ಸುಂಟಿಕೊಪ್ಪ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಸುಂಟಿಕೊಪ್ಪದಲ್ಲಿ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.
ಬಿಜೆಪಿ ಸುಂಟಿಕೊಪ್ಪ ನಗರಾಧ್ಯಕ್ಷ ಧನುಕಾವೇರಪ್ಪ ಮತ್ತು ಸೋಮವಾರಪೇಟೆ ಮಂಡಳ ಒಬಿಸಿ ಅಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್ ಸೇರಿದಂತೆ ಕಾರ್ಯಕರ್ತರು ಪಟ್ಟಣದ ಕನ್ನಡ ವೃತ್ತದಲ್ಲಿ ಒಡೆಯರ್ ಅವರಿಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸಿ ಬರಮಾಡಿಕೊಂಡರು. ಪ್ರಧಾನಿ ನರೇಂದ್ರ ಮೋದಿ, ಹಿರಿಯ ನಾಯಕರ ಪರ ಜಯಘೋಷ ಮೊಳಗಿಸಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್‌ನ ಮಾಜಿ ಉಪಾಧ್ಯಕ್ಷ ಡಾ.ಶಶಿಕಾಂತ ರೈ, ನಿರ್ದೇಶಕಿ ಲೀಲಾವತಿ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಂಕರನಾರಾಯಣ, ಹಿರಿಯ ಮುಖಂಡ ವೈ.ಎಂ.ಕರುಂಬಯ್ಯ, ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಬಿ.ಕೆ.ಪ್ರಶಾಂತ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವಿಘ್ನೇಶ್, ಸುಂಟಿಕೊಪ್ಪ ಗ್ರಾಪಂ ಸದಸ್ಯ ಬಿ.ಎಂ.ಸುರೇಶ್, ಕೆದಕಲ್ ಗ್ರಾಪಂ ಸದಸ್ಯೆ ಪಾರ್ವತಿ ಸೋಮಯ್ಯ, ಗ್ರಾಪಂ ಮಾಜಿ ಅಧ್ಯಕ್ಷರಾದ ಬಿ.ಐ.ಭವಾನಿ, ಸೋಮಯ್ಯ, ಮಾಜಿ ಉಪಾಧ್ಯಕ್ಷ ಬಿ.ಕೆ.ಮೋಹನ್, 7ನೇ ಹೊಸಕೋಟೆ ಗ್ರಾಪಂ ಮಾಜಿ ಅಧ್ಯಕ್ಷ ರಮೇಶ್ ಇತರರಿದ್ದರು.