ ಕುಸಿಯುತ್ತಿದೆ. ಆದಾಗ್ಯೂ, ಚೀನಾವನ್ನು ರಣಾಂಗಣಕ್ಕೆಳೆಯುವುದು ಭಾರತಕ್ಕೆ...

ಕಸ ಕೊಟ್ರೆ ಸಿಗುತ್ತೆ ಉಡುಗೊರೆ

ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಮರುಬಳಕೆ ಮಾಡಿ, ಪರಿಸರ ಕಾಪಾಡುವ ನಿಟ್ಟಿನಲ್ಲಿ ಈಗಾಗಲೇ ಹಲವಾರು ಯೋಜನೆಗಳನ್ನು ರೂಪಿಸಲಾಗುತ್ತಿದ್ದರೂ, ಹೊಸ ಹೊಸ ಯೋಜನೆಗಳ ಅವಶ್ಯಕತೆ...

ನಿತ್ಯ ಭವಿಷ್ಯ: ಈ ರಾಶಿಯವರು ನಾಲಗೆಯ ಘನತೆ-ಗೌರವ ಇಟ್ಟುಕೊಳ್ಳದ ಮಂದಿಯ ಜತೆಗೆ ಸಂಬಂಧ ಬೆಳೆಸುಗವುದು ಬೇಡ

ಮೇಷ: ನಾಲಗೆಯ ಘನತೆ-ಗೌರವ ಇಟ್ಟುಕೊಳ್ಳದ ಮಂದಿಯ ಜತೆಗೆ ಸಂಬಂಧಗಳನ್ನು ಇಟ್ಟುಕೊಳ್ಳುವುದು ಬೇಡ. ಶುಭಸಂಖ್ಯೆ: 3 ವೃಷಭ: ನಿಮ್ಮ ಸದುದ್ದೇಶವನ್ನು ಈಡೇರಿಸಿಕೊಳ್ಳುವ ಸಲುವಾಗಿ ಇಷ್ಟದೈವದ ಸಹಾಯವೂ...

ಶಹಾಪುರ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಆಗಿರುವ ಬೆಳೆ ಹಾನಿ ಕುರಿತು ಕಂದಾಯ ಮತ್ತು ಕೃಷಿ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಿ ಆಗಸ್ಟ್ 29ರೊಳಗೆ ನಿಖರ ವರದಿ ಸಲ್ಲಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಾಕೀತು ಮಾಡಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಸಂಭವಿಸಿರುವ ಹಾನಿ ಹಾಗೂ ಕೈಗೊಂಡ ಪರಿಹಾರ ಕ್ರಮಗಳ ಕುರಿತು ಗುರುವಾರ ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಿದ ಅವರು, ಅಧಿಕಾರಿಗಳು ಹೊಲಗಳಿಗೆ ಭೇಟಿ ನೀಡುವ ಮೊದಲು ಆ ಗ್ರಾಮಗಳಲ್ಲಿ ಗ್ರಾಪಂ ಮೂಲಕ ಡಂಗುರ ಸಾರಬೇಕು. ಜನಪ್ರತಿನಿಧಿಗಳು ಸಹಕಾರ ನೀಡಬೇಕು ಎಂದರು.

ರಾಜ್ಯದಲ್ಲಿ ಒಂದೆಡೆ ಅತಿವೃಷ್ಟಿ ಉಂಟಾದರೆ, ಯಾದಗಿರಿ, ಕೊಪ್ಪಳ, ವಿಜಯಪುರ ಮೊದಲಾದ ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆ. ಈ ಬಗ್ಗೆ ಪರಿಶೀಲಿಸಲು ಪ್ರವಾಸ ಕೈಗೊಳ್ಳಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ತೊಗರಿ, ಹತ್ತಿ, ಹೆಸರು ಬೆಳೆಗಳು ರೈತರ ಕೈಕೊಟ್ಟಿರುವುದು ಪ್ರವಾಸದ ಸಂದರ್ಭದಲ್ಲಿ ಕಂಡುಬಂದಿದೆ ಎಂದು ತಿಳಿಸಿದರು.

ಮೇ ಮತ್ತು ಜೂನ್ನಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಿಲ್ಲೆಯ 2.16 ಲಕ್ಷ ಹೆಕ್ಟೇರ್ನಲ್ಲಿ ಬಿತ್ತನೆಯಾಗಿದೆ. ಆದರೆ ನಂತರ ನಿರೀಕ್ಷಿತ ಮಳೆಯಾಗದೆ ಬೆಳೆಗಳ ಪರಿಸ್ಥಿತಿ ಗಂಭೀರವಾಗಿದೆ. ಬೆಳೆ ಕೈಗೆ ಬರುವುದು ಕಷ್ಟವಾಗಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ರೈತರು ಬರ ಪ್ರದೇಶ ಘೋಷಣೆಗೆ ಸಕರ್ಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಸಕರ್ಾರ ಬರ ಪ್ರದೇಶ ಘೋಷಣೆಗೆ 2016ರಲ್ಲಿ ಹೊಸ ಮಾರ್ಗಸೂಚಿ ನೀಡಿದೆ. ಶಹಾಪುರ ಮತ್ತು ಸುರಪುರ ತಾಲೂಕುಗಳಲ್ಲಿ ಬರದ ಲಕ್ಷಣ ಕಾಣುತ್ತಿದೆ. ಜಿಲ್ಲಾಡಳಿತ ಸಂಬಂಧಿಸಿದ ಇಲಾಖೆಗಳಿಂದ ನಡೆಸಿದ ಸಮೀಕ್ಷೆ ವರದಿಯನ್ನು ಸಕರ್ಾರಕ್ಕೆ ಸಲ್ಲಿಸಬೇಕೆಂದು ಸೂಚಿಸಿದರು.

