16 C
Bangalore
Saturday, December 7, 2019

ರೈತರ ಸಾಲ ಮನ್ನಾ ಮಾಡದಿದ್ರೆ ಹೋರಾಟ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಯಾದಗಿರಿ: ಬೇಸಿಗೆ ಹಿನ್ನೆಲೆಯಲ್ಲಿ ನಾಲ್ಕು ತಿಂಗಳಿನಿಂದ ಕಾದು ಕೆಂಡದಂತಾಗಿರುವ ಗಿರಿ ಜಿಲ್ಲೆಯಲ್ಲಿ ತೀವ್ರ ಬರದಿಂದ ಕಂಗೆಟ್ಟಿರುವ ಗ್ರಾಮೀಣ ಭಾಗದ ಸ್ಥಿತಿಗತಿ ಅರಿಯಲು ಭಾನುವಾರ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬರ ಅಧ್ಯಯನ ತಂಡ ಹಳ್ಳಿ ಜನರ ಅಹವಾಲು ಆಲಿಸಿ ಸ್ಪಂದಿಸುವ ಸಕಾರಾತ್ಮಕ ಭರವಸೆ ನೀಡಿತು.

ಬೆಳಗ್ಗೆ ಯಾದಗಿರಿ ಮತಕ್ಷೇತ್ರದ ಅನವಾರ ಗ್ರಾಮಕ್ಕೆ ಭೇಟಿ ನೀಡಿದ ಬಿಎಸ್ವೈ, ಊರಲ್ಲಿ 5 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಪರಿಶೀಲನೆ ನಡೆಸಿದರು. ಆರ್ಒ ಪ್ಲಾಂಟ್ ನಿರ್ಮಿಸಿದರೂ ಇದುವರೆಗೆ ಒಂದು ಹನಿ ನೀರು ಕಂಡಿಲ್ಲ ಎಂದು ಮಹಿಳೆಯರು ಗೋಳು ತೋಡಿಕೊಂಡರು.

ಮೂರ್ನಾಲ್ಕು ವರ್ಷಗಳಿಂದ ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದೆ ಜನತೆ ತತ್ತರಿಸುವಂತಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡಿದ್ದಾಗಿ ಘೋಷಿಸಿದ್ದಾರೆ. ಆದರೆ ಒಂದು ನಯಾಪೈಸೆ ಲಾಭ ನಮಗೆ ಆಗಿಲ್ಲ. ನರೇಗಾ ಯೋಜನೆಯಡಿ ಸರಿಯಾದ ಸಮಯಕ್ಕೆ ಕೂಲಿ ಸಿಗುತ್ತಿಲ್ಲ ಎಂದು ರೈತಾಪಿ ವರ್ಗ ಆರೋಪಿಸಿತು.

ರೈತರ ಅಹವಾಲು ಸ್ವೀಕರಿಸಿದ ಯಡಿಯೂರಪ್ಪ ಮಾತನಾಡಿ, ರಾಜ್ಯದಲ್ಲಿ ಜವಾಬ್ದಾರಿಯುತ ಪ್ರತಿಪಕ್ಷವಾಗಿ ಬಿಜೆಪಿ ಕಾರ್ಯನಿರ್ವಹಿಸುತ್ತಿದೆ. ನಿಮ್ಮ ಸಮಸ್ಯೆ ಅರಿಯಲು ನಾನೇ ಖುದ್ದಾಗಿ ಬಂದಿದ್ದೇನೆ. ರಾಜ್ಯ ಸಮ್ಮಿಶ್ರ ಸರ್ಕಾರ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವೃದ್ಧರು, ಮಹಿಳೆಯರಿಗೆ ಪಿಂಚಣಿ ಕೊಡುವ ಯೋಜನೆ ಜಾರಿಗೊಳಿಸುತ್ತಿದೆ. ಆದರೆ ನೀಡಿದ ಭರವಸೆಯಂತೆ ರಾಜ್ಯ ಸಮ್ಮಿಶ್ರ ರೈತರ ಸಾಲ ಮನ್ನಾ ಮಾಡದಿದ್ದಲ್ಲಿ ವಿಧಾನಸಭೆ ಮುಂದೆ ಬಿಜೆಪಿ ಶಾಸಕರು ಮತ್ತು ಸಂಸದರಿಂದ ಹೋರಾಟ ಮಾಡುವುದಾಗಿ ಎಂದು ಎಚ್ಚರಿಸಿದರು.

