ಆ.29ರೊಳಗೆ ನಿಖರ ವರದಿ ಸಲ್ಲಿಸಿ

ಶಹಾಪುರ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಆಗಿರುವ ಬೆಳೆ ಹಾನಿ ಕುರಿತು ಕಂದಾಯ ಮತ್ತು ಕೃಷಿ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಿ ಆಗಸ್ಟ್ 29ರೊಳಗೆ ನಿಖರ ವರದಿ ಸಲ್ಲಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಾಕೀತು ಮಾಡಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಸಂಭವಿಸಿರುವ ಹಾನಿ ಹಾಗೂ ಕೈಗೊಂಡ ಪರಿಹಾರ ಕ್ರಮಗಳ ಕುರಿತು ಗುರುವಾರ ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಿದ ಅವರು, ಅಧಿಕಾರಿಗಳು ಹೊಲಗಳಿಗೆ ಭೇಟಿ ನೀಡುವ ಮೊದಲು ಆ ಗ್ರಾಮಗಳಲ್ಲಿ ಗ್ರಾಪಂ ಮೂಲಕ ಡಂಗುರ ಸಾರಬೇಕು. ಜನಪ್ರತಿನಿಧಿಗಳು ಸಹಕಾರ ನೀಡಬೇಕು ಎಂದರು.

ರಾಜ್ಯದಲ್ಲಿ ಒಂದೆಡೆ ಅತಿವೃಷ್ಟಿ ಉಂಟಾದರೆ, ಯಾದಗಿರಿ, ಕೊಪ್ಪಳ, ವಿಜಯಪುರ ಮೊದಲಾದ ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆ. ಈ ಬಗ್ಗೆ ಪರಿಶೀಲಿಸಲು ಪ್ರವಾಸ ಕೈಗೊಳ್ಳಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ತೊಗರಿ, ಹತ್ತಿ, ಹೆಸರು ಬೆಳೆಗಳು ರೈತರ ಕೈಕೊಟ್ಟಿರುವುದು ಪ್ರವಾಸದ ಸಂದರ್ಭದಲ್ಲಿ ಕಂಡುಬಂದಿದೆ ಎಂದು ತಿಳಿಸಿದರು.

ಮೇ ಮತ್ತು ಜೂನ್ನಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಿಲ್ಲೆಯ 2.16 ಲಕ್ಷ ಹೆಕ್ಟೇರ್ನಲ್ಲಿ ಬಿತ್ತನೆಯಾಗಿದೆ. ಆದರೆ ನಂತರ ನಿರೀಕ್ಷಿತ ಮಳೆಯಾಗದೆ ಬೆಳೆಗಳ ಪರಿಸ್ಥಿತಿ ಗಂಭೀರವಾಗಿದೆ. ಬೆಳೆ ಕೈಗೆ ಬರುವುದು ಕಷ್ಟವಾಗಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ರೈತರು ಬರ ಪ್ರದೇಶ ಘೋಷಣೆಗೆ ಸಕರ್ಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಸಕರ್ಾರ ಬರ ಪ್ರದೇಶ ಘೋಷಣೆಗೆ 2016ರಲ್ಲಿ ಹೊಸ ಮಾರ್ಗಸೂಚಿ ನೀಡಿದೆ. ಶಹಾಪುರ ಮತ್ತು ಸುರಪುರ ತಾಲೂಕುಗಳಲ್ಲಿ ಬರದ ಲಕ್ಷಣ ಕಾಣುತ್ತಿದೆ. ಜಿಲ್ಲಾಡಳಿತ ಸಂಬಂಧಿಸಿದ ಇಲಾಖೆಗಳಿಂದ ನಡೆಸಿದ ಸಮೀಕ್ಷೆ ವರದಿಯನ್ನು ಸಕರ್ಾರಕ್ಕೆ ಸಲ್ಲಿಸಬೇಕೆಂದು ಸೂಚಿಸಿದರು.

ಜಿಲ್ಲೆಯ 163 ಹಳ್ಳಿಗಳಲ್ಲಿ ಕುಡಿಯುವ ನೀರಿನ ತೊಂದರೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಪಂ ಕ್ರಿಯಾಯೋಜನೆ ಪ್ರಕಾರ ಈ ಹಳ್ಳಿಗಳಲ್ಲಿ ತಕ್ಷಣವೇ ಪರಿಹಾರ ಕೆಲಸ ಆರಂಭಿಸಬೇಕು. ಇಲ್ಲವಾದರೆ ಬೋರ್ವೆಲ್ ಡಿಪ್ಪಿಂಗ್, ್ಲಸ್, ಪೈಪ್ಲೈನ್ ದುರಸ್ತಿ, ಟ್ಯಾಂಕರ್ನಿಂದ ನೀರಿನ ವ್ಯವಸ್ಥೆ ಕಲ್ಪಿಸಲು ಹಣ ಖಚರ್ು ಮಾಡಬಹುದಾಗಿದೆ. ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದರು.

