ಮೈಸೂರು ಯುವರಾಜ ಯದುವೀರ ಶ್ರೀಕಂಠದತ್ತ ಒಡೆಯರ್ ಹಂಪಿಗೆ ಭೇಟಿ

ಹೊಸಪೇಟೆ: ಮೈಸೂರು ಯುವರಾಜ ಯದುವೀರ ಶ್ರೀಕಂಠದತ್ತ ಒಡೆಯರ್ ಅವರು ಐತಿಹಾಸಿಕ ಹಂಪಿಗೆ ಭಾನುವಾರ ಭೇಟಿ ನೀಡಿ ಸ್ಮಾರಕಗಳನ್ನು ವೀಕ್ಷಣೆ ಮಾಡಿದರು. ಕಮಲಾಪುರ ಹಾಗೂ ತಳವಾರಘಟ್ಟ ರಸ್ತೆ ಮೂಲಕ ಬ್ಯಾಟರಿ ಚಾಲಿತ ವಾಹನ ನಿಲ್ದಾಣಕ್ಕೆ ಆಗಮಿಸಿದ ಒಡೆಯರ್, ಗೆಜ್ಜಲ ಮಂಟಪ, ಕುದರೆ ಗೊಂಬೆ ಮಂಟಪ, ವಿಠಲ ಬಜಾರ್, ಪುಷ್ಕರಣಿ, ಪ್ರಸಿದ್ಧ ವಿಜಯವಿಠಲ ದೇವಸ್ಥಾನದಲ್ಲಿ ಕಲ್ಲಿನ ರಥ ಮುಂದೆ ನಿಂತ ಫೋಟೋ ಕ್ಲಿಕ್ಕಿಸಿಕೊಂಡರು. ನಂತರ ಸಂಗೀತ ಮಂಟಪಕ್ಕೆ ತೆರಳಿದ ಅವರು, ಸಪ್ತಸ್ವರ ಕಂಬಗಳಿಂದ ನಾದ ಆಲಿಸಿ ಖಷಿ ಪಟ್ಟರು. ನಂತರ ತುಂಗಭದ್ರಾ ನದಿ ತೀರದಲ್ಲಿರುವ ಪುರಂದರ ಮಂಟಪ ವೀಕ್ಷಣೆ ಮಾಡಿದರು.