ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಾವಿತ್ರೃತೆ ಉಳಿಸಿ

ಯಾದಗಿರಿ: ಕೋಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ಶಬರಿಮಲೆಯ ಪಾವಿತ್ರೃತೆ ಉಳಿಸಲು ಕೇಂದ್ರ ಸಕರ್ಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗುರುವಾರ ನಗರದಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಶಬರಿಮಲೆ ಉಳಿಸಿ ಹೋರಾಟ ಸಮಿತಿಯಿಂದ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು.

ನಗರದ ಶ್ರೀ ಅಂಬಾ ಭವಾನಿ ದೇವಸ್ಥಾನದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಅಯ್ಯಪ್ಪಸ್ವಾಮಿಯ ಭಜನೆಯನ್ನು ಮಾಡುತ್ತ ಜಿಲ್ಲಾಧಿಕಾರಿ ಕಚೇರಿ ತಲುಪಿಸದರು. ಸಮಿತಿ ಮುಖಂಡ ಅಂಬಯ್ಯಾ ಶಾಬಾದಿ ಮಾತನಾಡಿ, ನೂರಾರು ವರ್ಷಗಳ ಇತಿಹಾಸವಿರುವ ಶಬರಿಮಲೆಯಲ್ಲಿ ಈ ಹಿಂದೆ 10ರಿಂದ 50ರ ವಯೋಮಾನದ ಮಹಿಳೆಯರಿಗೆ ದೇಗುಲ ಪ್ರವೇಶಕ್ಕೆ ನಿಷೇಧವಿತ್ತು. ಇತ್ತೀಚೆಗೆ ಸುಪ್ರೀಂ ಕೋಟರ್್ ಎಲ್ಲ ಮಹಿಳೆಯರಿಗೂ ದೇಗುಲ ಪ್ರವೇಶಕ್ಕೆ ಅವಕಾಶ ನೀಡಿರುವುದು ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದೆ. ಹಾಗಾಗಿ, ಸುಪ್ರೀಂ ಕೋಟರ್್ ತೀರ್ಪನ್ನು ಮರು ಪರಿಶೀಲನೆ ಮಾಡಲಿ ಎಂದು ಒತ್ತಾಯಿಸಿದರು.

ಭಾರತೀಯ ಧಾರ್ಮಿಕ ನಂಬಿಕೆ, ಪದ್ಧತಿ, ಪರಂಪರೆಯಲ್ಲಿ ಪುರಾತನ ಕಾಲದಿಂದ ಇಂದಿನವರೆಗೂ ಯಾವುದೇ ದೇವಸ್ಥಾನ, ಮಂದಿರ ಮಸೀದಿ ಹಾಗೂ ಚಚರ್್ಗಳಲ್ಲಿ ಅವುಗಳದ್ದೇ ಆದ ವಿಧಿ, ವಿಧಾನಗಳು ನಡೆಯುತ್ತವೆ. ಅವುಗಳಲ್ಲಿ ಶಬರಿಮಲೆ ಅಯ್ಯಪ್ಪಸ್ವಾಮಿಯ ದೇವಸ್ಥಾನವೂ ಒಂದಾಗಿದ್ದು, ಕೂಡಲೇ ಕೇಂದ್ರ ಸರ್ಕಾರ ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಏಕಂದಂಡಗಿ ಮಠದ ಶ್ರೀ ಶ್ರೀನಿವಾಸ, ಸ್ವಾಮೀಜಿ, ಶಾಸಕ ವೆಂಕಟರಡ್ಡಿ ಮುದ್ನಾಳ್, ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ, ಪ್ರಮುಖರಾದ ದೇವಿಂದ್ರನಾಥ ನಾದ, ವೆಂಕಟರಡ್ಡಿ ಅಬ್ಬೆತುಮಕೂರ, ನಗರಸಭೆ ಸದಸ್ಯ ಹಣಮಂತ ಇಟಗಿ ವೀಣಾ ಮೋದಿ ಸೇರಿದಂತೆ ನೂರಾರು ಜನ ಇದ್ದರು.