ಜಿಲ್ಲೆಯ 163 ಹಳ್ಳಿಗಳಲ್ಲಿ ಕುಡಿಯುವ ನೀರಿನ ತೊಂದರೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಪಂ ಕ್ರಿಯಾಯೋಜನೆ ಪ್ರಕಾರ ಈ ಹಳ್ಳಿಗಳಲ್ಲಿ ತಕ್ಷಣವೇ ಪರಿಹಾರ ಕೆಲಸ ಆರಂಭಿಸಬೇಕು. ಇಲ್ಲವಾದರೆ ಬೋರ್ವೆಲ್ ಡಿಪ್ಪಿಂಗ್, ್ಲಸ್, ಪೈಪ್ಲೈನ್ ದುರಸ್ತಿ, ಟ್ಯಾಂಕರ್ನಿಂದ ನೀರಿನ ವ್ಯವಸ್ಥೆ ಕಲ್ಪಿಸಲು ಹಣ ಖಚರ್ು ಮಾಡಬಹುದಾಗಿದೆ. ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದರು.

ಶೇ.75 ಮನೆ ಹಾನಿಯಾದರೆ 75 ಸಾವಿರ ರೂ.ವರೆಗೆ ಪರಿಹಾರ ನೀಡಲು 2018ರ ಏಪ್ರಿಲ್ 1ರಿಂದ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳು ತಿಳಿದುಕೊಂಡು ಪರಿಹಾರ ನೀಡಬೇಕು. ಹಿಂದಿನ ಆದೇಶದಂತೆ ಪರಿಹಾರ ವಿತರಿಸಿದ್ದರೆ, ಆ ಪ್ರಕರಣಗಳನ್ನು ಮತ್ತೆ ಪರಿಶೀಲಿಸಿ ಪರಿಹಾರ ಒದಗಿಸಬೇಕು. ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳ ಹುದ್ದೆ ಖಾಲಿ ಇರುವ ಬಗ್ಗೆ ಜಿಲ್ಲಾಧಿಕಾರಿಗಳಿಂದ ಸಕರ್ಾರಕ್ಕೆ ಮಾಹಿತಿ ಬಂದಿದೆ. ಮುಖ್ಯಮಂತ್ರಿಗಳೊಂದಿಗೆ ಚಚರ್ಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ದೇಶಪಾಂಡೆ ಭರವಸೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ್ ಹುಮನಾಬಾದ್, ಶಾಸಕರಾದ ಶರಣಬಸಪ್ಪ ದರ್ಶನಾಪೂರ, ವೆಂಕಟರಡ್ಡಿ ಮುದ್ನಾಳ್, ನರಸಿಂಹ ನಾಯಕ, ಜಿಪಂ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪುರ, ಪ್ರಾದೇಶಿಕ ಆಯುಕ್ತ ಸುಬೋಧ್ ಯಾದವ್, ಜಿಲ್ಲಾಧಿಕಾರಿ ಎಂ.ಕೂಮರ್ಾರಾವ್, ಎಸ್ಪಿ ಯಡಾ ಮಾಟರ್ಿನ್ ಮಾರ್ಬನ್ಯಾಂಗ್ ಸಭೆಯಲ್ಲಿದ್ದರು.

ಕೊಡಗಿಗೆ ಪ್ರಧಾನಿ ಅನುದಾನ ನೀಡಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೊಡಗು ಜಿಲ್ಲೆಗೆ ಅನುದಾನ ನೀಡಬೇಕು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಒತ್ತಾಯಿಸಿದ್ದಾರೆ. ಪ್ರಸಕ್ತ ವರ್ಷ ಅತಿಯಾದ ಮಳೆಯಿಂದಾಗಿ ಕೊಡಗು ಜಿಲ್ಲೆ ಸಂಪೂರ್ಣ ನಾಶವಾಗಿದೆ. ಪರಿಹಾರ ಕ್ರಮಗಳಿಗೆ ಕೇಂದ್ರ ಸಕರ್ಾರ ಹೆಚ್ಚಿನ ಅನುದಾನ ನೀಡಬೇಕಿದೆ. ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಮುಂದುವರಿದಿದೆ. ಇದರಿಂದ ಭಯಭೀತರಾದ ಜನರ ಸಮಸ್ಯೆ ಅರಿಯುವ ನಿಟ್ಟಿನಲ್ಲಿ ನಾನು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ ಎಂದು ಅವರು ಶಹಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಬಿತ್ತನೆ ಕಡಿಮೆಯಾಗಿದೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಜಂಟಿ ಸಮೀಕ್ಷೆ ನಡೆಸುವಂತೆ ಕೃಷಿ ಮತ್ತು ಕಂದಾಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಬರಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕ್ರಮ ಕೈಗೊಳ್ಳಲು ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಯಾದಗಿರಿ ಜಿಲ್ಲೆಯಲ್ಲಿ 21 ವಾರಗಳಿಗೆ ಆಗುವಷ್ಟು ಮೇವಿನ ಸಂಗ್ರಹವಿದೆ. ಮುಂದೆಯೂ ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 2016-17ರಲ್ಲಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಅಂದಾಜು 10 ಕೋಟಿ ರೂ. ಪರಿಹಾರ ಬರಬೇಕಿದೆ. ಕೃಷಿ ಇಲಾಖೆ ಪ್ರಧಾನ ಕಾರ್ಯದಶರ್ಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು.
| ಆರ್.ವಿ.ದೇಶಪಾಂಡೆ ಕಂದಾಯ ಸಚಿವ

 

 

 

- Advertisement -

Stay connected

278,615FansLike
571FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...