ಜನರ ಸಹಕಾರ ಜವಾಬ್ದಾರಿ ಹೆಚ್ಚಿಸಿದೆ

ವಿಜಯವಾಣಿ ಸುದ್ದಿಜಾಲ ಯಾದಗಿರಿ
ನಗರದಲ್ಲಿ ಕಳೆದ ತಿಂಗಳು ನಡೆದ 4ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅಭೂತಪೂರ್ವ ಯಶಸ್ಸು ಕಂಡಿದ್ದು, ಜಿಲ್ಲೆಯ ಜನರ ಹಾಗೂ ಸಾಹಿತ್ಯಾಭಿಮಾನಿಗಳ ಸಹಕಾರ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಕಸಾಪ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ ತಿಳಿಸಿದರು.

ಶನಿವಾರ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸಾಹಿತ್ಯ ಪರಿಷತ್ತಿನಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ನಾಡು, ನುಡಿಯ ಜಾಗೃತಿ ವಿಷಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಶ್ರಮಿಸುತ್ತಿದ್ದು, ಇದಕ್ಕೆ 4 ಜಿಲ್ಲಾ ಸಾಹಿತ್ಯ ಸಮ್ಮೇಳನಗಳು ಯಶಸ್ವಿಯಾಗಿರುವುದೇ ತಾಜಾ ನಿದರ್ಶನ ಎಂದರು.

ಸುರಪುರ ತಾಲೂಕು ಕಸಾಪ ಅಧ್ಯಕ್ಷ ಶ್ರೀನಿವಾಸ ಜಾಲವಾದಿ ಮಾತನಾಡಿ, ಕಸಾಪ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ ಅವರು ಒಬ್ಬ ಉತ್ತಮ ಸಾಂಸ್ಕೃತಿಕ ಸಂಘಟಕರಾಗಿದ್ದಾರೆ. ಮೂಲತಃ ಅವರು ಸಾಹಿತಿ ಅಲ್ಲದಿದ್ದರೂ ಸಾಹಿತ್ಯವನ್ನು ಹಾಗೂ ಕವಿ, ಸಾಹಿತಿಗಳನ್ನು ಪೋಷಿಸುವ ಮನೋಭಾವ ಹೊಂದಿದ್ದಾರೆ. ಅಂತೆಯೇ ಅವರ ನೇತೃತ್ವದಲ್ಲಿ ನಡೆದ ಎಲ್ಲ ಕಾರ್ಯಕ್ರಮಗಳು ಯಶಸ್ಸಿಯಾಗುತ್ತಿವೆ ಎಂದು ಹೇಳಿದರು.

ವಡಿಗೇರಾ ಕಸಾಪ ಅಧ್ಯಕ್ಷ ಡಾ.ಗಾಳೆಪ್ಪ ಪೂಜಾರಿ ಮಾತನಾಡಿ, ಸಮ್ಮೇಳನ ಹಮ್ಮಿಕೊಂಡ ನಂತರ ಕೆಲ ಭಿನ್ನಾಭಿಪ್ರಾಯಗಳು ಕೇಳಿ ಬಂದರು ಸಹ ಪ್ರತಿಯೊಬ್ಬರು ಒಗ್ಗಟ್ಟಾಗಿ ಹೊಟ್ಟಿ ಅವರ ಬೆನ್ನ ಹಿಂದೆ ನಿಂತು ಕೆಲಸ ಮಾಡಿದ್ದಾರೆ. 2 ಬಾರಿ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ದಕ್ಷ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಸಿದ್ದಪ್ಪ ಹೊಟ್ಟಿ ಮುಂದಿನ ಚುನಾವಣೆಯಲ್ಲೂ ಕಸಾಪ ಜಿಲ್ಲಾಧ್ಯಕ್ಷರಾಗಿ ಮುಂದುವರೆಯಲಿ ಎಂದು ಆಶಿಸಿದರು.

4ನೇ ಸಾಹಿತ್ಯ ಸಮ್ಮೇಳನದ ಸವರ್ಾಧ್ಯಕ್ಷ ಸಿದ್ದರಾಮ್ ಹೊನಕಲ್, ಯಾದಗಿರಿ ಕಸಾಪ ಅಧ್ಯಕ್ಷ ಡಾ.ಭೀಮರಾಯ ಲಿಂಗೇರಿ, ಭಾರತ ಆಹಾರ ನಿಗಮದ ಸದಸ್ಯ ಖಂಡಪ್ಪ ದಾಸನ್, ಹಿರಿಯ ಪತ್ರಕರ್ತ ಅಯ್ಯಣ್ಣ ಹುಂಡೇಕಾರ ಮಾತನಾಡಿದರು. ಸುಭಾಶ ಆಯಾರಕರ್, ಸಾಹಿತಿ ಚಂದ್ರಕಾಂತ ಕರದಳ್ಳಿ, ಶಾಂತಮ್ಮ ಬೂದಿಹಾಳ ಇತರರು ಇದ್ದರು. ಡಾ.ಎಸ್.ಎಸ್.ನಾಯಕ ಸ್ವಾಗತಿಸಿದರು. ಡಾ.ಸುಭಾಶ್ಚಂದ್ರ ಕೌಲಗಿ ನಿರೂಪಿಸಿ, ವಂದಿಸಿದರು.

Leave a Reply

Your email address will not be published. Required fields are marked *