ಸುಜಯೀಂದ್ರ ಹಂದೆಗೆ ಯಕ್ಷಗಾನ ಅಕಾಡೆಮಿ ಗೌರವ

hande
ಅಕಾಡೆಮಿ ಗೌರವ
Published on

ಕೋಟ: ಕೋಟದ ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕ, ಉಪನ್ಯಾಸಕ ಸುಜಯೀಂದ್ರ ಹಂದೆ ಎಚ್. ಅವರ ಯಕ್ಷಗಾನ ಪ್ರಬಂಧ ಸಂಕಲನ ಯಕ್ಷ ದೀವಟಿಕೆ ಕೃತಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ 2023ರ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಘೊಷಿಸಿದೆ. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಅವರು ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದು, ಕವಿ, ಕತೆಗಾರ, ಲೇಖಕ, ಗಮಕಿಯಾಗಿ ಗುರುತಿಸಿಕೊಂಡಿದ್ದಾರೆ. ನವಂಬರ್ ಎರಡನೇ ವಾರ ಮಂಗಳೂರು ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನಮಾಡಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net