ಆರೋಗ್ಯ ಕರ್ನಾಟಕ ನೋಂದಣಿ ಕೇಂದ್ರಕ್ಕೆ ಚಾಲನೆ

ವಿಜಯವಾಣಿ ಸುದ್ದಿಜಾಲ ಯಾದಗಿರಿ
ಸರ್ಕಾರ ಬಡ ಮತ್ತು ಮಧ್ಯಮ ವರ್ಗಗಳ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಜನತೆ ಯೋಜನೆಗಳ ಸೌಲಭ್ಯ ಪಡೆದುಕೊಳ್ಳುವಂತೆ ಶಾಸಕ ವೆಂಕಟರಡ್ಡಿ ಮುದ್ನಾಳ್ ಸಲಹೆ ನೀಡಿದರು.

ನಗರದ ಜಿಲ್ಲಾಸ್ಪತ್ರೆಯಲ್ಲಿ ಮಂಗಳವಾರ ಆಯುಷ್ಮಾನ್ ಭಾರತ ಯೋಜನೆಯಡಿ ಆರೋಗ್ಯ ಕರ್ನಾಟಕ ನೋಂದಣಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಹಭಾಗಿತ್ವದಲ್ಲಿ ಆಯುಷ್ಮಾನ್ ಭಾರತ ಯೋಜನೆಯಡಿ ಬಡ ವರ್ಗದ ಜನತೆಗೆ ಉಚಿತ ವೈದ್ಯಕೀಯ ಸೌಲಭ್ಯ ಸಿಗಲಿದೆ. ಕೆಲ ಖಾಸಗಿ ಆಸ್ಪತ್ರೆಗಳು ಈ ಯೋಜನೆಗಳ ವ್ಯಾಪ್ತಿಗೆ ಒಳಗೊಳ್ಳಲಿದ್ದು, ಸುಮಾರು 400ಕ್ಕೂ ಹೆಚ್ಚು ಚಿಕಿತ್ಸೆಗಳಿಗೆ ವೈದ್ಯಕೀಯ ವೆಚ್ಛ ಸಕರ್ಾರ ಭರಿಸಲಿದೆ ಎಂದರು.

ಜನತೆ ಹೆಚ್ಚಿನ ಪ್ರಮಾಣದಲ್ಲಿ ಆರೋಗ್ಯ ಕರ್ನಾಟಕ ಯೋಜನೆಯಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದ ಶಾಸಕರು. ಈ ಬಗ್ಗೆ ಗ್ರಾಮೀಣ ಭಾಗದಲ್ಲಿನ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲಾ ಶಸ್ತ್ರಚಿಕಿತ್ಸವ ಡಾ.ಸಂಜಯ್ ರಾಯಚೂರುಕರ್, ಡಾ.ಭಗವಂತ ಅನವಾರ ಸೇರಿದಂತೆ ಇನ್ನಿತರರು ಇದ್ದರು.