ಯಕ್ಷಗಾನದತ್ತ ಮಕ್ಕಳ ಆಕರ್ಷಣೆ ಉತ್ತಮ ಬೆಳವಣಿಗೆ : ಪ್ರತಿಭಾ ಎಲ್. ಸಾಮಗ ಶ್ಲಾಘನೆ

New Project (24)
Published on

ಗುರುಪುರ: ಪ್ರಸಕ್ತ ಕಾಲಘಟ್ಟದಲ್ಲಿ ಮಹಿಳೆಯರು ಕೂಡ ಯಕ್ಷಗಾನದಲ್ಲಿ ಮುಂಚೂಣಿಯಲ್ಲಿದ್ದು, ಕಲಾಸೇವೆಗೈಯುತ್ತಿದ್ದಾರೆ. ಮಕ್ಕಳು ಯಕ್ಷಗಾನದತ್ತ ಆಕರ್ಷಿತರಾಗುತ್ತಿರುವುದು ಉತ್ತಮ ಬೆಳವಣಿಗೆ. ಯಕ್ಷಗಾನದಲ್ಲಿ ಮಕ್ಕಳು ತೊಡಗಿಸಿಕೊಳ್ಳುವಲ್ಲಿ ಮಹಿಳಾ ಕೇಂದ್ರದ ಶ್ರಮವಿದೆ. ನೇಪಥ್ಯಕ್ಕೆ ಸರಿದ ಮತ್ತು ಸಾಧನೆಗೈದ ಮಹಿಳಾ ಕಲಾವಿದರನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯ ಎಂದು ಹಿರಿಯ ನೃತ್ಯ ವಿದುಷಿ ಪ್ರತಿಭಾ ಎಲ್. ಸಾಮಗ ಹೇಳಿದರು.

ಸುರತ್ಕಲ್ ಬಂಟರ ಭವನದಲ್ಲಿ ಶನಿವಾರ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಕೇಂದ್ರೀಯ ಮಹಿಳಾ ಘಟಕ ಮಂಗಳೂರು ಇದರ 8ನೇ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಕುಂತಲಾ ಆರ್.ಭಟ್, ಚಂದ್ರಕಲಾ ಬಿ.ಶೆಟ್ಟಿ, ಭಾರತಿ ಜಿ., ಮಮತಾ ಹೆಗ್ಡೆ, ಸತ್ಯವತಿ ಡಿ.ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪಟ್ಲ ಸತೀಶ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಜಯಲಕ್ಷ್ಮೀ ಕಾರಂತ ಮಂಗಲ್ಪಾಡಿ, ಜ್ಯೋತಿ ಎಸ್.ಶೆಟ್ಟಿ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು. ಚೈತ್ರಾ ಎಚ್.ರಾವ್, ವಿದುಷಿ ವೈಷ್ಣವಿ ಎಸ್.ರಾವ್, ವಿದುಷಿ ಮೈತ್ರಿ ಭಟ್ ಅವರನ್ನು ಯಕ್ಷಧ್ರುವ ಪುರಸ್ಕಾರ ನೀಡಿ ಗೌರವಿಸಲಾಯಿತು.

ಪದ್ಮಪ್ರಸಾದ್ ಜೈನ್, ದೀಪಕ್ ಶೆಟ್ಟಿ ಲಿಂಗಮಾರುಗುತ್ತು, ವಿದ್ಯಾ.ಆರ್, ಪೂರ್ಣಿಮಾ ಪಿ.ರಾವ್ ಪೇಜಾವರ, ಸುಜಾತಾ ಡಿ.ಶೆಟ್ಟಿ ಹೊಸಬೆಟ್ಟು, ಚೈತ್ರಾ ಶೆಟ್ಟಿ, ಕೇಂದ್ರೀಯ ಮಹಿಳಾ ಘಟಕ ಗೌರವಾಧ್ಯಕ್ಷೆ ಆರತಿ ಆಳ್ವ, ಅಧ್ಯಕ್ಷೆ ಪೂರ್ಣಿಮಾ ವೈ.ರೈ, ಕಾರ್ಯದರ್ಶಿ ಪೂರ್ಣಿಮಾ ಶಾಸ್ತ್ರಿ, ಕೋಶಾಧಿಕಾರಿ ಭಾರತಿ ಎಸ್.ರಾವ್, ಸಂಚಾಲಕಿ ನಿವೇದಿತಾ ಎನ್.ಶೆಟ್ಟಿ ಉಪಸ್ಥಿತರಿದ್ದರು. ಪೂರ್ಣಿಮಾ ಸ್ವಾಗತಿಸಿದರು. ಆರತಿ ಆಳ್ವ ವಂದಿಸಿದರು. ಸಾಯಿಸುಮಾ ನಾವಡ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net