ಮತ್ತೊಮ್ಮೆ ಮೋದಿ ಕೈ ಬಲಪಡಿಸೋಣ

ಹುಣಸಗಿ: ಬಿಜೆಪಿ ಅಭ್ಯರ್ಥಿಗೆ ಮತ ಹಾಕುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಮೂಲಕ ಪ್ರಧಾನಿಯನ್ನಾಗಿ ಮಾಡೋಣ ಎಂದು ಸುರಪುರ ಶಾಸಕ ನರಸಿಂಹ ನಾಯಕ ಹೇಳಿದರು.

ಹುಣಸಗಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಗುರುವಾರ ಹಮ್ಮಿಕೊಂಡ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿ ಮಾಡಲು ಬಿಜೆಪಿ ಅಭ್ಯರ್ಥಿ ಅಮರೇಶ್ವರ ನಾಯಕ ಅವರಿಗೆ ಮತ ನೀಡುವ ಮೂಲಕ ಬಿಜೆಪಿ ಗೆಲುವಿಗೆ ಶ್ರಮಿಸಬೇಕು. ಪ್ರತಿಯೊಬ್ಬ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಮತದಾರರಿಗೆ ಕೇಂದ್ರ ಸಕರ್ಾರದ ಸಾಧನೆ ತಿಳಿ ಹೇಳಬೇಕು.

ರೈತರ ನೆರವಿಗೆ ಬರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಮತದಾರರು ಕಾಂಗ್ರೆಸ್ ಪಕ್ಷದ ಹುಸಿ ಮಾತಿಗೆ ಮರಳಾಗಬೇಡಿ. ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೇ ಬಿಜೆಪಿಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಜಿಪಂ ಸದಸ್ಯ ಬಸವರಾಜಸ್ವಾಮಿ ಸ್ಥಾವರಮಠ, ಮುಖಂಡ ಸಂಗನಗೌಡ ಪಾಟೀಲ್ ವಜ್ಜಲ್ ಮಾತನಾಡಿದರು. ಜಿಪಂ ಮಾಜಿ ಅಧ್ಯಕ್ಷ ರಾಜಾ ಹಣಮಪ್ಪ ನಾಯಕ ತಾತ, ಜಿಪಂ ಮಾಜಿ ಸದಸ್ಯ ಎಚ್.ಸಿ.ಪಾಟೀಲ್, ಬಿಜೆಪಿ ತಾಲೂಕು ಅಧ್ಯಕ್ಷ ಅಮರಣ್ಣ ಹುಡೇದ, ಎಪಿಎಂಸಿ ಸದಸ್ಯ ದೇವಣ್ಣ ಮಲಗಲದಿನ್ನಿ, ತಾಪಂ ಸದಸ್ಯ ಭೀಮರಾಯ ಶ್ರೀನಿವಾಸಪುರ, ವಿರೇಶ ಚಂಚೋಳಿ, ಸಂಗಣ್ಣ ವೈಲಿ, ಸೋಮಣ್ಣ ಮೇಟಿ, ನಾನಾಗೌಡ ಪಾಟೀಲ್, ಹಮೀದಸಾಬ್ ಡೆಕ್ಕನ್, ಟಿ.ಎಸ್.ಚಂದಾ ಇತರರಿದ್ದರು.