

ಸುಬ್ರಹ್ಮಣ್ಯ: ಶ್ರೀ ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ ಸುಬ್ರಹ್ಮಣ್ಯ ಇದರ ಆಡಳಿತಕ್ಕೊಳಪಟ್ಟ ಬಿಳಿನೆಲೆಯ ಶ್ರೀ ವೇದವ್ಯಾಸ ವಿದ್ಯಾಲಯ ಮತ್ತು ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ 2024-25ನೇ ಸಾಲಿನ ಯಕ್ಷಗಾನ ತರಗತಿ ವಿದ್ಯಾರ್ಥಿಗಳ ರಂಗಪ್ರವೇಶ ಮತ್ತು ಯಕ್ಷಗಾನ ಪ್ರದರ್ಶನ ಫೆ.15ರಂದು ನಡೆಯಲಿದ್ದು, ಆಮಂತ್ರಣವನ್ನು ಭಾನುವಾರ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅರ್ಚಕ ವೆಂಕಟೇಶ್ವರ ಭಟ್ ಬಿಡುಗಡೆಗೊಳಿಸಿದರು.
ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಶ್ರೀಕೃಷ್ಣ ಶರ್ಮ, ಬಿಳಿನೆಲೆ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ಚಂದ್ರ ಕಳಿಗೆ, ಯಕ್ಷಗಾನ ಗುರು ಈಶ್ವರ ಪ್ರಸಾದ್ ನಿಡ್ಲೆ, ನಿವೃತ್ತ ಪ್ರಾಂಶುಪಾಲ ಕೆ.ರಾಮ ಶರ್ಮ ಕಳಂದೂರು, ಪ್ರೌಢಶಾಲಾ ಮುಖ್ಯಶಿಕ್ಷಕ ಸತ್ಯಶಂಕರ ಭಟ್, ವೇದವ್ಯಾಸ ವಿದ್ಯಾಲಯದ ಮುಖ್ಯಶಿಕ್ಷಕ ಪ್ರಶಾಂತ್ ಬಿ.ಉಪಸ್ಥಿತರಿದ್ದರು.