ಸಬೂಬು ಹೇಳಿದರೆ ಮುಲಾಜಿಲ್ಲದೆ ಕ್ರಮ

ಯಾದಗಿರಿ: ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದಿದ್ದಲ್ಲಿ ಸಂಬಂಧಪಟ್ಟ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಕಾಮಗಾರಿ ರದ್ದುಪಡಿಸಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತ ಸುಬೋಧ್ ಯಾದವ್ ಎಚ್ಚರಕೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲೆಯ ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮೈಕ್ರೋ-ಮ್ಯಾಕ್ರೋ ಕಾಮಗಾರಿಗಳ ಕುರಿತು ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಎಚ್ಕೆಆರ್ಡಿಬಿಯಿಂದ ನಡೆಯುತ್ತಿರುವ 20 ಸಾವಿರ ಕಾಮಗಾರಿಗಳ ಸ್ಥಿತಿಗತಿ ಕುರಿತು ಮಾಹಿತಿ ತಲೆಯಲ್ಲಿದೆ. ಮಂಡಳಿಯ ಕಾರ್ಯದರ್ಶಿಗಳಿಗೆ ಗೊತ್ತಾಗುವುದಿಲ್ಲವೆಂದು ಸಬೂಬು ನೀಡಿದರೆ ಕೇಳುವುದಿಲ್ಲ. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದರು.

2016-17ನೇ ಸಾಲಿನ ಮ್ಯಾಕ್ರೋ ಯೋಜನೆಯಡಿ ಕೈಗೊಂಡಿರುವ 42 ಕಾಮಗಾರಿಗಳಲ್ಲಿ 36 ಪೂರ್ಣಗೊಂಡಿವೆ. 2017-18ನೇ ಸಾಲಿನಲ್ಲಿ ಕೈಗೊಂಡಿರುವ 39 ಕಾಮಗಾರಿಗಳಲ್ಲಿ 29 ಪೂರ್ಣಗೊಂಡಿವೆ. ಉಳಿದ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್ ರಾಜ್ಕುಮಾರ ಅವರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಎಸ್.ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಎಚ್ಕೆಆರ್ಡಿಬಿ ಜಂಟಿ ನಿದರ್ೇಶಕ ಬಸವರಾಜ, ಸಹಾಯಕ ಆಯುಕ್ತ ಡಾ.ಬಿ.ಎಸ್.ಮಂಜುನಾಥ ಸ್ವಾಮಿ, ಜಿಪಂ ಉಪ ಕಾರ್ಯದರ್ಶಿ ವಸಂತರಾವ್ ವಿ.ಕುಲಕರ್ಣಿ, ಜಿಪಂ ಮುಖ್ಯ ಯೋಜನಾಧಿಕಾರಿ ಗುರುನಾಥ ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.

ಮ್ಯಾಕ್ರೋ ಯೋಜನೆಯಡಿ ಫೆಬ್ರುವರಿಯಲ್ಲಿ ಅನುಮೋದನೆ ನೀಡಿದರೂ ಟೆಂಡರ್ ಕರೆದಿಲ್ಲ. ಸುಮಾರು 120 ಕಾಮಗಾರಿಗಳಿಗೆ ಅಂದಾಜು ಪಟ್ಟಿ ತಯಾರಿಸಿಲ್ಲ. ಸರ್ಕಾರಿ ಯೋಜನೆಗಳಲ್ಲಿ ನಿರ್ಲಕ್ಷೃ ವಹಿಸಿದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.
| ಸುಬೋಧ್ ಯಾದವ್
ಕಲಬುರಗಿ ಪ್ರಾದೇಶಿಕ ಆಯುಕ್ತ