ಕ್ರಮ ಕೈಗೊಳ್ಳದಿದ್ದರೆ ಹೋರಾಟದ ಎಚ್ಚರಿಕೆ

ಯಾದಗಿರಿ: ನಗರದ ವಾರ್ಡ್​ ನಂ. 29ರಲ್ಲಿ ಕಳೆದ ಹಲವು ದಿನಗಳಿಂದ ಚರಂಡಿ ಸ್ವಚ್ಛಗೊಳಿಸದ ಕಾರಣ ಇಡೀ ವಾರ್ಡ್​​ ಗಬ್ಬೆದ್ದು ನಾರುತ್ತಿದ್ದು, ಇದರಿಂದ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿದೆ.

ನಗರದ ಪ್ರತಿಷ್ಠಿತ ವಾರ್ಡ್​ ಳಲ್ಲಿ ಒಂದಾಗಿರುವ ವಾರ್ಡ್​​ 29ರಲ್ಲಿನ ಚರಂಡಿ ನಗರಸಭೆ ಅಧಿಕಾರಿಗಳು ಸ್ವಚ್ಛಗೊಳಿಸಿ ಹಲವು ವರ್ಷಗಳೇ ಕಳೆದಿವೆ. ಚರಂಡಿಗಳಲ್ಲಿ ಹೂಳು ತುಂಬಿದ ಪರಿಣಾಮ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ಅಲ್ಲದೆ ಈ ನೀರು ಕೆಲ ಮನೆಗಳಿಗೆ ನುಗ್ಗುತ್ತಿರುವ ಪರಿಣಾಮ ದುವರ್ಾಸನೆ ಮನೆ ಮಾಡಿ ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಜನತೆ ಕಾಲ ಕಳೆಯುತಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭವಾಗುವುದರಿಂದ ಚರಂಡಿಗಳಲ್ಲಿ ನೀರು ಸಂಗ್ರಹಗೊಂಡು ರಸ್ತೆ ಮೇಲೆ ಹರಿಯಲಿದೆ. ಇದರಿಂದ ಸೊಳ್ಳೆಗಳ ಕಾಟ ವಿಪರೀತವಾಗಲಿದ್ದು, ರೋಗ ರುಜಿನಗಳು ಹರಡುವ ಸಾಧ್ಯತೆ ಇದೆ. ಚರಂಡಿ ಸ್ವಚ್ಛಗೊಳಿಸುವಂತೆ ಈಗಾಗಲೇ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ.

ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತುಕೊಂಡು ಚರಂಡಿ ಸ್ವಚ್ಛಗೊಳಿಸಲು ಮುಂದಾಗಬೇಕು. ಇಲ್ಲವಾದಲ್ಲಿ ನಿವಾಸಿಗಳೊಂದಿಗೆ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಶ್ರೀರಾಮುಲು ಅಭಿಮಾನಿಗಳ ಸಂಘದ ಅಧ್ಯಕ್ಷ ಅಶೋಕ ಮುದ್ನಾಳಕರ್ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *