ಹಾಪ್ಕಾಮ್ಸ್ ಮಳಿಗೆ ಆರಂಭಕ್ಕೆ ಸೂಚನೆ

ವಿಜಯವಾಣಿ ಸುದ್ದಿಜಾಲ ಯಾದಗಿರಿ
ಜಿಲ್ಲೆಯಲ್ಲಿನ ನಿರುದ್ಯೋಗಿ ಯುವಕರಿಗೆ ಸ್ವಾವಲಂಬಿ ಜೀವನ ಕಲ್ಪಿಸುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆಯರುವ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸಲಹೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲೆಯ ತೋಟಗಾರಿಕೆ ಕ್ಷೇತ್ರ, ಸಸ್ಯಾಗಾರಗಳ ದಾಖಲಾತಿ, ಒತ್ತುವರಿ ಹಾಗೂ ನ್ಯಾಯಾಲಯದ ಪ್ರಕರಣಗಳ ಸಂಬಂಧಿತ ಇಲಾಖೆಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸರಿಯಾದ ಹೂಗುಚ್ಛ ಮಾರಾಟ ಮಳಿಗೆಗಳಿಲ್ಲ. ಮದುವೆ, ಸಭೆ-ಸಮಾರಂಭ ಸೇರಿದಂತೆ ಯಾವುದೇ ಕಾರ್ಯಕ್ರಮಗಳಿಗೂ ಬಗೆಬಗೆಯ ಹೂಗುಚ್ಛಗಳ ಬೇಡಿಕೆ ಇರುತ್ತದೆ. ಆದರೆ, ಜಿಲ್ಲೆಯ ಜನ ಪಕ್ಕದ ಜಿಲ್ಲೆಗಳಾದ ರಾಯಚೂರು ಮತ್ತು ಕಲಬುರಗಿಯಿಂದ ಹೂಗುಚ್ಛ ತರಿಸುವಂತಾಗಿದೆ ಎಂದರು.

ಉಪನಿದೇಶಕ ಮಲ್ಲಿಕಾರ್ಜುನ ಬಾಬು ಮಾತನಾಡಿ, 1972ರಲ್ಲಿ ಹತ್ತಿಕುಣಿ ಜಲಾಶಯ ನಿರ್ಮಾಣ ಸಂದರ್ಭ ಭೂಸ್ವಾಧೀನಗೊಂಡ ಜಮೀನಿನಲ್ಲಿ ತೋಟಗಾರಿಕೆ ಕ್ಷೇತ್ರ ಸ್ಥಾಪನೆಯಾಗಿದೆ. ಕ್ಷೇತ್ರದ ಒಟ್ಟು ವಿಸ್ತೀರ್ಣ 63.28 ಎಕರೆ ಇದ್ದು, ಇದರಲ್ಲಿ 18.19 ಎಕರೆ ಮಾತ್ರ ತೋಟಗಾರಿಕೆ ಇಲಾಖೆಯ ಹೆಸರಿಗಿದೆ. ಇಲಾಖೆಯ ಕಬ್ಜೆಯಲ್ಲಿರುವ ಉಳಿದ 45.09 ಎಕರೆ ಜಮೀನು ಇಲಾಖೆ ಹೆಸರಿಗೆ ಸೇರಿಸಬೇಕಿದೆ ಎಂದರು.