ಶೇ.75 ಮನೆ ಹಾನಿಯಾದರೆ 75 ಸಾವಿರ ರೂ.ವರೆಗೆ ಪರಿಹಾರ ನೀಡಲು 2018ರ ಏಪ್ರಿಲ್ 1ರಿಂದ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳು ತಿಳಿದುಕೊಂಡು ಪರಿಹಾರ ನೀಡಬೇಕು. ಹಿಂದಿನ ಆದೇಶದಂತೆ ಪರಿಹಾರ ವಿತರಿಸಿದ್ದರೆ, ಆ ಪ್ರಕರಣಗಳನ್ನು ಮತ್ತೆ ಪರಿಶೀಲಿಸಿ ಪರಿಹಾರ ಒದಗಿಸಬೇಕು. ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳ ಹುದ್ದೆ ಖಾಲಿ ಇರುವ ಬಗ್ಗೆ ಜಿಲ್ಲಾಧಿಕಾರಿಗಳಿಂದ ಸಕರ್ಾರಕ್ಕೆ ಮಾಹಿತಿ ಬಂದಿದೆ. ಮುಖ್ಯಮಂತ್ರಿಗಳೊಂದಿಗೆ ಚಚರ್ಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ದೇಶಪಾಂಡೆ ಭರವಸೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ್ ಹುಮನಾಬಾದ್, ಶಾಸಕರಾದ ಶರಣಬಸಪ್ಪ ದರ್ಶನಾಪೂರ, ವೆಂಕಟರಡ್ಡಿ ಮುದ್ನಾಳ್, ನರಸಿಂಹ ನಾಯಕ, ಜಿಪಂ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪುರ, ಪ್ರಾದೇಶಿಕ ಆಯುಕ್ತ ಸುಬೋಧ್ ಯಾದವ್, ಜಿಲ್ಲಾಧಿಕಾರಿ ಎಂ.ಕೂಮರ್ಾರಾವ್, ಎಸ್ಪಿ ಯಡಾ ಮಾಟರ್ಿನ್ ಮಾರ್ಬನ್ಯಾಂಗ್ ಸಭೆಯಲ್ಲಿದ್ದರು.

ಕೊಡಗಿಗೆ ಪ್ರಧಾನಿ ಅನುದಾನ ನೀಡಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೊಡಗು ಜಿಲ್ಲೆಗೆ ಅನುದಾನ ನೀಡಬೇಕು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಒತ್ತಾಯಿಸಿದ್ದಾರೆ. ಪ್ರಸಕ್ತ ವರ್ಷ ಅತಿಯಾದ ಮಳೆಯಿಂದಾಗಿ ಕೊಡಗು ಜಿಲ್ಲೆ ಸಂಪೂರ್ಣ ನಾಶವಾಗಿದೆ. ಪರಿಹಾರ ಕ್ರಮಗಳಿಗೆ ಕೇಂದ್ರ ಸಕರ್ಾರ ಹೆಚ್ಚಿನ ಅನುದಾನ ನೀಡಬೇಕಿದೆ. ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಮುಂದುವರಿದಿದೆ. ಇದರಿಂದ ಭಯಭೀತರಾದ ಜನರ ಸಮಸ್ಯೆ ಅರಿಯುವ ನಿಟ್ಟಿನಲ್ಲಿ ನಾನು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ ಎಂದು ಅವರು ಶಹಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಬಿತ್ತನೆ ಕಡಿಮೆಯಾಗಿದೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಜಂಟಿ ಸಮೀಕ್ಷೆ ನಡೆಸುವಂತೆ ಕೃಷಿ ಮತ್ತು ಕಂದಾಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಬರಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕ್ರಮ ಕೈಗೊಳ್ಳಲು ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಯಾದಗಿರಿ ಜಿಲ್ಲೆಯಲ್ಲಿ 21 ವಾರಗಳಿಗೆ ಆಗುವಷ್ಟು ಮೇವಿನ ಸಂಗ್ರಹವಿದೆ. ಮುಂದೆಯೂ ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 2016-17ರಲ್ಲಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಅಂದಾಜು 10 ಕೋಟಿ ರೂ. ಪರಿಹಾರ ಬರಬೇಕಿದೆ. ಕೃಷಿ ಇಲಾಖೆ ಪ್ರಧಾನ ಕಾರ್ಯದಶರ್ಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು.
| ಆರ್.ವಿ.ದೇಶಪಾಂಡೆ ಕಂದಾಯ ಸಚಿವ