ರಾಜ್‌ಕುಮಾರ್ ಸ್ಮರಿಸಿದ ಯದುವೀರ್

ಮೈಸೂರು: ಮೈಸೂರು ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ವರನಟ ಡಾ. ರಾಜ್‌ಕುಮಾರ್ ಅವರನ್ನು ಸ್ಮರಿಸಿದರು.

ಡಾ.ರಾಜ್‌ಕುಮಾರ್ 1983ರಲ್ಲಿ ಜಯಚಾಮರಾಜ ಒಡೆಯರ್ ಅವರಿಂದ ಗೌರವಿಸಲ್ಪಡುತ್ತಿರುವ ಚಿತ್ರವನ್ನು ಯದುವೀರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಡಾ.ರಾಜ್ ಕುಮಾರ್ ಅವರನ್ನು ಸ್ಮರಿಸಿಕೊಂಡರು.

‘ಕನ್ನಡ ಚಲನಚಿತ್ರರಂಗದ ಮೇರು ನಟ, ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ನಟಸಾರ್ವಭೌಮ ಡಾ.ರಾಜ್ ಕುಮಾರ್ ಅವರ 90ನೇ ಜನ್ಮ ದಿನದಂದು ಅವರನ್ನು ಸ್ಮರಿಸುತ್ತೇನೆ. ರಾಜ್‌ಕುಮಾರ್ ಭಾರತೀಯ ಚಿತ್ರರಂಗದ ಅತ್ಯುತ್ತಮ ನಟ. ಅವರು ಕನ್ನಡದ ಸಾಂಸ್ಕೃತಿಕ ರಾಯಭಾರಿ ಕೂಡ ಆಗಿದ್ದರು’ ಎಂದು ಯದುವೀರ್ ಫೇಸ್‌ಬುಕ್‌ನಲ್ಲಿ ಡಾ.ರಾಜ್‌ಕುಮಾರ್ ಅವರ ಗುಣಗಾನ ಮಾಡಿದ್ದಾರೆ.

Leave a Reply

Your email address will not be published. Required fields are marked *