ಜಿಲ್ಲಾಧಿಕಾರಿಗಳು ಮಾತನಾಡಿ, ತೋಟಗಾರಿಕೆ ಇಲಾಖೆ ಹೆಸರಿಗೆ ಬದಲಾಯಿಸಲು ಮುಖ್ಯವಾಗಿ ಸರ್ವೇ ಕಾರ್ಯ ನಡೆಸಬೇಕು. ಈ ಪ್ರಕ್ರಿಯೆ ಒಂದು ತಿಂಗಳಲ್ಲಿ ಪೂರ್ಣಗೊಳಿಸಬೇಕು. ಅಲ್ಲದೆ, ಹತ್ತಿಕುಣಿ ಜಲಾಶಯ ಜಿಲ್ಲಾ ಕೇಂದ್ರಕ್ಕೆ ಹತ್ತಿರವಾಗಿರುವುದರಿಂದ ಸಾಕಷ್ಟು ಪ್ರವಾಸಿಗರು ಜಲಾಶಯಕ್ಕೆ ಭೇಟಿ ನೀಡುತ್ತಾರೆ. ಆದ್ದರಿಂದ ಪ್ರವಾಸೋದ್ಯಮ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಪರಸ್ಪರ ಸಹಕಾರದಲ್ಲಿ ಈ ಕ್ಷೇತ್ರವನ್ನು ಅಭಿವೃದ್ಧಿಪಡಿಸಬೇಕು ಎಂದು ಹತ್ತಿಕುಣಿ ತೋಟಗಾರಿಕೆ ಕ್ಷೇತ್ರದ ಸಹಾಯಕ ನಿರ್ದೇಶಕ ಸಮಿಯುದ್ದೀನ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಜನೀಕಾಂತ ಅವರಿಗೆ ಸೂಚಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆಯ ಬಸವಸಾಗರ ಜಲಾಶಯ ನಿಮರ್ಾಣದಡಿಯಲ್ಲಿ ಭೂಸ್ವಾಧೀನಗೊಂಡ ಜಮೀನಿನಲ್ಲಿ ತೋಟಗಾರಿಕೆ ಇಲಾಖೆಗೆ 93.34 ಎಕರೆ ಹಂಚಿಕೆ ಮಾಡಲಾಗಿದೆ. ಆದರೆ, ಪಹಣಿಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಎಂದು ಬರುತ್ತಿರುವುದರಿಂದ ಈ ಜಮೀನನ್ನು ತೋಟಗಾರಿಕೆ ಇಲಾಖೆ ಹೆಸರಿಗೆ ಬದಲಾಯಿಸಿಕೊಡುವಂತೆ ಸಹಾಯಕ ಆಯುಕ್ತರಿಗೆ ಪತ್ರ ಬರೆಯಲು ನಿರ್ದೇಶಿಸಿದರು. ತದನಂತರ ಸಹಾಯಕ ಆಯುಕ್ತರು, ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಮತ್ತು ವಿಶೇಷ ಭೂಸ್ವಾಧೀನಾಧಿಕಾರಿಗಳಿಗೆ ಪತ್ರ ಬರೆಯಲಿ. ಅವರ ಪ್ರತಿಕ್ರಿಯೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಯಾದಗಿರಿ ಜಿಲ್ಲಾ ಕಚೇರಿ ನರ್ಸರಿಯಲ್ಲಿ ಸುಮಾರು 40 ವರ್ಷಗಳಿಂದ ತೋಟಗಾರಿಕೆ ಇಲಾಖೆಯ ಚಟುವಟಿಕೆಗಳು ನಡೆಯುತ್ತಿವೆ. ಆದರೆ, ಈ ಆಸ್ತಿಯಲ್ಲಿ ನಗರಸಭೆಯ ಆಸ್ತಿ ಎಂದು ನಮೂದಾಗಿರುವುದರಿಂದ ಅಭಿವೃದ್ಧಿಗಾಗಿ ಅನುದಾನ ಖರ್ಚು ಮಾಡಲು ತೊಂದರೆಯಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿದರ್ೇಶಕರಾದ ಮಲ್ಲಿಕಾರ್ಜುನ ಬಾಬು ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಆಗ ಜಿಲ್ಲಾಧಿಕಾರಿಗಳು ಮಾತನಾಡಿ, ಈ ಜಾಗವನ್ನು ತೋಟಗಾರಿಕೆ ಇಲಾಖೆಗೆ ವಗರ್ಾವಣೆ ಮಾಡಲು ಸೂಕ್ತ ಕ್ರಮ ಕೈಗೊಂಡು, ಶೀಘ್ರ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಪೌರಾಯುಕ್ತ ಸಂಗಪ್ಪ ಉಪಾಸೆ ಅವರಿಗೆ ಸೂಚಿಸಿದರು.

ಅದೇ ರೀತಿ ವಡಗೇರಾ ತಾಲೂಕಿನ ಉಳ್ಳೇಸೂಗೂರ ತೋಟಗಾರಿಕೆ ಕ್ಷೇತ್ರದ ಪಹಣಿಯಲ್ಲಿ ರಾಜ್ಯಪಾಲರು ಕನರ್ಾಟಕ ಸರ್ಕಾರ ಎಂದು ನಮೂದಾಗಿರುವುದನ್ನು ತೋಟಗಾರಿಕೆ ಇಲಾಖೆ ಕರ್ನಾಟಕ ಸರ್ಕಾರ ಎಂದು ಬದಲಾಯಿಸಲು ಕ್ರಮ ಕೈಗೊಳ್ಳಬೇಕು. ಉಳಿದ ಶಹಾಪುರ ಮತ್ತು ಸುರಪುರ ತಾಲೂಕು ಕಚೇರಿ ನರ್ಸರಿಗಳನ್ನು ಸಹ ಸೂಕ್ತ ದಾಖಲೆಗಳನ್ನು ಸಂಗ್ರಹಿಸಿ, ಇಲಾಖೆಗೆ ವಗರ್ಾಯಿಸುವಂತೆ ಸಂಬಂಧಪಟ್ಟ ತಹಶೀಲ್ದಾರರಿಗೆ ನಿರ್ದೇಶಿಸಿದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತ ಡಾ.ಬಿ.ಎಸ್.ಮಂಜುನಾಥ ಸ್ವಾಮಿ, ತಹಶೀಲ್ದಾರ್ರಾದ ಚನ್ನಮಲ್ಲಪ್ಪ ಘಂಟಿ, ಸುರೇಶ ಅಂಕಲಗಿ, ಸಂಗಮೇಶ ಜಿಡಗೆ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ವೈಜಂತಾ ಎಂ.ಕದಮ್, ಆಂಜನೇಯ, ನಾರಾಯಣಪುರ ತೋಟಗಾರಿಕೆ ಕ್ಷೇತ್ರದ ಸಹಾಯಕ ನಿರ್ದೇಶಕ ಬಸನಗೌಡ ಪಾಟೀಲ್, ಶಹಾಪುರ ಹಿರಿಯ ಸಹಾಯಕ ನಿರ್ದೇಶಕ ಶಶಿಕಾಂತ, ಸುರಪುರ ಹಿರಿಯ ಸಹಾಯಕ ನಿದರ್ೇಶಕ ಭೀಮರಾವ್ ಸಭೆಯಲ್ಲಿದ್ದರು.