ನಂತರ ವಡಗೇರಾ ತಾಲೂಕಿನ ಖಾನಾಪುರ ಗ್ರಾಮದ ದೊಡ್ಡಕೆರೆ ವೀಕ್ಷಿಸಿದ ಅವರು, ಭೀಕರ ಬೇಸಿಗೆಯಿಂದ ಕೆರೆ ಸಂಪೂರ್ಣ ಬತ್ತಿದ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದು ಗುಲಸರಂ ಗ್ರಾಮಕ್ಕೆ ತೆರಳಿದರು. ಅಲ್ಲಿನ ಪಂಚಾಯಿತಿ ಆವರಣದಲ್ಲಿ ಗ್ರಾಮಸ್ಥರ ಸಭೆ ನಡೆಸಿದ ಅವರು, ಯಾದಗಿರಿ ವಿಧಾನಸಭಾ ಕ್ಷೇತ್ರದ ಕೊನೇ ಭಾಗದ ರೈತರಿಗೆ ಕೃಷ್ಣಾ ಮೇಲ್ದಂಡೆ ಯೋಜನೆ ಕಾಲುವೆ ನೀರು ತಲುಪುತ್ತಿಲ್ಲ ಎಂಬ ಬಗ್ಗೆ ಪಕ್ಷದ ಸ್ಥಳೀಯ ಮುಖಂಡರು ನನ್ನ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಸರ್ಕಾರದ ಜತೆ ಚಚರ್ಿಸಿ ನಿಮ್ಮ ಸಮಸ್ಯೆಗೆ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ತಮ್ಮ ಭಾಷಣದಲ್ಲಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಬಗ್ಗೆ ಟೀಕಿಸಿದ ಬಿಎಸ್ವೈ, ಹೈದರಾಬಾಬ್ ಕನರ್ಾಟಕ ಪ್ರದೇಶದಲ್ಲಿ ಭೀಕರ ಬರ ತಾಂಡವವಾಡುತ್ತಿದೆ. ಸಿಎಂಗೆ ಬೇಸಿಗೆ ವೇಳೆ ಹೈಕ ನೆನಪಾಗಿಲ್ಲವೇ? ಬೇಸಿಗೆ ಬಿಸಿಲು ಕಮ್ಮಿಯಾದ ಬಳಿಕ ಗ್ರಾಮ ವಾಸ್ತವ್ಯದ ದೊಂಬರಾಟ ಆಡುತ್ತಿದ್ದಾರೆ. ರಾಜ್ಯದ ಜನರೊಂದಿಗೆ ಬಿಜೆಪಿ ಸದಾ ಇರಲಿದೆ. ನಿಮ್ಮ ಸಮಸ್ಯೆಗಳು ಏನೇ ಇದ್ದರೂ ವಿಧಾನಸಭೆ ಹೊರಗೂ ಹಾಗೂ ಒಳಗೂ ನಾವು ಹೋರಾಟ ಮಾಡಲು ಸಿದ್ಧ ಎಂದು ಅಭಯ ನೀಡಿದರು.

ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕರಾದ ವೆಂಕಟರಡ್ಡಿ ಮುದ್ನಾಳ್, ನರಸಿಂಹ ನಾಯಕ, ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಎಂಎಲ್ಸಿ ಬಿ.ಜಿ. ಪಾಟೀಲ್, ಮಾಜಿ ಸಚಿವರಾದ ಡಾ.ಎ.ಬಿ. ಮಾಲಕರಡ್ಡಿ, ಬಾಬುರಾವ ಚಿಂಚನಸೂರ, ಪಕ್ಷದ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ, ರಾಜ್ಯ ಉಪಾಧ್ಯಕ್ಷೆ ನಾಗರತ್ನ ಕುಪ್ಪಿ, ರಾಜ್ಯ ಕಾರ್ಯಕಾರಿ ಸದಸ್ಯ ಡಾ.ಶರಣಭೂಪಾಲರಡ್ಡಿ ನಾಯ್ಕಲ್, ಜಿಲ್ಲಾ ಪ್ರಧಾನ ಕಾರ್ಯದಶರ್ಿ ವೆಂಕಟರಡ್ಡಿ ಅಬ್ಬೆತುಮಕೂರ, ಡಾ.ಶರಣರಡ್ಡಿ ಕೋಡ್ಲಾ ಇತರರಿದ್ದರು.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...