ಆಹ್ವಾನಿತ ತಂಡಗಳ ಯಕ್ಷ ತ್ರಿವಳಿ ಯಕ್ಷೋತ್ಸವ

YAKSHAGANA
Published on

ಕೋಟ: ಕರ್ನಾಟಕ ಯಕ್ಷಗಾನ ಅಕಾಡೆಮಿ ಮತ್ತು ಕೋಟದ ಸಾಲಿಗ್ರಾಮ ಮಕ್ಕಳ ಮೇಳವು ಸುವರ್ಣ ಪರ್ವದ ಸರಣಿ ಕಾರ್ಯಕ್ರಮವಾಗಿ ಆಹ್ವಾನಿತ ತಂಡಗಳ ಯಕ್ಷ ತ್ರಿವಳಿ ಯಕ್ಷೋತ್ಸವವನ್ನು ಏ.17, 18ರಂದು ಕೋಟ ಮೂರುಕೈ ಹಂದೆ ಮಹಾವಿಷ್ಣು ವಿನಾಯಕ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.

17ರಂದು ಸಂಜೆ 5.30ಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆಯಲ್ಲಿ ಕುಂದಾಪುರ ಕ್ಷೇತ್ರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ, ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್, ಉಡುಪಿ ಯಕ್ಷಗಾನ ಕಲಾರಂಗದ ಮುರಳಿ ಕಡೆಕಾರ್, ಕೋಟತಟ್ಟು ಪಂಚಾಯಿತಿ ಅಧ್ಯಕ್ಷ ಸತೀಶ್ ಬಾರಿಕೆರೆ, ಸಾಲಿಗ್ರಾಮ ಮಕ್ಕಳ ಮೇಳ ಸ್ಥಾಪಕ ನಿರ್ದೇಶಕ ಎಚ್.ಶ್ರೀಧರ ಹಂದೆ, ಅಧ್ಯಕ್ಷ ಬಲರಾಮ ಕಲ್ಕೂರ, ಕಾರ್ಯಾಧ್ಯಕ್ಷ ಮಹೇಶ ಉಡುಪ, ಉಪಾಧ್ಯಕ್ಷ ಜನಾರ್ದನ ಹಂದೆ, ಅಕಾಡೆಮಿ ರಿಜಿಸ್ಟ್ರಾರ್ ನಮ್ರತಾ ಎನ್., ಸದಸ್ಯ ಸಂಚಾಲಕ ರಾಘವ ಎಚ್. ಉಪಸ್ಥಿತರಿರುವರು. ಸಾಧಕ, ಗುರು ದೇವದಾಸ ಕೂಡ್ಲಿ ಅವರಿಗೆ ಸುವರ್ಣ ಪುರಸ್ಕಾರ ನೀಡಿ ಗೌರವಿಸಲಾಗುವುದು.

18ರಂದು ಸಮಾರೋಪ ಸಮಾರಂಭದಲ್ಲಿ ಬ್ರಹ್ಮಾವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಮಚಂದ್ರ ಐತಾಳ, ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಯಕ್ಷ ವಿಮರ್ಶಕ ಬೇಳೂರು ರಾಘವ ಶೆಟ್ಟಿ, ಯಕ್ಷ ಸಂಘಟಕ ಸುದರ್ಶನ ಉರಾಳ, ಹಂದೆ ದೇವಸ್ಥಾನದ ಆನುವಂಶಿಕ ಮೊಕ್ತೇಸರ ಅಮರ ಹಂದೆ ಉಪಸ್ಥಿತಿತರಿರುವರು. ಮಕ್ಕಳ ಕ್ಷೇತ್ರದ ಯಕ್ಷ ಸಾಧಕ ಶ್ರೀಧರ ಹೆಬ್ಬಾರ್ ಕರ್ಜೆ ಅವರನ್ನು ಗೌರವಿಸಲಾಗುವುದು.

ಕೋಟ ಕಲಾ ಪೀಠಗದಿಂದ ಬಡಗುತಿಟ್ಟು ಮೈಂದ ದ್ವಿವಿಧ ಕಾಳಗ, ಕಿದಿಯೂರು ಯಕ್ಷ ಆರಾಧನಾದಿಂದ ಬಡಗುತಿಟ್ಟು ಶಶಿಪ್ರಭಾ ಪರಿಣಯ, ಮಂಗಳೂರು ಮಯೂರ ಪ್ರತಿಷ್ಠಾನದಿಂದ ತೆಂಕುತಿಟ್ಟು ಶರಣ ಸೇವಾ ರತ್ನ ಎಂಬ ಯಕ್ಷ ತ್ರಿವಳಿ ಪ್ರದರ್ಶನಗೊಳ್ಳಲಿದೆ ಎಂದು ಸಾಲಿಗ್ರಾಮ ಮಕ್ಕಳ ಮೇಳ ಕಾರ್ಯದರ್ಶಿ ಸುಜಯೀಂದ್ರ ಹಂದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net